ಬೆಂಗಳೂರು:ಪ್ರಧಾನಿ ಮೋದಿ ಅವರ ಆಕ್ಷನ್ ಪ್ಲ್ಯಾನ್ ಅವರ ಸಹೋದ್ಯೋಗಿಗಳಿಗೂ ಗೊತ್ತಾಗುವುದಿಲ್ಲ. ಹೀಗಾಗಿ ಕುಮಾರಸ್ವಾಮಿ ಕೇಂದ್ರ ಮಂತ್ರಿ ಮಾಡುವ ವಿಚಾರದಲ್ಲಿ ಅವರ ಮನಸ್ಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿ ಆಗುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಮುಂದೆ ಅ ಬಗ್ಗೆ ಚರ್ಚೆ ಆಗಿಲ್ಲ. ಆದರೆ, ಮೋದಿ ಅವರ ಮನಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದರು.
ಒಂದು ಬಾರಿ ಸಂಸತ್ ಸದಸ್ಯರಾದವರನ್ನು ಮಂತ್ರಿ ಮಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುತ್ತಾರಾ? ಇಲ್ಲವಾ? ಎಂದು ಕೇಳಲಾದ ಪ್ರಶ್ನೆಗೂ ಉತ್ತರಿಸಿದ ಅವರು, ನರೇಂದ್ರ ಮೋದಿ ಅವರು ಏನು ಹೇಳುತ್ತ್ತಾರೋ ನೊಡೋಣ. ಅವರ ಮನಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಮೋದಿ ಅವರು ಹೇಳಿದಂತೆ ಕುಮಾರಸ್ವಾಮಿ ಕೇಳುತ್ತಾರೆ. ಕುಮಾರಸ್ವಾಮಿ ಸ್ಪರ್ಧೆ ಮಾಡುವ ಪರಿಸ್ಥಿತಿ ಬಂದರೆ ನಾವೆಲ್ಲ ಕುಳಿತು ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಯಾವುದೇ ಕಾರಣಕ್ಕೂ ನಾನು ಲೋಕಸಭೆಗೆ ಸ್ಪರ್ಧೆ ಮಾಡುವುದಿಲ್ಲ. 92 ವರ್ಷ ಆಯಿತು. ರಾಜ್ಯಸಭೆಯ ಅವಧಿ ಇನ್ನು ಎರಡೂವರೆ ವರ್ಷ ಇದೆ. ರಾಜ್ಯಸಭೆಯೆ ಸಾಕು. ಚುನಾವಣೆ ವೇಳೆ ಮೈತ್ರಿಕೂಟದ ಪರವಾಗಿ ಪ್ರಚಾರ ಮಾಡುತ್ತೇನೆ. ನಮ್ಮ ಪಕ್ಷದ ಪರವಾಗಿ ಪ್ರವಾಸ ಮಾಡುತ್ತೇನೆ. ಬಿಜೆಪಿಯವರು ಎಲ್ಲಿಗೆ ಕರೆದರೂ ಹೋಗುತ್ತೇನೆ. ಮಾತನಾಡುವ ಶಕ್ತಿ ಇದೆ, ನನಪಿನ ಶಕ್ತಿ ಇದೆ ಎಂದು ದೇವೇಗೌಡ ಹೇಳಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − twelve =
Remember me
