ಬೆಂಗಳೂರು:ಸರ್ಕಾರಿ ಶಾಲಾ ಶಿಕ್ಷಕರ ಕೊರತೆ ನೀಗಿಸಲು ಸರ್ಕಸ್ ನಡೆಸಿರುವ ಸರ್ಕಾರ, ಇಂಜಿನಿಯರಿಂಗ್ ಪದವೀಧರರಿಗೂ ಮಣೆ ಹಾಕಲು ಮುಂದಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶುಕ್ರವಾರ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ವೇಳೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶಿಕ್ಷಕರ ಕೊರತೆ ತುಂಬಿಕೊಳ್ಳಲು ಮಾಡುತ್ತಿರುವ ಪ್ರಯತ್ನ ವಿವರಿಸಿ, ಇಂಜಿನಿಯರಿಂಗ್ ಪದವೀಧರರ ನೇಮಕ ವಿಷಯ ಪ್ರಸ್ತಾಪಿಸಿದ್ದಾರೆ.
ಸರ್ಕಾರಿ ಶಿಕ್ಷಕರ ಹುದ್ದೆಗಳ ನೇಮಕಾತಿ ಪರೀಕ್ಷೆಗಳ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದ್ದು, ಗಣಿತ, ವಿಜ್ಞಾನ ಶಿಕ್ಷಕರ ಕೊರತೆ ನೀಗಿಸಲು ಬಿ.ಎಡ್. ಮಾಡಿರುವ ಇಂಜಿನಿಯರಿಂಗ್ ಪದವೀಧರರ ನೇಮಕಾತಿಗೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ ಎಂದು ಸುರೇಶ್​ಕುಮಾರ್ ತಿಳಿಸಿದರು. ಶಿಕ್ಷಕರ ನೇಮಕ ಪ್ರಕ್ರಿಯೆ ಸಂದರ್ಭದಲ್ಲಿ ಅಭ್ಯರ್ಥಿಗಳು ಅರ್ಹತಾ ಮಟ್ಟ ತಲುಪದಿರುವ ಬಗ್ಗೆ ಚರ್ಚೆಗಳು ನಡೆದು ಅರ್ಹತಾ ಮಟ್ಟವನ್ನೇ ಬದಲಿಸಬೇಕೆಂಬ ಕೂಗು ಕೇಳಿಬಂದಿತ್ತು. ಇದೀಗ ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ಇಂಜಿನಿಯರಿಂಗ್ ಪದವೀಧರರನ್ನು ಬಳಸಿಕೊಳ್ಳುವ ಬಗ್ಗೆ ಪ್ರಯತ್ನ ಆರಂಭವಾಗಿದೆ.
ಕರೊನಾ ಚರ್ಚೆ
ಶಿಕ್ಷಣ ಇಲಾಖೆ ಮೇಲೆ ಕರೊನಾ ವೈರಸ್ ದೊಡ್ಡ ಪರಿಣಾಮ ಬೀರಿದ್ದು, ಮುಂದಿನ ದಿನಗಳಲ್ಲಿ ಶಾಲೆಗಳು, ತರಗತಿಗಳನ್ನು ನಡೆಸುವುದು ಸವಾಲಾಗಿದೆ. ಸವಾಲುಗಳನ್ನು ಎದುರಿಸಲು ಏನೆಲ್ಲ ಕ್ರಮ ಕೈಗೊಳ್ಳಬೇಕು? ಕೋವಿಡ್ ನಂತರ ತರಗತಿಗಳು, ಶಾಲೆಗಳು ಹೇಗಿರಬೇಕು ಎಂಬ ಕುರಿತು ಅಧ್ಯಯನ ನಡೆಸಲಾಗುತ್ತಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಸಭೆಗೆ ಮಾಹಿತಿ ನೀಡಿದರು.
ಎಸ್​ಎಸ್​ಎಲ್​ಸಿ ಪರೀಕ್ಷಾ ಸಿದ್ಧತೆ ಪರಿಶೀಲನೆ
ಜೂನ್ 25 ರಿಂದ ನಡೆಯುವ ಎಸ್​ಎಸ್​ಎಲ್​ಸಿ ಪರೀಕ್ಷೆ ತಯಾರಿ ಕುರಿತಂತೆ ಸಿಎಂ ಯಡಿಯೂರಪ್ಪ ಶುಕ್ರವಾರ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹಾಗೂ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಇಲಾಖೆಯಿಂದ ಮಾಹಿತಿ ಪಡೆದು, ಮಾರ್ಗದರ್ಶನ ಮಾಡಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯುವ ಕೇಂದ್ರದ ಪ್ರತಿ ಕೊಠಡಿಯಲ್ಲಿ 25 ವಿದ್ಯಾರ್ಥಿಗಳು ಇರುತ್ತಿದ್ದರು. ಈಗ ಕೋವಿಡ್ ಕಾರಣದಿಂದ 18 ರಿಂದ 20 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿಕೊಡಲು ತೀರ್ವನಿಸಲಾಗಿದೆ. ಈ ಮೂಲಕ ದೈಹಿಕ ಅಂತರ ಕಾಯ್ದುಕೊಳ್ಳಲಾಗುತ್ತದೆ. ಇದಕ್ಕಾಗಿ ಈ ಬಾರಿ 8 ಸಾವಿರ ಹೆಚ್ಚುವರಿ ಕೊಠಡಿಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವ ಸುರೇಶ್​ಕುಮಾರ್ ಮಾಹಿತಿ ನೀಡಿದರು.
ಇದನ್ನೂ ಓದಿಹಸಿವಿನಿಂದ ಕಂಗೆಟ್ಟು ಸತ್ತ ನಾಯಿಯ ಮಾಂಸವನ್ನೇ ತಿಂದ!
ಪರೀಕ್ಷಾ ಕೊಠಡಿಗಳ ಧೂಮಲೀಕರಣ ಮತ್ತು ಸ್ಯಾನಿಟೈಸೇಷನ್ ಮಾಡಲು ಕ್ರಮ ವಹಿಸಲಾಗುತ್ತಿದೆ. ಸ್ಕೌಟ್ ಆಂಡ್ ಗೈಡ್ಸ್ ಸಂಸ್ಥೆಯು ಪರೀಕ್ಷಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಿಸಲಿದ್ದು, ಸಂಸ್ಥೆಯ ಸ್ವಯಂಸೇವಕರು ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಸ್ಯಾನಿಟೈಸರ್ ಬಳಕೆ ಮಾಡಲು ಹಾಗೂ ಮಾಸ್ಕ್ ಧಾರಣೆಗೆ ಸಹಕರಿಸಲಿದ್ದಾರೆ. ವಲಸೆ ಕಾರ್ವಿುಕರ ಮಕ್ಕಳು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳು ತಮ್ಮ ಊರಿನಲ್ಲಿಯೇ ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಸಚಿವರು ಹೇಳಿದರು.
ಪುನರ್ ಮನನ ಕಾರ್ಯಕ್ರಮ
ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಪುನರ್ ಮನನ ತರಗತಿಗಳನ್ನು ನಡೆಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ದೂರದರ್ಶನದಲ್ಲಿ ಪುನರ್ ಮನನ ತರಗತಿಗಳನ್ನು ನಡೆಸಲಾಗುತ್ತಿದೆ. ಇದಕ್ಕೆ ಅತ್ಯುತ್ತಮ ಸ್ಪಂದನೆ ದೊರೆತಿದೆ. ಇದರಿಂದ ಪ್ರೇರಣೆ ಹೊಂದಿ, ಪ್ರತ್ಯೇಕ ವಾಹಿನಿ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ಮಾರ್ಗಸೂಚಿ ನಿರೀಕ್ಷೆ
ಶಾಲಾ ತರಗತಿಗಳನ್ನು ಮರು ಪ್ರಾರಂಭಿಸುವ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಮಾರ್ಗಸೂಚಿಗಳನ್ನು ನಿರೀಕ್ಷಿಸಲಾಗುತ್ತಿದೆ. ತಜ್ಞರ ಸಮಿತಿ ರಚಿಸಿ, ಪಠ್ಯಕ್ರಮ ನಿಗದಿಪಡಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.
ಮಕ್ಕಳವಾಣಿ ಯೂಟ್ಯೂಬ್
ಸುದೀರ್ಘ ರಜಾದಲ್ಲಿ ಇರುವ ಶಾಲಾ ಮಕ್ಕಳನ್ನು ಚಟುವಟಿಕೆಗಳ ಮೂಲಕ ಸಕ್ರಿಯರಾಗಿರಿಸಲು ಪ್ರಾರಂಭಿಸಲಾಗಿರುವ ಮಕ್ಕಳವಾಣಿ ಯೂಟ್ಯೂಬ್ ಚಾನಲ್ ಬಗ್ಗೆ ಪಾಲಕರು, ಮಕ್ಕಳಿಂದ ಮೆಚ್ಚುಗೆ ವ್ಯಕ್ತವಾಗಿದೆ. 45 ಲಕ್ಷಕ್ಕೂ ಹೆಚ್ಚು ಮಕ್ಕಳು ಈ ಚಾನಲ್ ವೀಕ್ಷಿಸಿದ್ದಾರೆ. ಅನುಭವಿ ಶಿಕ್ಷಕರು ಪಾಠ ಮಾಡುವ ವಿಡಿಯೋಗಳನ್ನು ಯೂಟ್ಯೂಬ್​ನಲ್ಲಿ ಅಪ್​ಲೋಡ್ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಬೈಸಿಕಲ್ ಯೋಜನೆ ಮುಂದುವರಿಕೆ
ವಿದ್ಯಾರ್ಥಿಗಳ ಉಚಿತ ಬೈಸಿಕಲ್ ಯೋಜನೆಯನ್ನು ಯಾವ ಕಾರಣಕ್ಕೂ ಸ್ಥಗಿತಗೊಳಿಸಬಾರದು ಎಂದು ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಹಣಕಾಸು ತೊಂದರೆಯಾದರೂ ಚಿಂತೆ ಇಲ್ಲ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಈ ಯೋಜನೆ ನಿಲ್ಲಬಾರದು. ಸೈಕಲ್ ನೀಡುವುದರಿಂದ ಗ್ರಾಮೀಣ ಮಕ್ಕಳಿಗೆ ಅನುಕೂಲವಾಗುತ್ತದೆ ಎಂದರು. ಶಿಕ್ಷಣ ಕ್ಷೇತ್ರದಲ್ಲಿ ಹಳೇ ಮೈಸೂರು ಭಾಗಕ್ಕೆ ಹೋಲಿಕೆ ಮಾಡಿದರೆ, ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ಹೆಚ್ಚು ಸಮಸ್ಯೆಗಳಿವೆ. ಆದ್ದರಿಂದ ಅಲ್ಲಿನ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಆದ್ಯತೆ ನೀಡಬೇಕೆಂದು ಸೂಚಿಸಿದರು.
ಶೀಘ್ರವೇ ಎಫ್​ಎಂ ಮತ್ತು ಸಮುದಾಯ ರೇಡಿಯೋಗಳಲ್ಲಿ ಸುದ್ದಿ ಪ್ರಸಾರ?!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − seventeen =
Remember me
