ಚಾಮರಾಜನಗರ:ಇಂದು ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಬೋರ್ಡ್ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಇದನ್ನೂ ಓದಿ:ಚಂಡಿಕಾಯಾಗದ ಬಳಿಕ ಬಿ.ಎಸ್. ಯಡಿಯೂರಪ್ಪ ಹೇಳಿದ್ದೇನು?
“ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ. ಇವೆರಡೂ ಕಾಂಗ್ರೆಸ್ ಕ್ಷೇತ್ರಗಳು. ಮತ್ತೆ ನಮ್ಮ ‘ಕೈ’ಗೆ ಬರಲೇಬೇಕು, ಬರುತ್ತವೆ. ಹಿಂದಿನ ಬಾರಿ ಕೆಲವು ಕಾರಣಗಳಿಂದಾಗಿ ಅತ್ಯಂತ ಕಡಿಮೆ ಮತಗಳಿಂದ ನಮಗೆ ಹಿನ್ನೆಡೆಯಾಗಿತ್ತು. ಆದರೆ ಈ ಬಾರಿ ಬಿಜೆಪಿ ಪರ ಯಾವ ಕಾರಣಗಳೂ ಇಲ್ಲ” ಎಂದರು.
“ರಾಜ್ಯದಲ್ಲಿ ಬಿಜೆಪಿ ವಿರೋಧಿಯಾದ ಅಲೆ ಜೋರಾಗಿದೆ. ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ತುತ್ತಾಗಿದ್ದ ರಾಜ್ಯದ ಎಲ್ಲಾ ಕುಟುಂಬಗಳಿಗೆ ಕಾಂಗ್ರೆಸ್ ಗ್ಯಾರಂಟಿಗಳು ನೆಮ್ಮದಿ ತರಿಸಿರುವುದನ್ನು ನಾಡಿನ ಜನತೆ ಹೃದಯಪೂರ್ವಕವಾಗಿ ಒಪ್ಪಿಕೊಂಡಿದ್ದಾರೆ. ನಾವು ನಡೆಸಿರುವ ಹಲವು‌ ಸಮೀಕ್ಷೆಗಳಲ್ಲಿ ಮೈಸೂರು, ಚಾಮರಾಜನಗರ ಕ್ಷೇತ್ರಗಳಲ್ಲಿ ಗೆಲ್ಲುವುದೂ ಸೇರಿ 20 ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ ಎನ್ನುವ ವರದಿಗಳು ಬಂದಿವೆ. ಹೀಗಾಗಿ‌ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಕಾಂಗ್ರೆಸ್ ಪರವಾದ ಅಭೂತಪೂರ್ವ ಫಲಿತಾಂಶ ಹೊರಗೆ ಬರಲಿದೆ” ಎಂದರು.
ಇದನ್ನೂ ಓದಿ:ಬೇಸಿಗೆ ಬೇಗೆಗೆ ಮಡಕೆ ನೀರ ಬಯಕೆ! ರಾಜಧಾನಿಯಲ್ಲಿ ಗರಿಗೆದರಿದ ವ್ಯಾಪಾರ
“ಹತ್ತು ವರ್ಷ ಅಧಿಕಾರ ಮಾಡಿದ ನರೇಂದ್ರ ಮೋದಿ ಸರ್ಕಾರಕ್ಕೆ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಹೀಗಾಗಿ ಶ್ರೀರಾಮನ ಹೆಸರಲ್ಲಿ ಮತ ಕೇಳುವಂತಾಗಿದೆ. ರಾಮ ಸರ್ವರಿಗೂ ಸೇರಿದವನು. ನನ್ನ ಹೆಸರಲ್ಲೇ ರಾಮನಿದ್ದಾನೆ.‌ ಹತ್ತು ವರ್ಷ ಕೇಂದ್ರದಲ್ಲಿ ಅಧಿಕಾರ ನಡೆಸಿದ ಬಿಜೆಪಿಗರಿಗೆ ಜನರ ಬಳಿ ಹೋಗಲು ಮುಖವಿಲ್ಲ. ಏಕೆಂದರೆ ಈ 10 ವರ್ಷಗಳಲ್ಲಿ ಬಿಜೆಪಿ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ” ಎಂದು ವ್ಯಂಗ್ಯವಾಡಿದರು.
“ಅದಕ್ಕೇ ಕೇವಲ ಮೋದಿಯವರ ಮುಖ ತೋರಿಸಿ ಚುನಾವಣೆ ಮಾಡ್ತೀವಿ ಎಂದು ಬಿಜೆಪಿ ಹೆಣಗಾಡುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ 50-60 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದೆ. ಹೀಗಾಗಿ ಬಿಜೆಪಿ ಸುಳ್ಳುಗಳ ಮೊರೆ ಹೋಗಿದೆ. ನನ್ನ ಬಗ್ಗೆ, ನಮ್ಮ ನಾಯಕರ ಬಗ್ಗೆ, ಪಕ್ಷದ ಬಗ್ಗೆ ಸರಣಿ ಸುಳ್ಳುಗಳನ್ನು ಹೇಳುತ್ತಾ, ಸುಳ್ಳುಗಳ ಆಧಾರದಲ್ಲೇ ಚುನಾವಣೆ ಮಾಡುತ್ತಿದೆ” ಎಂದರು.
ಇದನ್ನೂ ಓದಿ:ಭಾರೀ ಬೇಸರ ಹೊರಹಾಕಿದ ಪವನ್ ಕಲ್ಯಾಣ್ ಫ್ಯಾನ್ಸ್​! ಕಾರಣ ಹೀಗಿದೆ
“ಸಮಾಜದಲ್ಲಿರುವ ಅಸಮಾನತೆ ಹೋಗಬೇಕು. ಆದರೆ ಬಿಜೆಪಿ ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದೆ. ಸಮಾಜದಲ್ಲಿ ಬಿರುಕು ಮೂಡಿದಷ್ಟೂ ಅಸಮಾನತೆ ಬೆಳೆಯುತ್ತದೆ. ಶ್ರೀರಾಮಚಂದ್ರ, ಸೀತಾ, ಲಕ್ಷ್ಮಣ ಎಲ್ಲರೂ ನಮಗೆ ಪೂಜ್ಯರು‌. ಈಗ ಬಿಜೆಪಿ ಕೇವಲ ಜೈ ಶ್ರೀರಾಮ್ ಕೂಗುತ್ತದೆ. ನಾನು ಜೈ ಸೀತಾರಾಮ್ ಎಂದು ನಿರಂತರವಾಗಿ ಕೂಗುತ್ತೇನೆ. ನನ್ನ ಹೆಸರಿನಲ್ಲೇ ರಾಮನಿದ್ದಾನೆ. ನಮ್ಮ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸಿಗುತ್ತಿದೆ. ನಾವು ನುಡಿದಂತೆ ನಡೆದಿದ್ದೇವೆ. ಬಿಜೆಪಿ ಮತ್ತು ಮೋದಿ ಹೇಳಿದ್ದರಲ್ಲಿ ಒಂದನ್ನೂ ಮಾಡಿಲ್ಲ” ಎಂದು ಆರೋಪಿಸಿದರು.
ನನಗೆ ಸಾಕಾಗಿದೆ, 1 ಗಂಟೆಗೆ 5 ಲಕ್ಷ ರೂ. ಕೊಡಿ, ಬನ್ನಿ… ವೈರಲ್ ಆಗ್ತಿದೆ ಈ ನಿರ್ದೇಶಕನ ಹೇಳಿಕೆ!

ಶ್ರೀಲೀಲಾ ಜತೆ ನಟಿಸಲು ಸ್ಟಾರ್​ ನಟರಿಗೆ ಚಿಂತೆ! ಇದು ಮುಂದುವರಿದ್ರೆ ‘ಕಿಸ್’​ ಬೆಡಗಿಗೆ ಸಂಕಷ್ಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 14 =
Remember me
