
ಬೆಂಗಳೂರು:ಸುಂಕದಕಟ್ಟೆಯ ಅಂಜಲಿ ಕಾನ್ವೆಂಟ್ ಮತ್ತು ನೈಟಿಂಗೇಲ್ ಪ್ರೌಢಶಾಲೆಯ ವತಿಯಿಂದ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಎಂ.ಎಸ್. ಸರಳ ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಂಶುಪಾಲರಾದ ಡಾ. ಬಿ. ಕೃಷ್ಣೇಗೌಡರು ಅಧ್ಯಕ್ಷತೆ ವಹಿಸಿ, ಪರಿಸರ ದಿನದ ಇತಿಹಾಸ ಹಾಗೂ ಮಹತ್ವವನ್ನು ಕುರಿತು ಮಾತನಾಡಿದರು. ಮಕ್ಕಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸಿದರು. ಅಲ್ಲದೆಸುಮಾರು 2 ಕಿ.ಮೀ ದೂರದವರೆಗೆ ಮಕ್ಕಳು ಹಾಗೂ ಶಿಕ್ಷಕರು ವಿವಿಧ ಪ್ರಾತ್ಯಕ್ಷಿಕೆಗಳ ಮೂಲಕ ಜಾಗೃತಿ ನಡಿಗೆ ಮಾಡಿ ಪೋಷಕರು ಹಾಗೂ ನಾಗರೀಕರಲ್ಲಿ ಪರಿಸರದ ಕಾಳಜಿಯ ಬಗ್ಗೆ ಅರಿವು ಮೂಡಿಸಿದರು.ಇದೇ ಸಂದರ್ಭದಲ್ಲಿ 2023-24ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ 13ನೇ ಬಾರಿಗೆ ಶೇ.100 ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಇದಕ್ಕೆ ಕಾರಣರಾದ ಶಿಕ್ಷಕ ವೃಂದಕ್ಕೆಅಭಿನಂದನೆಗಳನ್ನು ಸಲ್ಲಿಸಲಾಯಿತು. ಕೆಲ ವಿದ್ಯಾರ್ಥಿಗಳು ಪರಿಸರದ ಬಗ್ಗೆ ಭಾಷಣವನ್ನು ಮಾಡಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seventeen + eleven =
Remember me
