ಕರೊನಾವೈರಸ್ ಪರೀಕ್ಷೆಗಾಗಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರಯೋಗಾಲಯ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ವಿಧಾನಸಭೆಯಲ್ಲಿ ಶೂನ್ಯವೇಳೆ ಕಾಂಗ್ರೆಸ್​ನ ಪ್ರಿಯಾಂಕ್ ಖರ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಕರೊನಾ ಹರಡದಂತೆ ವ್ಯಾಪಕ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು. ರೋಗ ತಡೆಗೆ ಯಾವುದೇ ರೀತಿಯ ಕ್ರಮ ಕೈಗೊಳ್ಳಲು ಸರ್ಕಾರ ಹಿಂದೆ ಬೀಳುವುದಿಲ್ಲ. ಈಗಾಗಲೇ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಆರೋಗ್ಯ ಸಚಿವ ಶ್ರೀರಾಮುಲು ಮಾತನಾಡಿ, ರಾಜ್ಯದಲ್ಲಿ ಕರೊನಾ ವೈರಸ್ ಹರಡಿರುವುದನ್ನು ತಡೆಯಲು 24 ಗಂಟೆಗಳ ಕಾಲ ನಿಗಾ ವಹಿಸಲಾಗಿದೆ. ತಾಲ್ಲೂಕು ಸರ್ಕಾರಿ ಆಸ್ಪತ್ರೆ, ಜಿಲ್ಲಾಸ್ಪತ್ರೆಗಳಲ್ಲಿ ತಲಾ 10 ಹಾಸಿಗೆಗಳನ್ನು ಸೋಂಕು ಪೀಡಿತರ ಚಿಕಿತ್ಸೆಗೆ ಮೀಸಲಿಡಲಾಗಿದೆ. ಬೆಂಗಳೂರಿನ ಬಿಎಸ್​ಎಫ್ ಆಸ್ಪತ್ರೆಯಲ್ಲಿ 300, ಸೇನಾ ಆಸ್ಪತ್ರೆಯಲ್ಲಿ 150 ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಇಟಲಿಯಲ್ಲಿ ಇರುವ ರಾಜ್ಯದ ಕನ್ನಡಿಗರು ಸೋಂಕು ಪೀಡಿತರಾಗಿರುವ ಮಾಹಿತಿ ಇದ್ದು, ರಾಜ್ಯದ ವಿದ್ಯಾರ್ಥಿಗಳನ್ನು ವಾಪಸ್ ಕರೆಸುಲು ಕೇಂದ್ರ ಆರೋಗ್ಯ ಮತ್ತು ವಿದೇಶಾಂಗ ಸಚಿವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದರು.
ಲೈಸೆನ್ಸ್ ರದ್ದು:ಮಾಸ್ಕ್ ಮತ್ತಿತರ ವೈದ್ಯಕೀಯ ವಸ್ತುಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುವ ಔಷಧ ಅಂಗಡಿಗಳ ಲೈಸೆನ್ಸ್ ರದ್ದು ಮಾಡಲಾಗುವುದು ಎಂದು ಎಚ್ಚರಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − eleven =
Remember me
