ಶಿವಮೊಗ್ಗ:ರಾಜ್ಯಾದ್ಯಂತ ಪ್ರತಿ ಎರಡು ಜಿಲ್ಲೆಗಳನ್ನು ಒಗ್ಗೂಡಿಸಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಪಿಡಿಒಗಳ ಸಭೆ ಕರೆದು ಗ್ರಾಮೀಣ ಭಾಗದ ಸಮಸ್ಯೆ ಇತ್ಯರ್ಥಕ್ಕೆ ತ್ವರಿತ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್​ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುವರ್ಣ ಸಂಸ್ಕೃತಿ ಭವನದಲ್ಲಿ ಪಿಡಿಒಗಳಿಗೆ ಕೆಟಿಟಿಪಿ ಕಾಯ್ದೆ, ಆಡಿಟ್ ಮತ್ತು ಆಯವ್ಯಯ, ನರೇಗಾ, ಕಂದಾಯ ವಸೂಲಿ ಬಗ್ಗೆ ಶುಕ್ರವಾರ ಹಮ್ಮಿಕೊಂಡಿದ್ದ ಒಂದು ದಿನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಯಾವುದೇ ಸರ್ಕಾರ ಅಥವಾ ಯೋಜನೆಗಳು ಶಾಶ್ವತವಲ್ಲ. ಆದರೆ ಸರ್ಕಾರಗಳು ಜಾರಿಗೊಳಿಸಿದ ಯೋಜನೆ ಅರ್ಹರಿಗೆ ತಲುಪಿಸುವುದು ಸವಾಲಿನ ಕೆಲಸ. ಆ ನಿಟ್ಟಿನಲ್ಲಿ ಸೌಲಭ್ಯಗಳನ್ನು ಗ್ರಾಮೀಣ ಪ್ರದೇಶದ ಜನರಿಗೆ ತಲುಪಿಸುವಲ್ಲಿ ಪಿಡಿಒಗಳು ಸಂಪರ್ಕದ ಕೊಂಡಿಯಾಗಿದ್ದಾರೆ ಎಂದರು.
ರೈತರ ಅಭಿವೃದ್ಧಿಯಿಂದ ಮಾತ್ರ ಹಳ್ಳಿಗಳ ಅಭಿವೃದ್ಧಿ ಸಾಧ್ಯ. ಹಳ್ಳಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಆಗಲಿದೆ. ಆ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಕಾರ್ಯಗಳ ಅನುಷ್ಠಾನದಲ್ಲಿ ಪಂಚಾಯತ್​ರಾಜ್ ಅಧಿಕಾರಿಗಳ ಪಾತ್ರ ಬಹಳ ಪ್ರಮುಖ. ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ನೇರವಾಗಿ ಜನಪ್ರತಿನಿಧಿಗಳ ಗಮನಕ್ಕೆ ತಂದು ಸರಿಪಡಿಸಬೇಕು. ಪಿಡಿಒಗಳ ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು.
ವಿಲೇವಾರಿ ಘಟಕಗಳಿಗೆ ಒತ್ತು:ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಆರಂಭಿಸಲು ಕ್ರಮಕೈಗೊಳ್ಳಬೇಕು. ಪ್ರಸ್ತುತ ಜಿಲ್ಲೆಯ 271ರ ಪೈಕಿ ಕೇವಲ 19 ಗ್ರಾಪಂಗಳಲ್ಲಿ ವಿಲೇವಾರಿ ಘಟಕಕ್ಕೆ ಜಮೀನು ಗುರುತಿಸಲಾಗಿದೆ. ಶೀಘ್ರವೇ ಎಲ್ಲ ಗ್ರಾಪಂಗಳಲ್ಲಿ ಜಮೀನು ಗುರುತಿಸಿ ಘಟಕ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಪಿಡಿಒಗಳಿಗೆ ಸೂಚನೆ ನೀಡಿದರು.
ಗ್ರಾಮೀಣ ಭಾಗದಲ್ಲಿ ವಸತಿ ಯೋಜನೆ ಪೂರ್ಣಗೊಳಿಸಲು ಆದ್ಯತೆ ನೀಡಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿಗತಿ ಬಗ್ಗೆ ಪ್ರತಿ ಗ್ರಾಪಂ ಹೊರಗೆ ಬೋರ್ಡ್ ಹಾಕಿ ಮಾಹಿತಿ ಪ್ರಕಟಿಸಬೇಕು. ಹೊಸದಾಗಿ ಘಟಕ ಅಗತ್ಯ ಇರುವ ಕಡೆಗಳಲ್ಲಿ ಪ್ರಸ್ತಾವನೆ ಸಲ್ಲಿಸಬೇಕು ಎಂದು ಹೇಳಿದರು.
ಪ್ರಸಕ್ತ ಬಜೆಟ್​ನಲ್ಲಿ ಶೌಚಾಲಯ ನಿರ್ವಣದ ಸಹಾಯಧನ ಹೆಚ್ಚಿಸಲು ಪ್ರಯತ್ನಿಸಲಾಗುವುದು. ಇದೇ ರೀತಿ ಸಾಮೂಹಿಕ ಶೌಚಗೃಹಗಳ ನಿರ್ವಹಣೆಗೂ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು. ಉದ್ಯೋಗ ಖಾತ್ರಿ ಯೋಜನೆ ಬಾಕಿ ಮೊತ್ತ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪ್ರಾಸ್ತಾವಿಕ ಮಾತನಾಡಿದ ಪಿಡಿಒ ಸಂಘದ ಜಿಲ್ಲಾಧ್ಯಕ್ಷ ಶ್ರೀರಾಮ್ ಪ್ರತಿಯೊಂದು ಇಲಾಖೆಯೂ ಕಾಗದ ರಹಿತವಾಗುತ್ತಿದ್ದು ಆನ್​ಲೈನ್ ವ್ಯವಸ್ಥೆ ಜಾರಿಯಾಗುವಲ್ಲಿ ಪಿಡಿಒಗಳ ಪಾತ್ರ ದೊಡ್ಡದಿದೆ. ಸ್ವಚ್ಛ ಭಾರತ, ಪ್ಲಾಸ್ಟಿಕ್ ನಿಷೇಧ, ಜಲಧಾರೆ, ಜಲಾಮೃತ ಯೋಜನೆಗಳ ಅನುಷ್ಠಾನದಲ್ಲೂ ಪಿಡಿಒಗಳ ಶ್ರಮ ಸಾಕಷ್ಟಿದೆ ಎಂದರು.
ಮುಂದಿನ ಹಂತದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲಾಗುತ್ತಿದೆ. ಆದರೆ ನಮಗೂ ಸಾಕಷ್ಟು ಸಮಸ್ಯೆಗಳು ಮತ್ತು ಬೇಡಿಕೆಗಳಿದ್ದು ಬಗೆ ಹರಿಸುವತ್ತ ಸರ್ಕಾರ ಗಮನ ಹರಿಸಬೇಕಿದೆ ಎಂದು ಹೇಳಿದರು.
ಜಿಪಂ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಸದಸ್ಯ ವೀರಭದ್ರಪ್ಪ ಪೂಜಾರ್, ಸಿಇಒ ಎಂ.ಎಲ್.ವೈಶಾಲಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್ ಇಲಾಖೆ ಅಧಿಕಾರಿಗಳ ಮತ್ತು ನೌಕರರ ಸಂಘದ ಅಧ್ಯಕ್ಷ ಡಿ.ಕೇಶವಮೂರ್ತಿ ಇದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:18 + 13 =
Remember me
