ಬೆಂಗಳೂರು:ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ಅವರ ಮೊಮ್ಮಗ ಅಮಾರ್ತ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಅವರ ನಿಶ್ಚಿತಾರ್ಥ ಇಂದು ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಅದ್ದೂರಿಯಾಗಿ ನೆರವೇರುತ್ತಿದೆ.
ಇಬ್ಬರು ರಾಜಕಾರಣಿಗಳ ಕುಟುಂಬಸ್ಥರ ಈ ಸಮಾರಂಭಕ್ಕೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಕೂಡ ತೆರಳಿ, ಶುಭ ಹಾರೈಸಿದ್ದಾರೆ. ನಗರದ ತಾಜ್ ಹೋಟೆಲ್​ನಲ್ಲಿ ವಿಜೃಂಭಣೆಯಿಂದ ನಡೆಯುತ್ತಿರುವ ಈ ಸಮಾರಂಭಕ್ಕೆ ಆಹ್ವಾನಿತ ಗಣ್ಯರಿಗಷ್ಟೇ ಪ್ರವೇಶವಿದ್ದು, ಈಗಾಗಲೇ ಸಾಕಷ್ಟು ಮಂದಿ ಆಗಮಿಸಿ ಶುಭ ಹಾರೈಸಿದ್ದಾರೆ.
ಇವರಿಬ್ಬರ ನೆಂಟಸ್ತನದ ಕುರಿತು ಬಹಳ ಹಿಂದೆಯೇ ಮಾಹಿತಿ ಬಹಿರಂಗಗೊಂಡಿದ್ದು, ಇಂದು ನಿಶ್ಚಿತಾರ್ಥ ನೆರವೇರುತ್ತಿದೆ. ಸಮಾರಂಭದಲ್ಲಿ ಎಸ್​.ಎಂ.ಕೃಷ್ಣ, ಡಿ.ಕೆ.ಶಿವಕುಮಾರ್​ ಕುಟುಂಬಸ್ಥರು, ಆಪ್ತರ ಜತೆಗೆ ಸಾಕಷ್ಟು ವಿವಿಧ ರಂಗದ ಸಾಕಷ್ಟು ಗಣ್ಯರು ಕೂಡ ಉಪಸ್ಥಿತರಿದ್ದಾರೆ.





ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − five =
Remember me
