ಬಾಗಲಕೋಟೆ:ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಕಿಡಿಕಾರಿದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಪ್ರಜ್ವಲ್ ರೇವಣ್ಣ ಪೆನ್​​ಡ್ರೈವ್ ಪ್ರಕರಣದ ಹಿಂದೆ ಡಿಸಿಎಂ‌ ಡಿ.ಕೆ. ಶಿವಕುಮಾರ್​ ಅವರ ಕೈವಾಡವಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ನಾನು ಡಿಕೆಶಿ ಅನ್ನು ಪೆನ್​​ಡ್ರೈವ್ ಪ್ಯಾಕ್ಟರಿ ಮಾಲೀಕ ಅಂತ ಹೇಳಲ್ಲ ಎಂದು ಹೇಳಿದರು.
ಇದನ್ನೂ ಓದಿ:ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ: ಈ ಜಿಲ್ಲೆಯಲ್ಲಿ ಮುನ್ಸೂಚನೆ
“ಇದರಲ್ಲಿ ಮಾನ್ಯ ಎಚ್​.ಡಿ. ಕುಮಾರಸ್ವಾಮಿ ಅವರ ಪಾತ್ರ ದೊಡ್ಡದು ಅಂತ ಸಹ ಹೇಳಲ್ಲ. ನಾನು ಹೇಳೋದೇನು ಅಂದ್ರೆ, ಈ ಎಲ್ಲಾ ಘಟನೆಗಳಿಂದ ಕರ್ನಾಟಕ ರಾಜ್ಯದ ಜನತೆ, ದೇಶ ಹಾಗೂ ಪ್ರಪಂಚದ ಮುಂದೆ ಬೆತ್ತಲೆಯಾಗಿ ಬಿಟ್ಟಿದ್ದಾರೆ. ನಮ್ಮಲ್ಲಿ ಹೆಣ್ಣನ್ನು ತಾಯಿ ಅಂತ ಕರೆಯುತ್ತೀವಿ. ತಾಯಿ ಅಂತ‌ ಕರೆಯುವ ಹೆಣ್ಣಿಗೆ ಇಷ್ಟು ಅಪಮಾನ ಆಗಿದ್ದು, ಇದೇ ಮೊದಲನೇ ಬಾರಿ. ಈ ವಿಷಯದಲ್ಲಿ ನಾನು ಸಿದ್ದರಾಮಯ್ಯ, ಗೃಹಮಂತ್ರಿಗೆ ಕೈ ಮುಗಿದು ಪ್ರಾರ್ಥನೆ ಮಾಡ್ತೀನಿ” ಎಂದರು.
“ನಿಮ್ಮ ಕೈಯಲ್ಲಿ ಆಗಲ್ಲ ಎಂಬುದು ಖಚಿತವಾದರೆ ದಯವಿಟ್ಟು ಕೇಸ್​ನ ಸಿಬಿಐಗೆ ಹಸ್ತಾಂತರಿಸಿ. ನಾನು ಡಿ.ಕೆ. ಶಿವಕುಮಾರ್​ ಕುರಿತು ಆಪಾದನೆ ಮಾಡಲ್ಲ. ಕುಮಾರಸ್ವಾಮಿ ಬಗ್ಗೆಯೂ ಆರೋಪ ಮಾಡಲ್ಲ. ನೀವು ಇಬ್ಬರು ಕೂಡ ಒಳ್ಳೆಯವರೆ. ಇಂತಹ ಸಂದರ್ಭ ನಮ್ಮ ರಾಜ್ಯದ ಇತಿಹಾಸದಲ್ಲಿ ಬಂದಿಲ್ಲ. ಅದಕ್ಕೆ ಸಿಬಿಐಗೆ ಕೇಸ್​ ಹಸ್ತಾಂತರಿಸಿ ಎಂದು ಮನವಿ ಮಾಡ್ತಿದ್ದೀನಿ ಅಷ್ಟೇ” ಎಂದು ಹೇಳಿದ್ದಾರೆ.
ಮುಂದಿನ ವರ್ಷ ಈ 4 ಸ್ಟಾರ್​ ಆಟಗಾರರನ್ನು ಕೈಬಿಡಲಿದೆ ಆರ್​ಸಿಬಿ ಫ್ರಾಂಚೈಸಿ! ಫ್ಯಾನ್ಸ್​ ಕಂಗಾಲು

ತಂಡವನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ ಅಂದ್ರೆ, ನೀನು 500 ರನ್​ ಗಳಿಸಿ ಏನು ಫಲ? ಸಂಜುಗೆ ಬೆವರಿಳಿಸಿದ ಮಾಜಿ ಆಟಗಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − eleven =
Remember me
