ಕೆ.ಆರ್.ಪುರ:ಕೇವಲ ಮರ, ಗಿಡಗಳನ್ನು ನಾಶಗೊಳಿಸುವುದರಿಂದ ಮಾತ್ರ ಪರಿಸರ ನಾಶವಾಗುವುದಿಲ್ಲ, ಬದಲಾಗಿ ಪರಿಸರದ ಮಾಲಿನ್ಯದಿಂದಲೂ ಕೂಡ ಪರಿಸರ ನಾಶವಾಗುತ್ತದೆ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಎನ್​ಎಸ್​ಎಸ್​ ಸಂಯೋಜಕರಾದ ಡಾ. ವಿಜಯ ಕುಮಾರ್​ ಅವರು ಹೇಳಿದರು.
ಇದನ್ನೂ ಓದಿ:ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ: ನಾಲ್ವರ ಬಂಧನ
ನಗರದ ಕೆ.ಆರ್.ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್​.ಎಸ್​.ಎಸ್​ ವತಿಯಿಂದ ಹಮ್ಮಿಕೊಂಡಿದ್ದ ‘ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಅವರು ಮಾತನಾಡಿದರು.
ಪ್ರತಿಯೊಬ್ಬರು ಪರಿಸರ ಸಂರಕ್ಷಿಸಬೇಕು. ಗಿಡಮರಗಳನ್ನು ಹೆಚ್ಚು ಬೆಳೆಸುವುದರಿಂದ ಬಿಸಲ ಬೇಗ ಕಡಿಮೆಯಾಗಿ ಜನರಿಗೆ ಉತ್ತಮ ಆಮ್ಲಜನಕ ದೊರೆಯಲಿದೆ. ಪರಿಸರ ಸೌಂದರ್ಯವೂ ಹೆಚ್ಚಾಗಲಿದೆ. ಮುಂದಿನ ಪೀಳಿಗೆಗೆ ಪರಿಸರ ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ಮನೆಯ ಸುತ್ತಲೂ ಗಿಡಗಳನ್ನು ಬೆಳೆಸುವುದಲ್ಲದೆ ಮನೆಯಲ್ಲಿ ಬಳಸಿದ ನೀರನ್ನು ಮರು ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ಗಿಡಗಳನ್ನು ನೆಟ್ಟು ಇತರಿಗೂ ಗಿಡ ನಡೆವಂತೆ ಪ್ರೋತ್ಸಾಹಿಸಬೇಕು. ಇದು ಪರಿಸರವನ್ನು ಉಳಿಸುವ ಮಾರ್ಗ. ಪ್ರತಿಯೊಬ್ಬರಿಗೂ ಪ್ಲಾಸ್ಟಿಕ್ ತ್ಯಜಿಸಿ ಬಟ್ಟೆ ಚೀಲಗಳನ್ನು ಬಳಸಬೇಕು. ಮರುಬಳಕೆ ವಸ್ತುಗಳನ್ನು ಉಪಯೋಗಿಸುವುದರೊಂದಿಗೆ ಪರಿಸರ ಮಾಲಿನ್ಯವನ್ನು ತಡೆಗಟ್ಟಬಹುದು ಎಂದು ಹೇಳಿದರು.

ಅರಣ್ಯ ಒತ್ತುವರಿಯಿಂದಾಗಿ ವನ್ಯ ಮೃಗಗಳಿಗೆ ಆಹಾರ ಅಭಾವ ಉಂಟಾಗಿ ಕಾಡು ಪ್ರಾಣಿಗಳು ನಗರಗಳತ್ತ ಮುಖ ಮಾಡಿದ ಪರಿಣಾಮ ಮಾನವ ಮತ್ತು ವನ್ಯಮೃಗಗಳ ಸಂಘರ್ಷ ಏರಿಕೆಯಾಗಿದೆ. ಈ ಸಂಘರ್ಷದಲ್ಲಿ ಅಪೂರ್ವವಾದ ಪ್ರಾಣಿಗಳು ನಾಶವಾಗುತ್ತಿವೆ. ಅರಣ್ಯದ ಮೇಲೆ ಮಾನವನ ಅತಿಕ್ರಮಣವನ್ನು ತಪ್ಪಿಸಿ, ವನ್ಯಮೃಗಗಳಿಗೆ ಕಾಡಿನಲ್ಲೇ ಆಹಾರ ಮೂಲಗಳನ್ನು ಸೃಷ್ಟಿಸುವುದರಿಂದ ಸಂಘರ್ಷವನ್ನು ತಪ್ಪಿಸಬಹುದು ಎಂದು ಡಾ. ವಿಜಯಲಕ್ಷ್ಮಿ ಹೇಳಿದರು.

ಜನಸಾಮಾನ್ಯರು ತಮ್ಮ ಬೇಡಿಕೆಗಳ ಪೂರೈಕೆಗಾಗಿ ಭವಿಷ್ಯದ ಬಗ್ಗೆ ಯೋಚಿಸದೇ ಗಿಡ ಮರಗಳನ್ನು ನಾಶಗೊಳಿಸುತ್ತಿ ದ್ದಾರೆ. ಮುಂದೆ ಸಂಭವಿಸುವ ಅನಾಹುತಗಳ ಬಗ್ಗೆ ಯೋಚನೆ ಮಾಡುತ್ತಿಲ್ಲ. ಪ್ರತಿ ಮನೆಯಲ್ಲೂ ಪ್ರತಿಯೊಬ್ಬರು ಗಿಡ ಮರಗಳನ್ನು ಬೆಳೆಸಬೇಕು. ಪರಿಸರ ದಿನದ ಆಚರಣೆ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರಬಾರದು, ಬೆಳೆಸಿದ ಗಿಡಗಳನ್ನು ಸಂರಕ್ಷಿಸಬೇಕು, ಎಲ್ಲರೂ ಕೈ ಜೋಡಿಸಿ ಪರಿಸರವನ್ನು ಮುಂದಿನ ಪೀಳಿಗೆಗಾಗಿ ಉಳಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮಕ್ಕೂ ಮೊದಲು ಕಾಲೇಜು ಆವರಣದಲ್ಲಿ ಗಣ್ಯರು ಗಿಡ ನೆಟ್ಟು ನೀರೆರೆದರು. ಈ ವೇಳೆ ಭೌತಶಾಸ್ತ್ರ ವಿಭಾಗದ ಹಿರಿಯ ಪ್ರಧ್ಯಾಪಕರಾದ ಸೀನಾ ನಾಯಕ್​, ಡಾ. ವಿಜಯಲಕ್ಷ್ಮಿ, ಪ್ರೊ. ನಾಗರಾಜು, ಡಾ.ಸಣ್ಣಚಿಕ್ಕಯ್ಯ, ಡಾ.ವಿವೇಕಾ ಐ ಸರಿಕರ, ಎನ್​,ಎಸ್​,ಎಸ್​ ವಿದ್ಯಾರ್ಥಿಗಳು ಸೇರಿದಂತೆ ಹಲವರು ಇದ್ದರು.
ಸಿಕ್ಕಿಂ ಮುಖ್ಯಮಂತ್ರಿಯಾಗಿ ಜೂನ್​ 10ಕ್ಕೆ ತಮಾಂಗ್ ಪ್ರಮಾಣ ವಚನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
