ಬೆಂಗಳೂರು:ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಜನೆಗೆ ಗಮನಹರಿಸಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ 59 ಯೋಜನೆಗಳ 3,455.39 ಕೋಟಿ ರೂ. ಬಂಡವಾಳ ಹೂಡಿಕೆಗೆ ಅನುಮೋದನೆ ನೀಡಿದೆ. ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ಆರ್. ನಿರಾಣಿ ಅಧ್ಯಕ್ಷತೆಯಲ್ಲಿ ನಡೆದ 137ನೇ ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಒಟ್ಟು 18,567 ಜನರಿಗೆ ಉದ್ಯೋಗ ಅವಕಾಶಗಳು ಲಭಿಸಲಿದೆ. ಅನುಮೋದನೆ ನೀಡಿರುವ ಪ್ರಸ್ತಾವನೆಗಳಲ್ಲಿ 50 ಕೋಟಿ ರೂ. ಅಧಿಕ ಹೆಚ್ಚು ಬಂಡವಾಳ ಹೂಡಿಕೆಯ 11 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಸಮಿತಿಯು ಅನುಮೋದನೆ ನೀಡಿದೆ. ಇದರಿಂದ 2186.70 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ 10,559 ಜನರಿಗೆ ಉದ್ಯೋಗ ಲಭಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್ ನಿರಾಣಿ ತಿಳಿಸಿದ್ದಾರೆ.
15 ಕೋಟಿ ರೂ. ಯಿಂದ 50 ಕೋಟಿ ರೂ. ಒಳಗಿನ ಬಂಡವಾಳ ಹೂಡಿಕೆಯ 46 ಹೊಸ ಯೋಜನೆಗಳಿಗೆ ಸಮಿತಿ ಹಸಿರು ನಿಶಾನೆ ನೀಡಿದೆ. ಒಟ್ಟು 1049.19 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ ಅಂದಾಜು 8,008 ಜನರಿಗೆ ಉದ್ಯೋಗ ಸೃಜನೆಯಾಗಲಿದೆ. ಹೆಚ್ಚುವರಿ ಬಂಡವಾಳ ಹೂಡಿಕೆಯ ಎರಡು ಯೋಜನೆಗಳಿಗೆ ಏಕಗವಾಕ್ಷಿ ಸಮಿತಿಯು ಅನುಮೋದಿಸಿದ್ದು, 219.50 ಕೋಟಿ ರೂ. ಹೂಡಿಕೆಯಾಗಲಿದೆ.ಅನುಮೋದನೆ ನೀಡಿರುವ ಪ್ರಸ್ತಾವನೆಗಳು:
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + thirteen =
Remember me
