ಬೆಂಗಳೂರು:ಭ್ರಷ್ಟಾಚಾರ ಆರೋಪಕ್ಕೆ ಒಳಗಾಗಿ ತೀವ್ರ ಒತ್ತಡಕ್ಕೆ ಸಿಲುಕಿ ರಾಜೀನಾಮೆ ನೀಡಬೇಕಾದ ಅನಿವಾರ್ಯತೆಗೆ ಒಳಗಾಗಿರುವ ಕೆ.ಎಸ್. ಈಶ್ವರಪ್ಪ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೀಡಿದರು.
ಶಿವಮೊಗ್ಗದಿಂದ ರ‌್ಯಾಲಿ ಮೂಲಕ ಬೆಂಗಳೂರಿನ ಸಿಎಂ ನಿವಾಸಕ್ಕೆ ಆಗಮಿಸಿರುವ ಈಶ್ವರಪ್ಪ, ಅಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ನೀಡಿದರು. ಈ ಮಧ್ಯೆ ಸಿಎಂ ನಿವಾಸದ ಬಳಿ ಜಮಾಯಿಸಿದ್ದ ಈಶ್ವರಪ್ಪ ಅಭಿಮಾನಿಗಳು ರಾಜೀನಾಮೆ ನೀಡದಂತೆ ಘೋಷಣೆ ನೀಡಿದ ಪ್ರಸಂಗವೂ ನಡೆಯಿತು.
ಗುತ್ತಿಗೆದಾರ ಸಂತೋಷ್​ ಪಾಟೀಲ್ ಅವರು ಕೆ.ಎಸ್​. ಈಶ್ವರಪ್ಪ ಅವರನ್ನು ಗುರಿಯಾಗಿಸಿ ಉಡುಪಿಯ ಕೆಎಸ್​ಆರ್​​ಟಿಸಿ ಬಸ್​ ನಿಲ್ದಾಣ ಸಮೀಪದ ಶಾಂಭವಿ ಬೋರ್ಡಿಂಗ್ ಆ್ಯಂಡ್ ಲಾಡ್ಜಿಂಗ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ರಾಜೀನಾಮೆಗೆ ಆಗ್ರಹಿಸಿ ತೀವ್ರ ಒತ್ತಡ ಹೇರಲಾಗಿತ್ತು.
ಬಾಲಿವುಡ್​ ಮೇಲೆ ಅಣುಬಾಂಬ್​!; ನಿರ್ದೇಶಕ ರಾಮ್​ಗೋಪಾಲ್​ ವರ್ಮಾ ಹೀಗಂದಿದ್ದೇಕೆ?
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × 2 =
Remember me
