ಬೆಂಗಳೂರು:ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್ (ಇವಿಎಂ) ಕಂಟ್ರೋಲ್ ಯುನಿಟ್​ಗಳು ಇಂಜಿನಿಯರ್​ ಒಬ್ಬರ ಮನೆಯಲ್ಲಿ ಪತ್ತೆಯಾಗಿದೆ. ಅವರ ಮನೆಯ ಡೆಮಾಲಿಷನ್ ಸಂದರ್ಭ ಈ ಕಂಟ್ರೋಲ್ ಯುನಿಟ್​ಗಳು ಕಂಡುಬಂದಿವೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದುಡಪನಹಳ್ಳಿ ಗ್ರಾಮದ ಮನೆಯಲ್ಲಿ ಈ ಇವಿಎಂ ಕಂಟ್ರೋಲ್ ಯುನಿಟ್​ಗಳು ಪತ್ತೆಯಾಗಿವೆ. ಈ ಮನೆ ದೊಡ್ಡಬಳ್ಳಾಪುರ ನಿರ್ಮಿತಿ ಕೇಂದ್ರದ ಇಂಜಿನಿಯರ್ ಶಿವಕುಮಾರ್ ಅವರದ್ದಾಗಿದೆ.
ಇದನ್ನೂ ಓದಿ:‘ಮೆದುಳು ತಿನ್ನುವ ಅಮೀಬಾ’ ಹತ್ತನೇ ತರಗತಿ ವಿದ್ಯಾರ್ಥಿಯ ಜೀವ ತೆಗೆಯಿತು!
ಇವು 2018ರ ಚುನಾವಣೆಯಲ್ಲಿ ಬಳಸಿ ತಿರಸ್ಕೃತಗೊಂಡಿದ್ದ ಇವಿಎಂ ಕಂಟ್ರೋಲ್ ಯುನಿಟ್​ಗಳಾಗಿವೆ. ಇವುಗಳ ಪತ್ತೆ ಹಿನ್ನೆಲೆಯಲ್ಲಿ ತಹಶೀಲ್ದಾರ್ ಮೋಹನಕುಮಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಅಮರನಾಥ ಯಾತ್ರೆಗೆ ತೆರಳಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರು; 80 ಜನರ ರಕ್ಷಣೆಗಾಗಿ ಕ್ರಮ ಕೈಗೊಳ್ಳಲು ಸಿಎಂ ಸೂಚನೆ
ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ಈ ಮನೆಯನ್ನು ನೆಲಸಮಗೊಳಿಸಲಾಗಿದೆ. ಈ ಮನೆಯಿಂದ 7 ಇವಿಎಂಗಳನ್ನು ವಶಕ್ಕೆ ಪಡೆದ ತಹಶೀಲ್ದಾರ್​ ಅವುಗಳನ್ನು ಜಿಲ್ಲಾಧಿಕಾರಿ ಶಿವಶಂಕರ್ ಅವರಿಗೆ ಹಸ್ತಾಂತರಿಸಿ ಮುಂದಿನ ಕ್ರಮಕ್ಕಾಗಿ ವರದಿ ನೀಡಿದ್ದಾರೆ. ಈ ಇವಿಎಂ ಕಂಟ್ರೋಲ್ ಯುನಿಟ್​ಗಳು ಈ ಮನೆಯಲ್ಲಿ ಏಕೆ-ಹೇಗೆ ಬಂದವು ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ.
ಕಾಮಕುಮಾರ ಸ್ವಾಮೀಜಿಯ ಭೀಕರ ಕೊಲೆ; ತಲೆ ಇಬ್ಭಾಗ, ಕೈ-ಕಾಲುಗಳೂ ಕಟ್, ಶವ 9 ತುಂಡು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 9 =
Remember me
