ಬೆಂಗಳೂರು:ಎತ್ತಿನಹೊಳೆ ಯೋಜನೆಯಿಂದ ಪರಿಸರದ ಪ್ರಶ್ನೆ ಬರುವ ಭಾಗದಲ್ಲಿ ಕೆಲಸ ಪೂರ್ಣಗೊಂಡಿದ್ದು, ಈವರೆಗೂ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರದಂತೆ ಕೆಲಸ ಮಾಡಿಕೊಂಡು ಬರಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ನೇನಿದ್ದರು ಬಯಲು ಸೀಮೆಯಲ್ಲಿ ಕೆಲಸಗಳು ನಡೆಯುತ್ತಿವೆ. ಪರಿಸರ ನಾಶ ಆಗುತ್ತಿದೆ ಎಂಬುದು ವನ್ಯಜೀವಿ ಮಂಡಳಿಯ ಪ್ರಶ್ನೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯವರು ಉತ್ತರ ನೀಡುತ್ತಾರೆ ಎಂದು ತಿಳಿಸಿದರು.
ನಮ್ಮ ಪಕ್ಷದ ವಿಚಾರ ಬಿಜೆಪಿಯವರಿಗೇಕೆ ಬೇಕು? ಅವರ ಪಕ್ಷದಲ್ಲಿರುವ ವ್ಯತ್ಯಾಸ, ಜಗಳನ್ನು ಸರಿಪಡಿಸಿಕೊಳ್ಳಲಿ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ತಿರುಗೇಟು ನೀಡಿದರು.
ನಾವೇನು ಸಿಎಂ ಬದಲಾವಣೆ ಮಾಡುವುದಿಲ್ಲ. ಆ ಪಕ್ಷದವರೇ ಬದಲಾವಣೆ ಮಾಡುತ್ತಾರೆ ಎಂಬ ಅಶೋಕ್ ಹೇಳಿಕೆಗೆ ನವ್ಮ ಪಕ್ಷವನ್ನು ನಾವು ನೋಡಿಕೊಳ್ಳುತ್ತೇವೆ. ತಮ್ಮ ಪಕ್ಷದಲ್ಲಿನ ಜಗಳ ಸರಿಪಡಿಸಿಕೊಳ್ಳಲಿ ಎಂದು ಚಾಟಿ ಬೀಸಿದರು.
ಸಚಿವ ಎಂ.ಬಿ.ಪಾಟೀಲ್ ಅವರ ಮನೆಗೆ ಭೇಟಿ ನೀಡಿದ ವಿಚಾರ ಕುರಿತು ಮಾತನಾಡಿ, ಎತ್ತಿನಹೊಳೆ ಯೋಜನೆ ಕಾರ್ಯಕ್ರಮಕ್ಕೆ ಜೊತೆಯಲ್ಲೇ ಹೋಗುವ ಬಗ್ಗೆ ಮಾತನಾಡಿದ್ದೆವು. ನಮ್ಮ ಮನೆಗೆ ಬನ್ನಿ. ಉಪಹಾರ ಸೇವಿಸಿ ಇಲ್ಲಿಂದಲೇ ಹೋಗೋಣ ಎಂದು ಎಂ.ಬಿ.ಪಾಟೀಲರು ಹೇಳಿದ್ದರು. ಅವರ ಮನೆಯಲ್ಲಿದ್ದಾಗ ಮುಖ್ಯಮಂತ್ರಿಯವರು ಮನೆಯಿಂದ ಸಕಲೇಶಪುರಕ್ಕೆ ಹೋರಡಲು ಸಿದ್ಧವಾಗಿದ್ದಾರೆ ಎಂಬ ಮಾಹಿತಿ ಬಂತು. ನಾವು ಜೊತೆಯಲ್ಲೆ ಬರುತ್ತೇವೆ ಎಂದು ಸಿಎಂ ಅವರಿಗೆ ತಿಳಿಸಿ ಹೋಗಿದ್ದೇವೆ. ಇದಕ್ಕೆ ಬೇರೆ ಅರ್ಥಕಲ್ಪಿಸುವ ಅಗತ್ಯವಿಲ್ಲ ಎಂದರು.
ಸಿಎಂ ಬದಲಾವಣೆ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿ, ಇವತ್ತಿಗೆ ಸಿಎಂ ಬದಲಾವಣೆಯ ಪ್ರಶ್ನೆ ಹುಟ್ಟಿಕೊಳ್ಳುವುದಿಲ್ಲ. ಈಗಾಗಲೇ ಮುಖ್ಯಮಂತ್ರಿಗಳಿದ್ದಾರೆ, ಆಡಳಿತ ನಡೆಯುತ್ತಿದೆ. ಕೋರ್ಟ್‌ನಲ್ಲಿ ಕೇಸ್ ಇದೆ. ಏನಾಗುತ್ತದೆ ಎಂಬುದನ್ನು ಕಾದು ನೋಡೋಣ. ಆ ಬಗ್ಗೆ ಚರ್ಚೆ ಪ್ರಾರಂಭ ಮಾಡುವಂತ ಅಗತ್ಯ ಕಾಣುತ್ತಿಲ್ಲ ಎಂದು ಹೇಳಿದರು.
ಆಡಳಿತದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುತ್ತಿಲ್ಲ. ಪ್ರತಿಯೊಬ್ಬ ಸಚಿವರು ಇಲಾಖೆಯ ಎಲ್ಲ ಕೆಲಸಗಳನ್ನು ಮಾಡುತ್ತಿದ್ದಾರೆ. ಅಧಿಕಾರಿಗಳಾಗಲಿ, ಸರ್ಕಾರದ ಕಾರ್ಯದರ್ಶಿಗಳು ಯಾರು ಸಹ ಸುಮ್ಮನೆ ಕುಳಿತಿಲ್ಲ. ಕೋರ್ಟ್‌ನಲ್ಲಿ ಆರ್ಗ್ಯೂಮೆಂಟ್ ಇರುವುದರಿಂದ ಮುಖ್ಯಮಂತ್ರಿಗಳು ಯಾವುದೇ ಕಾರ್ಯಕ್ರಮಕ್ಕೆ ಹೋಗಿರಲಿಕ್ಕಿಲ್ಲ. ಆದರೆ, ಆಡಳಿತ ಸುಗಮವಾಗಿ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು
ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಎಲ್ಲರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಸಚಿವರ, ಶಾಸಕರ ಮಕ್ಕಳು ಎಂಬ ಪ್ರಶ್ನೆ ಬರುವುದಿಲ್ಲ. ಸಮರ್ಥರಿದ್ದರೆ ಆಯ್ಕೆಯಾಗುತ್ತಾರೆ. ಇಲ್ಲವಾದರೆ ಬೇರೆಯವರನ್ನು ಆಯ್ಕೆ ಮಾಡಲಾಗುತ್ತದೆ. ಸ್ವಭಾವಿಕವಾಗಿ ಸ್ಪರ್ಧಿಸಿರಬಹುದು. ಆದರೆ, ಅವರನ್ನೇ ಆಯ್ಕೆ ಅಮಡುತ್ತಾರೆ ಎಂದು ಹೇಳಲಾಗುವುದಿಲ್ಲ ಎಂದು ಪರಮೇಶ್ವರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:eight + twenty =
Remember me
