ಬೆಂಗಳೂರು:1999ರಲ್ಲಿ ಉಪೇಂದ್ರ ನಟಿಸಿ, ನಿರ್ದೇಶಿಸಿದ ಉಪೇಂದ್ರ ಚಿತ್ರದ ಏನಿಲ್ಲ ಏನಿಲ್ಲ ಹಾಡು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಇದೀಗ ಈ ಹಾಡನ್ನು ರಾಜಕೀಯ ಟೀಕೆಗಳಿಗೂ ಬಳಸಲಾಗುತ್ತಿದೆ.
ಮುಂದಿನ ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಈ ಸಮಯದಲ್ಲಿಯೆ ರಾಜಕೀಯ ವ್ಯಕ್ತಿಗಳ ವಿರುದ್ಧ ಟ್ರೋಲ್ ಹಾವಳಿ ಕೂಡ ಜೋರಾಗಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಅವರ ವಿಚಾರವಾಗಿ ಸಿಕ್ಕಾಪಟ್ಟೆ ಟ್ರೋಲ್ ಹುಟ್ಟಿಕೊಳ್ಳುತ್ತಿವೆ. ಇದೀಗ ಸಿಎಂ ಸಿದ್ದರಾಮಯ್ಯ ಅವರನ್ನು ಏನಿಲ್ಲ ಏನಿಲ್ಲ ಹಾಡು ಬೆನ್ನು ಬಿಡದಂತೆ ಕಾಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್​ ಆಗಿದ್ದು ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ.
‘ಏನಿಲ್ಲ ಏನಿಲ್ಲ ನಿನ್ನ ನನ್ನ ನಡುವೆ ಏನಿಲ್ಲ.. ಏನೇನಿಲ್ಲ.. ಏನಿಲ್ಲ ಏನಿಲ್ಲ.. ನಿನ್ನ ನನ್ನ ನಡುವೆ ಏನಿಲ್ಲ.. ನಿಜದಂತಿರುವ ಸುಳ್ಳಲ್ಲ, ಸುಳ್ಳುಗಳೆಲ್ಲ ನಿಜವಲ್ಲ ಸುಳ್ಳಿನ ನಿಜವೂ ಸುಳ್ಳಲ್ಲ ಏನಿಲ್ಲ ಏನಿಲ್ಲ.. ಏನೇನಿಲ್ಲ..’ ಅಂತಾ ಇರೋ ಹಾಡನ್ನ ಸೋಷಿಯಲ್ ಮೀಡಿಯಾದಲ್ಲಿ ‘ಮೊಯೆ ಮೊಯೆ’ ಜೊತೆ ರೀಮಿಕ್ಸ್ ಮಾಡಿದ್ದು ವೈರಲ್ ಆಗುತ್ತಿದೆ.
ಇದನ್ನೂ ಓದಿ:ಪ್ರೇಯಸಿ ಮಾಡಿದ ಎಡವಟ್ಟು ಪ್ರಿಯಕರನಿಗೆ ಕೋಟಿ ಕೋಟಿ ರೂಪಾಯಿ ನಷ್ಟ
ವೈರಲ್​ ಆಗಿರುವ ವಿಡಿಯೋದಲ್ಲಿ ಏನಿಲ್ಲ ಏನಿಲ್ಲ ರೀಮಿಕ್ಸ್​ ಹಾಡಿಗೆ ಸಿಎಂ ಸಿದ್ದರಾಮಯ್ಯ ಈ ಹಿಂದೆ ಕಾರ್ಯಕ್ರಮದಲ್ಲಿ ಮಾಡಿರುವ ಡ್ಯಾನ್ಸ್​ನ ವಿಡಿಯೋವನ್ನು ಜೋಡಿಸಿ ಹರಿಬಿಡಲಾಗಿದೆ. ಇದಲ್ಲದೆ ಸಿಎಂ ಸಿದ್ದರಾಮಯ್ಯ ಮತ್ತು ಪ್ರಧಾನಿ ಮೋದಿ ಅವರ ನಡುವೆ ಹೋಲಿಕೆ ಮಾಡಿಲಾಗಿದೆ. ಬಿಜೆಪಿ ಸರ್ಕಾರವೇ ಆಡಳಿತಕ್ಕೆ ಬರುತ್ತೆ ಅಂತಾ ಟ್ರೋಲ್ ಮಾಡಲಾಗಿದೆ. ಇದರ ಜೊತೆ ಮೊಯೆ ಮೊಯೆ ಹಾಡಿನ ಬಿಟ್ ಕೂಡ ಬಳಕೆ ಮಾಡಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಈ ಹಾಡನ್ನು ಹಾಕಿ ಟ್ರೋಲ್ ಮಾಡಿರುವ ಬಗ್ಗೆ ಪರ & ವಿರೋಧ ಚರ್ಚೆ ಕೂಡ ಜೋರಾಗಿದೆ. ಇಷ್ಟೆಲ್ಲದರ ನಡುವೆ ಈ ಟ್ರೋಲ್ ಕೂಡ ವೈರಲ್ ಆಗುತ್ತಿದೆ. ಹಾಗೇ ಏನಿಲ್ಲ.. ಏನಿಲ್ಲ.. ಹಾಡಿನ ಹವಾ ಕೂಡ ದಿನದಿಂದ ದಿನಕ್ಕೆ ಜೋರಾಗುತ್ತಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + four =
Remember me
