ಬೆಂಗಳೂರು:ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿ ಆಧಾರಿತ ಸಂಸ್ಥೆಗಳನ್ನು ಸ್ಥಾಪಿಸಲು ಸೂಕ್ತ ನಿಯಮ ರೂಪಿಸಲು ಪ್ರಯತ್ನಿಸುವುದಾಗಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ರಾಜ್ಯದಲ್ಲಿ ಕೃಷಿ ಕ್ಷೇತ್ರದ ಸುಧಾರಣೆ ಕುರಿತು ಎಫ್ಐಸಿಸಿಐ ಪದಾಧಿಕಾರಿಗಳು ಹಾಗೂ ಕೈಗಾರಿಕೋದ್ಯಮಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿ ಮಾತನಾಡಿದರು.
ರಾಜ್ಯದ ಕೃಷಿ ಅಭಿವೃದ್ಧಿಯಲ್ಲಿ ರೈತರು, ಅಧಿಕಾರಿಗಳು, ಉದ್ದಿಮೆದಾರರು ಹಾಗೂ ವಿಜ್ಞಾನಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಲು ರಾಜ್ಯದಲ್ಲಿ ಸೂಕ್ತ ವಾತಾವರಣ ನಿರ್ಮಿಸಲು ಎಲ್ಲ ಪ್ರಯತ್ನ ಮಾಡುವುದಾಗಿ ಹೇಳಿದರು.
‘ನಮ್ಮ ರಾಜ್ಯ ನಮ್ಮ ಕೃಷಿ’ ಸಮ್ಮೇಳನ ಆಯೋಜನೆ, ಕೃಷಿ ಉತ್ಪಾದನೆ ಮತ್ತು ಮಾರುಕಟ್ಟೆ ವ್ಯವಸ್ಥೆ, ಮೌಲ್ಯವರ್ಧನೆ, ಕೃಷಿ ಯಾಂತ್ರಿಕರಣಗಳ ಕುರಿತು ಸಚಿವರು ವಿಸೃತ ಚರ್ಚೆ ನಡೆಸಿದರು.
ರಾಜ್ಯದಲ್ಲಿ ಯಾಂತ್ರಿಕರಣ ಯೋಜನೆಯನ್ನು ಒಳಪಡಿಸುವಾಗ ಕರ್ನಾಟಕದಲ್ಲಿಯೇ ಯಂತ್ರಗಳನ್ನು ತಯಾರಿಸುವ ಉದ್ದಿಮೆದಾರರಿಗೆ ಆದ್ಯತೆ ನೀಡುವುದು, ಆಂಧ್ರ ಪ್ರದೇಶದ ಮಾದರಿಯಂತೆ ರಾಜ್ಯದಲ್ಲಿ ಗುಣಮಟ್ಟದ ಬೀಜಗಳನ್ನು ಉತ್ಪಾದಿಸಲು ಹಾಗು ಉತ್ಪಾದನೆ ಹೆಚ್ಚಿಸಲು ವಿದೇಶಗಳಿಂದ ಬೀಜಗಳನ್ನು ಆಮದು ಮಾಡಿಕೊಳ್ಳಲು ಪ್ರಸ್ತುತವಿರುವ ಮಾರ್ಗಸೂಚಿಗಳನ್ನು ಸುಲಭಗೊಳಿಸುವ ಕುರಿತು ಚರ್ಚಿಸಿದರು.
ಉದ್ದಿಮೆದಾರರು ರಾಜ್ಯದಲ್ಲಿ ಉದ್ದಿಮೆ ಪ್ರಾರಂಭಿಸಲು ಶೇ 70 ರಷ್ಟು ಹಣ ಭೂಮಿ ಖರೀದಿಸಲು ವೆಚ್ಚವಾಗುವುದರಿಂದ ವಿಶೇಷವಾಗಿ ರಾಜ್ಯ ಸರ್ಕಾರವು ಬೀಜ ಸಂಶೋಧನೆ, ಬೀಜ ಸಂಸ್ಕರಣೆ ಕೃಷಿ ಉಪಕರಣಗಳ ತಯಾರಿಕೆಗೆ ಆದ್ಯತೆಯ ಮೇಲೆ ಕಡಿಮೆ ದರದಲ್ಲಿ ಭೂಮಿ ಒದಗಿಸುವ ನೀತಿ ಜಾರಿ ಕುರಿತು ಸಮಾಲೋಚನೆ ನಡೆಸಿದರು.
ರಾಜ್ಯದಲ್ಲಿ ಈಗಾಗಲೇ ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಒದಗಿಸಿರುವ 150 ಕಬ್ಬು ಕತ್ತರಿಸುವ ಯಂತ್ರಗಳನ್ನು ಒದಗಿಸಿದ್ದು ಬಹುತೇಕ ರೈತರು ಇಲ್ಲಿಯವರೆಗೆ ನೋಂದಣಿ ಶುಲ್ಕ ದುಬಾರಿಯಾಗಿರುವುದರಿಂದ ಈ ಶುಲ್ಕ ಕಡಿತಗೊಳಿಸುವುದರ ಬಗ್ಗೆಯೂ ಚರ್ಚಿಸಲಾಯಿತು.
ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ವಿರುವುದರಿಂದ ದೆಹಲಿ, ಚೆನೈ, ಮುಂಬೈನಲ್ಲಿರುವಂತೆ ಬೆಂಗಳೂರಿನಲ್ಲಿ ರೀಜನಲ್ ಪ್ಲಾಂಟ್ ಕ್ವಾರಟೈನ್ ಸ್ಥಾಪನೆ ಮಾಡಿ ವಿದೇಶಗಳಿಂದ ಉತ್ತಮ ತಳಿಯ ಬೀಜಗಳನ್ನು ಆಮದು ಮಾಡಿಕೊಳ್ಳಲು ನಿಯಮಗಳನ್ನು ಸಡಿಲಗೊಳಿಸುವ ಬಗ್ಗೆ ಚರ್ಚೆ ನಡೆಸಲಾಯಿತು.ಎಫ್ಐಸಿಸಿಐ ಮುಖ್ಯಸ್ಥ ಶಾಜ್ ಮಂಗಲಂ ಹಾಗೂ ರವೀಂದ್ರ ಅಗರವಾಲ್ ಮತ್ತಿತರರು ಉಪಸ್ಥಿತರಿದ್ದರು.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:eighteen − one =
Remember me
