ಬೆಂಗಳೂರು: ದ್ವೇಷ ರಾಜಕೀಯದ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ವೆಲ್ಫೇರ್ ಪಾರ್ಟಿ ಆ್ ಇಂಡಿಯಾ ಕರ್ನಾಟಕ ಘಟಕ ರಾಜ್ಯವ್ಯಾಪಿ ಅಭಿಯಾನ ನಡೆಸಲಿದೆ.
ನವೆಂಬರ್ 1 ರಿಂದ 10ರ ವರೆಗೆ ದ್ವೇಷ ಅಳಿಸೋಣ ದೇಶ ಉಳಿಸೋಣ ಎಂಬ ಶೀರ್ಷಿಕೆಯಲ್ಲಿ ದಶ ದಿನ ಅಭಿಯಾನವನ್ನು ಹಮ್ಮಿಕೊಂಡಿದೆ.ಪ್ರೀತಿ, ಶಾಂತಿ ಸಹೋದರತೆ ಬಯಸುವ ನಾಗರಿಕರಿಗೆ ಒಗ್ಗೂಡಿಸಿ ದ್ವೇಷ ಮತ್ತು ಸುಳ್ಳಿನ ರಾಜಕೀಯದ ವಿರುದ್ಧ ದ್ವನಿ ಎತ್ತಲು ಪ್ರೇರೇಪಿಸುವುದು ಅಭಿಯಾನದ ಉದ್ದೇಶವಾಗಿದೆ.
ಈ ಕುರಿತು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ವೆಲ್ಫೇರ್ ಪಾರ್ಟಿ ಆ್ ಇಂಡಿಯಾ ಕರ್ನಾಟಕ ಘಟಕದ ರಾಜ್ಯಾಧ್ಯಕ್ಷ ಅಡ್ವೊಕೇಟ್ ತಾಹೇರ್ ಹುಸೇನ್, ಅಲ್ಪ ಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಕುಗ್ಗುತ್ತಿರುವ ರಾಜಕೀಯ ಸ್ಥಾನ ಮತ್ತು ಅದರ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು,ಪ್ರಸ್ತುತ ಸನ್ನಿವೇಶದಲ್ಲಿ ಮೌಲ್ಯಧಾರಿತ ರಾಜಕೀಯದ ಮಹತ್ವದ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದು ತಿಳಿಸಿದರು.
ಇತ್ತೀಚಿನ ಕೆಲವು ವರ್ಷಗಳಲ್ಲಿ ಜನರ ನಡುವೆ ಧರ್ಮದ ಹೆಸರಲ್ಲಿ ದ್ವೇಷ ಹುಟ್ಟಿಸುವ ಮತ್ತು ಸುಳ್ಳು ಸುದ್ದಿಗಳನ್ನು ಹರಡಿಸಿ ಜನರ ನೆಮ್ಮದಿ ಕೆಡಿಸುವ ಕಾರ್ಯ ಎಗ್ಗಿಲ್ಲದೆ ನಿರಂತರ ನಡೆಯುತ್ತಿದೆ. ಕೆಲವು ಸ್ವಾರ್ಥ ರಾಜಕಾರಣಿಗಳು ತಮ್ಮ ಅಧಿಕಾರವನ್ನು ಭದ್ರ ಪಡಿಸಲು ಸುಳ್ಳಿನ ಮುಖಾಂತರ ಜನರ ನಡುವೆ ದ್ವೇಷದ ಕಿಚ್ಚು ಹಚ್ಚುವ ಪ್ರಯತ್ನದಲ್ಲಿ ತೊಡಗಿಸಿಕೊಂಡಿದ್ದಾರೆ. ಇದಕ್ಕೆ ದೇಶದಲ್ಲಿ ಮತ್ತು ರಾಜ್ಯದಲ್ಲಿ ಧಾರಾಳ ಉದಾಹರಣೆಗಳಿವೆ. ಈ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡಿಸುವುದು ಅಭಿಯಾನದ ಗುರಿ ಎಂದರು.
ಕನ್ನಡನಾಡಿನಲ್ಲಿ ಪ್ರಚೋದನಕಾರಿ ಭಾಷಣಗಳು ಇತ್ತೀಚೆಗೆ ವ್ಯಾಪಕವಾಗಿ ನಡೆಯುತ್ತಿದೆ. ಇದರ ಪರಿಣಾಮವಾಗಿ ಜಾತಿ ನಿಂದನೆ, ಜಾತಿ ಸಂಘರ್ಷ, ಕೋಮು ಕೋಮುಗಲಭೆ ನಡೆದು ಅಮಾಯಕರ ಕೊಲೆಯಲ್ಲಿ ಮುಕ್ತಾಯವಾಗುತ್ತದೆ. ಇದು ರಾಜ್ಯದ ಸೌಹಾರ್ದ ವಾತಾವರಣ ಮತ್ತು ಅಭಿವೃದ್ಧಿಗೆ ಮಾರಕವಾಗಿದೆ. ಈ ನಿಟ್ಟಿನಲ್ಲಿ ಪರಿಸ್ಥಿತಿಯ ಗಾಂಭೀರ್ಯತೆ ಮನಗಂಡು ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ನೆಲೆಯೂರಲಿ ಎಂಬ ಸದಾಶಯದಿಂದ ಈ ಅಭಿಯಾನ ಆರಂಭಿಸಲಾಗುವುದು ಎಂದು ಹೇಳಿದರು.
ನ.1 ರಂದು ರಾಜ್ಯ ಕಚೇರಿ ಮತ್ತು ರಾಜ್ಯದ ಎಲ್ಲ ಘಟಕಗಳಲ್ಲಿ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣದ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಗವುದು. ಅಭಿಯಾನದ ಸಂದರ್ಭದಲ್ಲಿ ಬಿತ್ತಿ ಪತ್ರ ಬಿಡುಗಡೆ, ಅಭಿಯಾನದ ಕುರಿತು ವೀಡಿಯೋ ಬಿಡುಗಡೆ, ವಿಚಾರ ಗೋಷ್ಠಿ, ಕಾರ್ನರ್ ಮೀಟಿಂಗ್, ಸಾರ್ವಜನಿಕ ಸಭೆ, ಬೀದಿ ನಾಟಕ, ಜಾಥಾ, ಬೈಕ್ ರ‌್ಯಾಲಿ,ರಾಷ್ಟ್ರಪತಿಗಳಿಗೆ ಮನವಿ, ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಪಕ್ಷದ ರಾಜ್ಯ ಕಾರ್ಯದರ್ಶಿ ಹಾಗೂ ಅಭಿಯಾನ ಸಂಚಾಲಕ ಕೆ.ಟಿ. ಬಶೀರ್, ರಾಜ್ಯ ಕಾರ್ಯದರ್ಶಿಗಳಾದ ತಲತ್ ಯಾಸ್ಮಿನ್, ರಿಯಾಜ್ ಅಹಮದ್, ಮಾಧ್ಯಮ ಸಂಚಾಲಕ ರಿಜ್ವಾನ್ ತಾಜ್ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
