ಚಿತ್ರದುರ್ಗ:ನಾವು ಸುಳ್ಳು ಹೇಳಲ್ಲ, ಬಿಜೆಪಿಗೆ ಸುಳ್ಳೇ ಮನೆ ದೇವರು. ನಾವು ಗ್ಯಾರಂಟಿ ಯೋಜನೆ ಜಾರಿಗೊಳಿಸಿದ ಬಳಿಕ ಟೀಕೆ ಟಿಪ್ಪಣಿ ಮಾಡಲಿ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್​​ ಖಂಡ್ರೆ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಐದೂ ಗ್ಯಾರಂಟಿಗಳನ್ನು ನಾವು ಜಾರಿಗೊಳಿಸುತ್ತೇವೆ. ಮೊದಲ ಸಂಪುಟದಲ್ಲೇ ಗ್ಯಾರಂಟಿ ಯೋಜನೆಗೆ ತಾತ್ವಿಕ ಒಪ್ಪಿಗೆ ಸಿಕ್ಕಿದೆ. ಅಧಿಕಾರಿಗಳಿಗೆ ರೂಪುರೇಷೆ ತಯಾರಿಸಲು ಸೂಚಿಸಿದ್ದೇವೆ. ನಾಡಿದ್ದು, ನಡೆಯುವ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
ಇದನ್ನೂ ಓದಿ:IPL ಮ್ಯಾಚ್: ಸ್ವಿಗ್ಗಿಯಿಂದ ಹೆಚ್ಚು ಡೆಲಿವರಿ ಆಗಿದ್ದು ಕಾಂಡೋಮ್‌, ಬಿರಿಯಾನಿ!
ಕೊಟ್ಟ ಮಾತು ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ. ಬಿಜೆಪಿಯವರು ಹೀನಾಯವಾಗಿ ಸೋತಿದ್ದಾರೆ. ಮಾಡಲು ಕೆಲಸವಿಲ್ಲ. ಬಿಜೆಪಿ ನೀಡಿದ ಒಂದು ಭರವಸೆಯನ್ನು ಈಡೇರಿಸಿಲ್ಲ. ಕಾಂಗ್ರೆಸ್ ಆಡಳಿತದಲ್ಲಿ ಹಿಂದೆಯೂ ನುಡಿದಂತೆ ನಡೆದಿದ್ದೇವೆ. ಈಗಲೂ ನುಡಿದಂತೆ ನಡೆಯುತ್ತಿದ್ದೇವೆ. ಇದು ಬಿಜೆಪಿಗೆ ನಡುಕ ಹುಟ್ಟಿಸಿದೆ. ಹತಾಶೆಯ ಮನೋಭಾವನೆಯಿಂದ ಬಿಜೆಪಿಗರು ಹೇಳಿಕೆ ಕೊಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.
ಕಾಂಗ್ರೆಸ್‌ ಆಡಳಿತಕ್ಕೆ ಬರುತ್ತಿದ್ದಂತೆ ನಕ್ಸಲರು ಸಕ್ರಿಯವಾಗಿದ್ದಾರೆಂದು ಸಿ.ಟಿ ರವಿ ಹೇಳಿಕೆ ವಿಚಾರವಾಗಿ ಮಾತನಾಡಿ, ಸಿ.ಟಿ.ರವಿ ದುರ್ವರ್ತನೆ,‌ ದುರಹಂಕಾರಕ್ಕೆ‌ ಜನ ತಕ್ಕ ಪಾಠ ಕಲಿಸಿದ್ದಾರೆ. ಈಗಲಾದರೂ ಹೀಗೆ ಹೇಳಿಕೆ ಕೊಡುವುದನ್ನು ಬಿಡಲಿ ಎಂದು ಕಿಡಿಕಾರಿದ್ದಾರೆ.
ಐದು ವರ್ಷದಲ್ಲಿ ಇಬ್ಬರು ಸಿಎಂ ಆಗುತ್ತಾರೆಂಬ ವಿಚಾರ ಅಪ್ರಸ್ತುತವಾಗಿದೆ. ಪ್ರತಿ ಮನೆಯ ಯಜಮಾನಿಗೆ ಗೃಹಲಕ್ಷ್ಮಿ ಯೋಜನೆ ಸಹಾಯವಾಗಲಿದೆ. ಅತ್ತೆ, ಸೊಸೆ ಎಂದು ಸಣ್ಣ-ಪುಟ್ಟ ವಿಚಾರ ಪ್ರಸ್ತಾಪ ನಗೆಪಾಟಲು ಎಂದು ಹೇಳಿದ್ದಾರೆ.
ಜನಪದ ಕಲಾವಿದ ಜನ್ನಘಟ್ಟ ಕೃಷ್ಣಮೂರ್ತಿ ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪ್ರಿಯಕರನೊಂದಿಗೆ ಸೇರಿ ಸ್ಕೆಚ್‌ ಹಾಕಿ ಮುಗಿಸಿದ್ಲು ಪತ್ನಿ!


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
