ಬೆಂಗಳೂರು:ಬರಬಾಧಿತ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ, ಅಂತರ್ಜಲ ವೃದ್ಧಿ ಉದ್ದೇಶಿತ ಎತ್ತಿನಹೊಳೆ ಯೋಜನೆ ಇನ್ನೆರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದರು.
ಸುದ್ದಿಗಾರರಿಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆಗೆ ಈ ಯೋಜನೆಯಿಂದ ಶಾಶ್ವತ ಪರಿಹಾರ ಸಿಗಲಿದೆ.
ಆದರೆ ವಿವಿಧ ಕಾರಣಗಳಿಂದ ಯೋಜನೆ ಕಾಮಗಾರಿ ಮಂದಗತಿಯಲ್ಲಿದೆ. ವಿಳಂಬದ ಪರಿಣಾಮ ಅಂದಾಜು ವೆಚ್ಚದ ಗಾತ್ರ ಹೆಚ್ಚುತ್ತಾ ಸಾಗಿದೆ. ಪ್ರಾರಂಭದಲ್ಲಿ ಅಂದಾಜಿಸಿದ್ದ 13,500 ಕೋಟಿ ರೂ. ವೆಚ್ಚ ಪರಿಷ್ಕೃತವಾಗಿದೆ. ಪ್ರಸ್ತುತ 22 ಸಾವಿರ ಕೋಟಿ ರೂ.ಗಳಿಗೇರಿದ್ದು, ಎರಡು ವರ್ಷಗಳೊಳಗೆ ಪೂರ್ಣಗೊಳಿಸಲು ಸರ್ಕಾರ ಆದ್ಯತೆ ನೀಡಿದೆ ಎಂದು ತಿಳಿಸಿದರು.
ಹಿಂದಿನ ಬಿಜೆಪಿ ಸರ್ಕಾರ ನಾಲ್ಕು ವರ್ಷಗಳ ಅವಧಿಯಲ್ಲಿ ಯೋಜನೆಗೆ ಅನುದಾನ ನೀಡದ ಕಾರಣ ಕಾಮಗಾರಿ ಸ್ಥಗಿತವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ವಸ್ತುಸ್ಥಿತಿ ಪರಿಶೀಲಿಸಿ ಕಾಮಗಾರಿ ವೇಗವಾಗಿ ಪೂರ್ಣಗೊಳಿಸಿ, ಉದ್ದೇಶ ಈಡೇರಿಸುವ ಜತೆಗೆ ಯೋಜನಾಗಾತ್ರ ಏರಿಕೆ ತಡೆಯಲು ಗಮನ ನೀಡಿದೆ ಎಂದರು.
ಯೋಜನೆಯಡಿ ನಿರ್ಮಿಸಲಿರುವ ಜಲಾಗಾರಗಳಿಗೆ ಭೂಸ್ವಾಧೀನದ ಅಗತ್ಯವಿದೆ. ಇದಕ್ಕಾಗಿ ನಿಗದಿತ ಪರಿಹಾರ ಮೊತ್ತವೇ ಸ್ವಲ್ಪಮಟ್ಟಿಗೆ ಸಮಸ್ಯೆಯನ್ನು ಜಟಿಲವಾಗಿಸಿತ್ತು. ಎಲ್ಲ ರೈತರಿಗೂ ಒಂದೇ ರೀತಿ ಸಮಾನ ಪರಿಹಾರ ನಿಗದಿಪಡಿಸಲು ಒತ್ತಾಯಿಸಲಾಗಿದೆ ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದರು.
ಜಲ ಸಂಗ್ರಹಕ್ಕೆ ಸ್ವಾಧೀನಪಡಿಸಿಕೊಳ್ಳಲಿರುವ ಕೊರಟಗೆರೆ ರೈತರ ಜಮೀನಿಗೆ ಎಕರೆ ಎಂಟು ಲಕ್ಷ ರೂ. ಹಾಗೂ ದೊಡ್ಡಬಳ್ಳಾಪುರದಲ್ಲಿ ಎಕರೆಗೆ 22 ಲಕ್ಷ ರೂ. ಪರಿಹಾರ ನಿಗದಿಪಡಿಸಿದ್ದು, ಸಮಾನ ಪರಿಹಾರ ನೀಡಬೇಕೆಂಬ ಕೊರಟಗೆರೆ ರೈತರ ಬೇಡಿಕೆಗೆ ಸಹಮತವಿದೆ ಎಂದು ಹೇಳಿದರು.
ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ವು ಬೆಂಗಳೂರಿನಲ್ಲಿ ಕಚೇರಿ ತೆರೆದಿದೆ. ಅಕ್ರಮ ಚಟುವಟಿಕೆಗಳ ಮಾಹಿತಿ ಆಧರಿಸಿ ದಾಳಿ ಮಾಡುವುದು ಸಹಜ. ಎನ್‌ಐಎ ತಂಡ ಈ ಬಗ್ಗೆ ಕಲೆವು ಸಲ ರಾಜ್ಯ ಪೊಲೀಸರೊಂದಿಗೆ ಮಾಹಿತಿ ಹಂಚಿಕೊಳ್ಳುತ್ತಾರೆ. ಅವರ ಕರ್ತವ್ಯ ಅವರು ನಿಭಾಯಿಸುತ್ತಾರೆ ಎಂದು ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 12 =
Remember me
