ಬೆಂಗಳೂರು:ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ತಂಪು ಪಾನೀಯ ಮತ್ತು ಸಿಹಿತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು, ಹಂತಹಂತವಾಗಿ ಒಟ್ಟು 1,400 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.
ಮಂಗಳವಾರ ತಮ್ಮನ್ನು ಇಲ್ಲಿ ಭೇಟಿಯಾದ ಮುತ್ತಯ್ಯ ಅವರೊಂದಿಗೆ ಸಚಿವರು ಈ ಸಂಬಂಧ ಮಾತುಕತೆ ನಡೆಸಿದರು. ಬಳಿಕ ಮಾತನಾಡಿದ ಸಚಿವರು, ಬದನಕುಪ್ಪೆಯಲ್ಲಿ ಮುರಳೀಧರನ್ ಅವರು ‘ಮುತ್ತಯ್ಯ ಬ್ರಿವರೇಜಸ್ ಮತ್ತು ಕನ್ಫೆಕ್ಷನರೀಸ್’ ಎನ್ನುವ ಬ್ರ್ಯಾಂಡ್ ನಲ್ಲಿ ತಮ್ಮ ಉದ್ದಿಮೆ ಆರಂಭಿಸುತ್ತಿದ್ದು, ಶುರುವಿನಲ್ಲಿ 230 ಕೋಟಿ ರೂಪಾಯಿ ಹೂಡಿಕೆಗೆ ಯೋಜನೆ ರೂಪಿಸಲಾಗಿತ್ತು. ನಂತರ ಅದು ಈಗ ಸಾವಿರ ಕೋಟಿ ಮುಟ್ಟುತ್ತಿದೆ. ಮುಂದಿನ ದಿನಗಳಲ್ಲಿ 1,400 ಕೋಟಿ ಆಗಲಿದೆ ಎಂದು ಮುತ್ತಯ್ಯ ತಮಗೆ ತಿಳಿಸಿದ್ದಾರೆ ಎಂದು ವಿವರಿಸಿದರು.
ಇದಕ್ಕಾಗಿ ಅವರಿಗೆ ಈಗಾಗಲೇ 46 ಎಕರೆ ಭೂಮಿ ಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆಲ ಸಣ್ಣಪುಟ್ಟ ತೊಡಕುಗಳಿದ್ದವು. ಅವುಗಳನ್ನು ಕೂಡಲೇ ಸರಿಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬದನಕುಪ್ಪೆಯಲ್ಲಿ ಮುಂಬರುವ ಜನವರಿಯಲ್ಲಿ ಉತ್ಪಾದನಾ ಚಟುವಟಿಕೆ ಆರಂಭವಾಗಲಿದೆ ಎಂದು ಅವರು ನುಡಿದರು.
ಮುಂಬರುವ ದಿನಗಳಲ್ಲಿ ಮುತ್ತಯ್ಯ ಧಾರವಾಡದಲ್ಲಿ ಕೂಡ ತಮ್ಮ ಉದ್ಯಮದ ಒಂದು ಘಟಕ ಸ್ಥಾಪಿಸಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ, ಕೆಐಎಡಿ ಸಿಇಒ ಡಾ.ಮಹೇಶ, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಈ ಸಂದರ್ಭದಲ್ಲಿ ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 1 =
Remember me
