ಬೆಂಗಳೂರು:ಕೇಂದ್ರ ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುವ ದೇಶದ ಅತಿ ದೊಡ್ಡ ಇಂಜಿನಿಯರಿಂಗ್​ ಸಂಸ್ಥೆಗಳಲ್ಲಿ ಒಂದಾಗಿರುವ ಭಾರತ್​ ಹೆವಿ ಎಲೆಕ್ಟ್ರಿಕಲ್ಸ್​ ಲಿಮಿಟೆಡ್​(ಬಿಎಚ್​ಇಎಲ್​) 83ಕ್ಕೂ ಹೆಚ್ಚು ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಾವಿರಾರು ಉದ್ಯೋಗಿಗಳನ್ನು ಹೊಂದಿರುವ ಬಿಎಚ್​ಇಎಲ್​ನಲ್ಲಿ ಅನುಭವಿ ಇಂಜಿನಿಯರ್​ ಮತ್ತು ಮೇಲ್ವಿಚಾರಕ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು, ಇಂಜಿನಿಯರ್​ ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಲು ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ:ಇಂಜಿನಿಯರ್​-12, ಮೇಲ್ವಿಚಾರಕರು- 20.ಶೈಕ್ಷಣಿಕ ಅರ್ಹತೆ:ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಅಭ್ಯರ್ಥಿಗಳು ಡಿಪ್ಲೊಮಾ/ಬಿಇ/ಬಿಟೆಕ್​ ಅಥವಾ ತತ್ಸಮಾನ ಪದವಿ ಹೊಂದಿರಬೇಕು.ವಯೋಮಿತಿ:ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಅನ್ವಯವಾಗುವಂತೆ ವಯೋಮಿತಿ 45 ವರ್ಷದ ಒಳಗಿರಬೇಕು.
ಅರ್ಜಿ ಸಲ್ಲಿಕೆ ಮತ್ತು ಆಯ್ಕೆ ವಿಧಾನ:ಎಲ್ಲ ಅಭ್ಯರ್ಥಿಗಳು (ಎಸ್​ ಸಿ/ ಎಸ್​ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳನ್ನು ಹೊರತುಪಡಿಸಿ) 200 ರೂ. ಶುಲ್ಕವನ್ನು ಕ್ಯುಆರ್​ ಕೋಡ್​ ಮೂಲಕ ಪಾವತಿಸಬೇಕಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಚ್​ಇಎಲ್​ ಅಧಿಕೃತ ವೆಬ್​ಸೈಟ್​ಗೆ ಹೋಗಿ ಅಧಿಸೂಚನೆಯಲ್ಲಿ ನೀಡಲಾದ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸತಕ್ಕದ್ದು. ಶಾರ್ಟ್​ಲಿಸ್ಟ್​ ಮಾಡಿದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನ ಹಾಗೂ ಮೆರಿಟ್​ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ವೇತನ:ಇಂಜಿನಿಯರ್​ ಹುದ್ದೆಗೆ ಪ್ರತಿ ಮಾಸಿಕ 78000/ ರೂ. ಹಾಗೂ ಮೇಲ್ವಿಚಾರಕರ ಹುದ್ದೆಗೆ 43550 ರೂ. ಮಾಸಿಕ ವೇತನ ನಿಗದಿಪಡಿಸಲಾಗಿದೆ.
ಅರ್ಹತಾ ಮಾನದಂಡಗಳು:ಅರ್ಹತಾ ಮಾನದಂಡಗಳನ್ನು ಪೂರೈಸದ ಅಥವಾ ಅಪೂರ್ಣವಾಗಿರುವ ಅರ್ಜಿಗಳನ್ನು ಸಂಪೂರ್ಣವಾಗಿ ತಿರಸ್ಕರಿಸಲಾಗುತ್ತದೆ. ಸಂದರ್ಶನದ ಸಮಯದಲ್ಲಿ ಪರಿಶೀಲನೆಗಾಗಿ ಮೂಲ ದಾಖಲೆಗಳ ಅಗತ್ಯವಿದೆ. ಸಂಸ್ಥೆಯ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ. ಭಾರತೀಯ ಪ್ರಜೆಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
ಅರ್ಜಿ ಸಲ್ಲಿಸಲು ಕೊನೇದಿನ:21.11.2022ಅಧಿಸೂಚನೆಗೆ:http://bit.ly/3g154Foಮಾಹಿತಿಗಾಗಿ:https://www.bhel.com/
ಎಲ್ಲೆಲ್ಲೂ ಒಕ್ಕಲಿಗ ವಧು-ವರರ ಸಮಾವೇಶದ್ದೇ ಮಾತು! ಬಾಳಸಂಗಾತಿ ಹುಡುಕಾಟಕ್ಕೆ ಬಂದ 13 ಸಾವಿರ ಮಂದಿಗೆ ಭಾರೀ ನಿರಾಸೆ…

ಹುತ್ರಿದುರ್ಗ ಬೆಟ್ಟದಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಯುವಕ-ಯುವತಿಯ ಬಟ್ಟೆ ಬಿಚ್ಚಿ ಕಿರುಕುಳ, ಚಾರಣಿಗರಿಗೆ ಬೆದರಿಕೆ ಹಾಕಿ ದರೋಡೆ…

ಗಂಡನ ಮನೆಗೆ ಹೋಗವ್ವಾ… ಎಂದು ತಾಯಿ ಬುದ್ಧಿಮಾತು ಹೇಳಿದ್ದೇ ತಪ್ಪಾ? ಮನನೊಂದು ಸಾವಿನ ಮನೆಯ ಕದ ತಟ್ಟಿದ ಮಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 1 =
Remember me
