ಬೆಂಗಳೂರು:ರಾಜ್ಯದಲ್ಲಿ ಈವರೆಗೆ ಕರೊನಾ ಸೋಂಕು ಕಾಣಿಸಿಕೊಳ್ಳದ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶಿವಮೊಗ್ಗ, ಚಿತ್ರದುರ್ಗ, ಹಾಸನ, ಚಾಮರಾಜನಗರ, ಹಾವೇರಿ, ಕೋಲಾರ, ಯಾದಗಿರಿ, ಚಿಕ್ಕಮಗಳೂರು, ರಾಯಚೂರು, ರಾಮನಗರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಈವರೆಗೆ ಸೋಂಕು ಕಾಣಿಸಿಕೊಂಡಿಲ್ಲ. ಆದರೂ, ಸೋಂಕು ಇಲ್ಲ ಎಂದು ನಿರ್ಲಕ್ಷ್ಯವಹಿಸದೆ ಯಾವುದೇ ವ್ಯಕ್ತಿಯಲ್ಲಿ ಜ್ವರ ಮತ್ತು ಉಸಿರಾಟದ ತೊಂದರೆಗೆ ಸಂಬಂಧಿಸಿದ ಕಾಯಿಲೆ ಕಾಣಿಸಿಕೊಂಡವರಿಂದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಬೇಕು.
ಏ. 17ರಿಂದ 19ರವರೆಗೆ ಪ್ರತಿದಿನ 100 ಮಾದರಿಗಳನ್ನು ಲ್ಯಾಬ್​ಗೆ ಕಳುಹಿಸಬೇಕು. ನಂತರದ ದಿನಗಳಲ್ಲಿ ತಲಾ 50 ಜನರ ಮಾದರಿ ಸಂಗ್ರಹಿಸಿ ಕಳುಹಿಸಲು ಸೂಚಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 7 =
Remember me
