| ಎನ್.ಎಲ್.ಶಿವಮಾದು ಬೆಂಗಳೂರು
ರಾಜ್ಯದಲ್ಲಿನ ಸಾಕ್ಷರತಾ ಪ್ರಮಾಣವನ್ನು ಹೆಚ್ಚಳ ಮಾಡುವ ಉದ್ದೇಶದಿಂದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಶಾಲೆ- ಕಾಲೇಜಿಗೆ ದಾಖಲಾಗಿ ಪಾಠ ಕೇಳುವ ಅವಕಾಶವನ್ನು ಶಿಕ್ಷಣ ಇಲಾಖೆ ಕಲ್ಪಿಸಿದೆ. ಆಂಧ್ರ ಪ್ರದೇಶದಲ್ಲಿರುವ ಇಂತಹದೊಂದು ನಿಯಮವನ್ನು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಾರಿಗೊಳಿಸಿದೆ. ರಾಜ್ಯದಲ್ಲಿ ಶಾಲಾ ಶಿಕ್ಷಣ, ಪದವಿ ಪೂರ್ವ ಮತ್ತು ಪದವಿ ಶಿಕ್ಷಣದಲ್ಲಿನ ಒಟ್ಟು ದಾಖಲಾತಿ ಅನುಪಾತ (ಜಿಇಆರ್) ವ್ಯತ್ಯಾಸವಿದೆ. ಈ ಸಂಖ್ಯೆಯನ್ನು ಸರಿದೂಗಿರುವ ಮತ್ತು ಉನ್ನತ ಶಿಕ್ಷಣ ಪಡೆಯುವವರು ಸಂಖ್ಯೆ ಹೆಚ್ಚಳ ಮಾಡುವ ಉದ್ದೇಶದಿಂದ ಹೊಸ ನಿಯಮ ರೂಪಿಸಲಾಗಿದೆ ಎಂದು ಇಲಾಖೆ ಅಧೀನ ಕಾರ್ಯದರ್ಶಿ (ಪ್ರೌಢ ಶಿಕ್ಷಣ) ಆದೇಶ ಹೊರಡಿಸಿದ್ದಾರೆ.
ಹೊಸ ನಿಯಮವೇನು?:2023-24ನೇ ಸಾಲಿನಲ್ಲಿ 10 ಮತ್ತು 12ನೇ ತರಗತಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಆಯಾ ತರಗತಿಗಳಿಗೆ ಪ್ರವೇಶ ಒದಗಿಸುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ, ಸರ್ಕಾರ ಅನುಮತಿ ನೀಡಿದೆ. ಜಿಇಆರ್ ಸುಧಾರಿಸಲು ಪ್ರೋತ್ಸಾಹ ನೀಡುವ ಉದ್ದೇಶ ಹೊಂದಲಾಗಿದೆ. ಪ್ರತಿವರ್ಷ 8.21 ಲಕ್ಷ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುತ್ತಾರೆ. ಇದರಲ್ಲಿ ಶೇ.09 ಲಕ್ಷ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಾರೆ. ಪೂರಕ ಪರೀಕ್ಷೆಗೆ ಹಾಜರಾಗುವ ಸಂಖ್ಯೆಯಲ್ಲಿ ಶೇ.45 ಉತ್ತೀರ್ಣರಾಗುತ್ತಾರೆ. ಗ್ರಾಮೀಣ/ನಗರ ವಿದ್ಯಾರ್ಥಿಗಳು, ಪರಿಶಿಷ್ಟ ಜಾತಿ/ಪಂಗಡ, ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪೂರಕ ಪರೀಕ್ಷೆಗಳಲ್ಲಿ ಶೇ.40ರಿಂದ 45ರ ನಡುವೆ ಇರುತ್ತದೆ. ಇಂತಹ ವಿದ್ಯಾರ್ಥಿಗಳ ಶಿಕ್ಷಣ ಇಲ್ಲಿಗೇ ಮೊಟಕುಗೊಳ್ಳಲಿದೆ. ಈ ವಿದ್ಯಾರ್ಥಿಗಳು ಪ್ರತ್ಯೇಕ ಕೋಚಿಂಗ್ ತರಗತಿಗಳನ್ನು ತೆಗೆದುಕೊಳ್ಳುವ ಸಾಧ್ಯತೆ ತೀರಾ ಕಡಿಮೆ ಇದೆ. ಆದ್ದರಿಂದ ಶಾಲೆ ಬಿಡುವವರನ್ನು ತಪ್ಪಿಸಬೇಕಾದರೆ, ಶೈಕ್ಷಣಿಕವಾಗಿ ಅವಕಾಶವನ್ನು ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕ ಕಾರ್ಯತಂತ್ರ ರೂಪಿಸಬೇಕಾಗಿದೆ.
ಹಾಜರಾತಿ ವಿದ್ಯಾರ್ಥಿಗಳ ಆಯ್ಕೆ:ಮರು ದಾಖಲಾತಿ ಪಡೆದ ವಿದ್ಯಾರ್ಥಿಯು ತಾವು ಅನುತ್ತೀರ್ಣರಾಗಿರುವ ವಿಷಯಗಳ ತರಗತಿಗಳಿಗೆ ಮಾತ್ರ ಹಾಜರಾಗಬಹುದು ಅಥವಾ ಎಲ್ಲ ವಿಷಯಗಳಿಗೂ ಹಾಜರಾಗ ಬಹುದು. ಇದು ವಿದ್ಯಾರ್ಥಿಯ ಆಸಕ್ತಿಗೆ ಬಿಟ್ಟ ವಿಷಯವಾಗಿದೆ. ಒಂದು ವೇಳೆ ಎಲ್ಲ ವಿಷಯಗಳನ್ನು ಮತ್ತೊಮ್ಮೆ ಕಲಿತು ಪರೀಕ್ಷೆಗೆ ಹಾಜರಾಗಲು ಕೂಡ ವಿದ್ಯಾರ್ಥಿಗೆ ಅವಕಾಶವಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್​ಕುಮಾರ್ ಸಿಂಗ್ ತಿಳಿಸಿದ್ದಾರೆ.
ಏನೆಲ್ಲ ಅನುಕೂಲ?
.ರೆಗ್ಯುಲರ್ ಶಾಲಾ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ/ದ್ವಿತೀಯ ಪಿಯುಸಿ ಪರೀಕ್ಷೆ-1,2 ಮತ್ತು 3ರಲ್ಲಿ ಅನುತ್ತೀರ್ಣರಾದಲ್ಲಿ ಮತ್ತೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಶಾಲಾ ಅಭ್ಯರ್ಥಿಯಾಗಿ ಸರ್ಕಾರಿ ಶಾಲೆ/ಕಾಲೇಜಿನಲ್ಲಿ ಪ್ರವೇಶ ಪಡೆಯಲು ಇಚ್ಛಿಸಿದಲ್ಲಿ ಮರು ದಾಖಲಾತಿಗೆ ಅವಕಾಶ ಕಲ್ಪಿಸಬೇಕು.
.ಮರು ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಗೆ ಇತರೆ ವಿದ್ಯಾರ್ಥಿಗಳಂತೆ ಶಾಲೆ/ಕಾಲೇಜಿನಲ್ಲಿ ಪೂರ್ಣಾವಧಿ ಎಲ್ಲ ಚಟುವಟಿಕೆಗಳಲ್ಲಿ ಭಾಗವಹಿ ಸಲು ಮತ್ತು ಎಲ್ಲ ವಿಷಯದ ತರಗತಿಗಳಲ್ಲಿ ಪೂರ್ಣಾವಧಿ ಹಾಜರಾಗಿ ಪರೀಕ್ಷೆ ಬರೆಯಬೇಕು.
.ಶಾಲೆಗಳಲ್ಲಿ ಹಾಜರಾಗುವ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕಗಳು, ಶೂ ಮತ್ತು ಸಾಕ್ಸ್, ಮಧ್ಯಾಹ್ನದ ಬಿಸಿಯೂಟ ಸೇರಿ ಎಲ್ಲ ಪ್ರೋತ್ಸಾಹ ಸೌಲಭ್ಯಗಳನ್ನು ಈ ಮಕ್ಕಳಿಗೂ ವಿಸ್ತರಿಸಬೇಕು. ಶುಲ್ಕ ಪಾವತಿಯಲ್ಲಿ ವಿನಾಯಿತಿ ನೀಡಬೇಕು.
.ಇಂತಹ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಆಸಕ್ತಿ ಹುಟ್ಟುವಂತೆ ಮಾಡಲು ಧನಾತ್ಮಕ ಮನೋಭಾವನೆ ಉಂಟಾಗುವಂತೆ ಕ್ರಮ ವಹಿಸುವುದು.
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿಯಲ್ಲಿ ಪ್ರತಿ ವರ್ಷ ಕನಿಷ್ಠ ಒಂದು ಲಕ್ಷ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಾರೆ. ಇಂತಹವರು ಬಹುತೇಕ ಶಿಕ್ಷಣ ಮೊಟಕುಗೊಳಿಸುತ್ತಾರೆ. ವಿದ್ಯಾರ್ಥಿಗಳು ಡ್ರಾಪ್​ಔಟ್ ಆಗಬಾರದು ಎಂಬ ಉದ್ದೇಶದಿಂದ ಮರು ದಾಖಲಾತಿಗೆ ಅವಕಾಶ ಕಲ್ಪಿಸಲಾಗಿದೆ.
| ರಿತೇಶ್​ಕುಮಾರ್ ಸಿಂಗ್ , ಪ್ರಧಾನ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇಲಾಖೆ
ಪತ್ರಕರ್ತರ ಮೇಲಿನ ನಿರ್ಬಂಧ ತೆರುವುಗೊಳಿಸಿ: ವಿಪಕ್ಷ ನಾಯಕ ರಾಹುಲ್ ಗಾಂಧಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
