ಬೆಂಗಳೂರು:ಪರಿಸರ ದಿನದ ಅಂಗವಾಗಿ ಬನಶಂಕರಿ 2ನೇ ಹಂತದಲ್ಲಿರುವ ಬಿಎನ್​ಎಂ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವತಿಯಿಂದ ಸೈಕ್ಲಿಂಗ್ ನಡೆಸಿ ಪರಿಸರ ಜಾಗೃತಿ ಆಂದೋಲನ ನಡೆಸಲಾಯಿತು.
ವಿದ್ಯಾರ್ಥಿಗಳು 10 ಕಿ.ಮೀ. ಸೈಕ್ಲಿಂಗ್ ಮಾಡುವ ಮೂಲಕ ಜನರಲ್ಲಿ ಪರಿಸರ ಜಾಗೃತಿ ಮೂಡಿಸಿದರು. ಪೂರ್ವಪ್ರಾಥಮಿಕ ಮತ್ತು ಪ್ರಾಥಮಿಕ ಶಾಲಾ ಮಕ್ಕಳು ಕೂಡ ಹಸಿರು ಬಣ್ಣದ ಬಟ್ಟೆ ಧರಿಸಿ ಪಾಲ್ಗೊಂಡಿದ್ದರು. ಸಂಸ್ಥೆಯ ಅಧ್ಯಕ್ಷ ನಾರಾಯಣ ರಾವ್ ಮಾನೆ ಮಾತನಾಡಿ, ಪ್ರತಿ ವರ್ಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ನಾವೆಲ್ಲರೂ ಜಾಗೃತರಾಗುವ ಮೂಲಕ ಪರಿಸರ ಕಾಪಾಡಿ ಕೊಂಡು ನಗರವನ್ನು ಮಾಲಿನ್ಯಮುಕ್ತಗೊಳಿಸಬೇಕಿದೆ ಎಂದು ಕರೆ ನೀಡಿದರು.
ಇದನ್ನೂ ಓದಿ:ಗ್ರಾಹಕರಿಗೆ ತಟ್ಟಲಿದೆಯಾ ಹಾಲಿನ ದರ ಏರಿಕೆ ಬಿಸಿ? ಬೆಲೆ ಏರಿಕೆಗೆ ಪಟ್ಟು ಹಿಡಿದ ಒಕ್ಕೂಟ!
ವಿದ್ಯಾರ್ಥಿ ದೆಸೆಯಲ್ಲಿರುವಾಗಲೇ ಮಕ್ಕಳು ಪರಿಸರ ರಕ್ಷಣೆ, ನದಿ ಮೂಲಗಳು, ಕೆರೆ ಕಟ್ಟೆಗಳ ರಕ್ಷಣೆ, ಜಲಚರಗಳು, ಕಾಡು ಉಳಿಸುವ ಕೆಲಸಗಳಿಗೆ ಮುಂದಾದರೆ ಭವಿಷ್ಯದಲ್ಲಿ ಪರಿಸರ ಮಾಲಿನ್ಯ ತಡೆಗಟ್ಟಲು ಸಾಧ್ಯವಾಗಲಿದೆ. ಪ್ರಸ್ತುತ ದಿನಗಳಲ್ಲಿ ವಾಹನದ ಹೊಗೆಯಿಂದ ವಾಯುಮಾಲಿನ್ಯವಾದರೆ, ಪ್ಲಾಸ್ಟಿಕ್ ಬಳಕೆಯಿಂದ ಮಣ್ಣು ಹಾಳಾಗುತ್ತಿದೆ. ನದಿ, ಕೆರೆಗಳಲ್ಲಿ ಎಸೆಯುವ ಪ್ಲಾಸ್ಟಿಕ್​ನಿಂದ ಜಲಚರಗಳ ಪ್ರಾಣ ಹಾನಿಯಾಗುತ್ತಿದೆ. ನೀರು ಮತ್ತು ಆಹಾರ ಪದಾರ್ಥಗಳಲ್ಲಿ ಪ್ಲಾಸ್ಟಿಕ್ ಸೇರುವುದ ರಿಂದ ಮನುಷ್ಯನ ಆರೋಗ್ಯದ ಮೇಲೆಯೂ ಗಂಭೀರ ಪರಿಣಾಮ ಗಳಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ಪರಿಸರ ಸಂರಕ್ಷಣೆಗೆ ಮುಂದಾಗಬೇಕಿದೆ ಎಂದರು.
ರಾಮಕೃಷ್ಣ ಮಠದ ಸ್ವಾಮೀಜಿಗಳು, ಬೋಧಕ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಗೃಹಲಕ್ಷ್ಮೀ ಯೋಜನೆಯ ಅರ್ಜಿ ಹೀಗಿರಲಿದೆ ನೋಡಿ! 2000 ರೂ. ಪಡೆಯಲು ಯಾವ ದಾಖಲೆ ಕೊಡಬೇಕು?

ಗ್ರಾಹಕರಿಗೆ ತಟ್ಟಲಿದೆಯಾ ಹಾಲಿನ ದರ ಏರಿಕೆ ಬಿಸಿ? ಬೆಲೆ ಏರಿಕೆಗೆ ಪಟ್ಟು ಹಿಡಿದ ಒಕ್ಕೂಟ!

ತನಗಿಂತ 22 ವರ್ಷ ಹಿರಿಯ ನಟನೊಂದಿಗೆ ಡೇಟಿಂಗ್​: ಕಿಸ್ಸಿಂಗ್​ ಫೋಟೋ ಬಗ್ಗೆ ನಟಿ ಯಶಿಕಾ ಸ್ಪಷ್ಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − thirteen =
Remember me
