ಬೆಂಗಳೂರು:2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ 83.89 % ಫಲಿತಾಂಶ ಸಾಧಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಿಲ್ಲಾವಾರು ಫಲಿತಾಂಶವನ್ನು ಪ್ರಕಟ ಗೊಳಿಸಿದೆ.
ಗ್ರಾಮೀಣ ಮತ್ತು ಸರ್ಕಾರಿ ಶಾಲಾ ಮಕ್ಕಳ ಉತ್ತನ ಸಾಧನೆ ಮಾಡಿದ್ದು, ಬಾಲಕರು – 3,41,108( 80.08%) ಹಾಗೂ ಬಾಲಕಿಯರು – 3,59,511( 87.98%) ಪಾಸ್ ಆಗಿದ್ದಾರೆ. ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್‍ karresults.nic.in ನಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ವೀಕ್ಷಿಸಬಹುದು.
ಜಿಲ್ಲಾವಾರು ಫಲಿತಾಂಶ:ಚಿತ್ರದುರ್ಗ ಜಿಲ್ಲೆಯಲ್ಲಿ ಶೇಕಡಾ 96.08ರಷ್ಟು ಫಲಿತಾಂಶ, ಈ ಬರಿ ಚಿತ್ರದುರ್ಗ ಜಿಲ್ಲೆಗೆ ಮೊದಲ ಸ್ಥಾನ. SSLC ಪರೀಕ್ಷೆ ಫಲಿತಾಂಶದಲ್ಲಿ ಮಂಡ್ಯ (96.74) ಜಿಲ್ಲೆಗೆ ಎರಡನೇ ಸ್ಥಾನ ಹಾಗು ಹಾಸನ(96.68) ಜಿಲ್ಲೆಗೆ 3ನೇ ಸ್ಥಾನ. ಕೊನೇ ಸ್ಥಾನದಲ್ಲಿ 75.49 ಯಾದಗಿರಿ ಉಳಿದಿದೆ.
ಬಾಲಕಿಯರೇ ಮೇಲುಗೈ :2023ರ ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆದಿದ್ದವು. ಒಟ್ಟು ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಇವರಲ್ಲಿ 7,00,619 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಸರ್ಕಾರಿ ಶಾಲೆ ಫಲಿತಾಂಶ – 86.74%, ಅನುದಾನ ಶಾಲೆ- 85.64%, ಖಾಸಗಿ – 90.89% ಫಲಿತಾಂಶ ಸಾಧಿಸಿದೆ. 4 ಜನ ವಿದ್ಯಾರ್ಥಿಗಳು 625 ಅಂಕಗಳಿಸಿದ್ದಾರೆ. ಗ್ರಾಮೀಣ ಮತ್ತು ಸರ್ಕಾರ ಶಾಲಾ ಮಕ್ಕಳ ಉತ್ತನ ಸಾಧನೆ ಮಾಡಿದ್ದಾರೆ.
ಸಪ್ತಗಿರಿಗೌಡ ಪರ ಏಕನಾಥ ಶಿಂಧೆ ಪ್ರಚಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + nineteen =
Remember me
