ನವದೆಹಲಿ/ಶ್ರೀನಗರ:ಎರಡು ದಿನಗಳಿಂದ ಕಾಶ್ಮೀರ ಪ್ರವಾಸದಲ್ಲಿರುವ ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡ ಅವರು, ತಾವು ಪ್ರಧಾನಿಯಾದ 28 ವರ್ಷಗಳ ಬಳಿಕ ದೇಶದ ಕೊನೆಯ ಭಾಗದಲ್ಲಿರುವ ಕಾಶ್ಮೀರದ ಶಂಕರಾಚಾರ್ಯರ ಬೆಟ್ಟದಲ್ಲಿರುವ ಜ್ಯೇಷ್ಟೇಶ್ವರ ಶಿವನ ದೇವಸ್ಥಾನವೆಂದೂ ಕರೆಯಲ್ಪಡುವ ಶಂಕರಾಚಾರ್ಯ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದಿದ್ದಾರೆ.
ಇದನ್ನೂ ಓದಿ:ಗಾಂಧಿ ಬಜಾರ್ ವಿದ್ಯಾರ್ಥಿ ಭವನದಲ್ಲಿ ಮಸಾಲೆ ದೋಸೆ ಸವಿದ ಬ್ಯಾಡ್ಮಿಂಟನ್ ದಂತಕಥೆ ಪ್ರಕಾಶ್ ಪಡುಕೋಣೆ!
ಇಂದು ಬೆಳಗ್ಗೆ (ಆಗಸ್ಟ್ 30) ಕಾಶ್ಮೀರದ ಶಂಕರಾಚಾರ್ಯರ ಬೆಟ್ಟದ ಮೇಲಿರುವ ಜ್ಯಷ್ಟೇಶ್ವರ ಶಿವನ ದೇವಸ್ಥಾನವೆಂದೂ ಕರೆಯಲ್ಪಡುವ ಶಂಕರಾಚಾರ್ಯ ದೇವಸ್ಥಾನಕ್ಕೆ ತೆರಳಿ ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಇನ್ನೂ ಈ ಕುರಿತು ಅವರು ಈ ದೇವಸ್ಥಾನಕ್ಕೆ ಭೇಟಿ ನೀಡಬೇಕೆಂಬುದು ನನ್ನ ಜೀವಮಾನದ ಕನಸಾಗಿತ್ತು ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ಶಿವನ ದೇವಸ್ಥಾನವೆಂದೇ ಕರೆಯಲ್ಪಡುವ ಈ ಪವಿತ್ರ ಶಂಕರಾಚಾರ್ಯ ದೇವಸ್ಥಾನದಲ್ಲಿ ದೇವರ ದರ್ಶನ‌ ಪಡೆದು ಪ್ರಾಥನೆ ಸಲ್ಲಿಸಿದ ಮಾಜಿ ಪ್ರಧಾನಿಗಳು. ಈ ಕ್ಷಣ ನನ್ನ ಬದುಕಿನ ಅನನ್ಯ ಕ್ಷಣ. ಶಿವ ದರ್ಶನದಿಂದ ಧನ್ಯನಾಗಿದ್ದೇನೆ ಎಂದು ಭಾವುಕರಾದರು.
ನನ್ನನ್ನು ಇಲ್ಲಿಗೆ ಆ ಶಿವನೇ ಕರೆಸಿಕೊಂಡಿದ್ದಾನೆ ಎಂದು ಮಾಜಿ ಪ್ರಧಾನಿಗಳು ಹೇಳಿದ ಅವರು, ಬಹಳ ಹೊತ್ತು ದೇವಾಲಯದಲ್ಲಿಯೇ ಇದ್ದರು. ಮಳೆಯ ನಡುವೆಯೇ CRPF ಪೊಲೀಸರು ಹಾಗೂ ಕಾಶ್ಮೀರ ಪೊಲೀಸರ ಸಹಾಯದಿಂದ ಮೆಟ್ಟಿಲು ಹತ್ತಿದ ಮಾಜಿ ಪ್ರಧಾನಿಗಳು ಶಿವನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಇಲ್ಲಿಗೆ ಭೇಟಿ ನೀಡಿ ಶಿವನ‌‌ ದರ್ಶನ ಪಡೆಯಬೇಕೆಂಬುದು ನನ್ನ ಜೀವಮಾನದ ಆಸೆಯಾಗಿತ್ತು. ಇವತ್ತು ನನ್ನ ಆಸೆ ನೆರವೇರಿದೆ. ನನ್ನನ್ನು ಇಲ್ಲಿಗೆ ಕರೆಸಿಕೊಂಡ ಆ ದೇವರಿಗೆ ಆಭಾರಿಯಾಗಿದ್ದೇನೆ ಎಂದು ಅವರು ಹೇಳಿದರು.ದೇಗುಲಕ್ಕೆ ತೆರಳಿದ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳಿಗೆ CRPF ಪೊಲೀಸರು ಹಾಗೂ ಕಾಶ್ಮೀರ ಪೊಲೀಸರು ಭದ್ರತೆ ಒದಗಿಸಿದ್ದರು.
ಗುರುವಾರ ಉರಿಯ ಜಲವಿದ್ಯುತ್ ಸ್ಥಾವರಕ್ಕೆ ಭೇಟಿ ನೀಡಿದ್ದ ಅವರು, ಅಲ್ಲಿಗೆ ತೆರಳಲು ಶ್ರೀನಗರದಿಂದ ಬಾರಮುಲ್ಲಾವರೆಗೂ ರೈಲಿನಲ್ಲಿ ಪ್ರಯಾಣ ಮಾಡಿದ್ದರು. ಮಾಜಿ ಪ್ರಧಾನಿಗಳು ಇಲ್ಲಿನ ದಾಲ್ ಸರೋವರಕ್ಕೂ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆದರೆ, ಮಳೆಯ ಕಾರಣ ಅಲ್ಲಿಗೆ ಭೇಟಿ ನೀಡಲಾಗಲಿಲ್ಲ. ಮುಂದಿನ ಮಾರ್ಚ್ ತಿಂಗಳಿನಲ್ಲಿ ಮತ್ತೆ ಇಲ್ಲಿಗೆ ಬರುವೆ ಮಾಜಿ ಪ್ರಧಾನಿ ದೇವೇಗೌಡ ಅವರು ತಿಳಿಸಿದ್ದಾರೆ.
ಮುಸ್ಲಿಂ ಶಾಸಕರಿಗೆ ಶುಕ್ರವಾರ ಪ್ರಾರ್ಥನೆಗಿದ್ದ ವಿರಾಮ ರದ್ದು ಮಾಡಿದ ಅಸ್ಸಾಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − ten =
Remember me
