ಬೆಂಗಳೂರು:ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಜಲಾನಯನ ಜಿಲ್ಲೆಗಳಲ್ಲಿ ಕಾವೇರಿ ರಕ್ಷಣಾ ಯಾತ್ರೆ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕಾವೇರಿ ಅಣೆಕಟ್ಟು ಪ್ರದೇಶದ ಆರು ಜಿಲ್ಲೆಗಳಾದ ರಾಮನಗರ, ಮಂಡ್ಯ, ಹಾಸನ, ಮೈಸೂರು, ಚಾಮರಾಜನಗರ, ಕೊಡಗು ಬಿಜೆಪಿ ಪ್ರತಿನಿಧಿಗಳ ಸಭೆ ಬಳಿಕ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ ಸುಪ್ರೀಂ ಕೋರ್ಟ್​ ತೀರ್ಪಿನ ಸಂಬಂಧ ಸರ್ಕಾರದ ನಡೆಯನ್ನು ಕಾದು ನೋಡುತ್ತೇವೆ ಎಂದು ಹೇಳಿದ್ಧಾರೆ.
ಕಾವೇರಿ ವಿಚಾರದಲ್ಲಿ ಸರ್ಕಾರ ವಿಫಲವಾಗಿದೆ. ಜೂನ್ ತಿಂಗಳಲ್ಲಿಯೇ ಕಾವೇರಿ ನೀರು ನಿರ್ವಹಣೆ ಆಗಬೇಕಿತ್ತು. ನಾವು 30%ರಷ್ಟು ನೀರನ್ನು ನಮ್ಮ ರೈತರಿಗೆ ಬಿಟ್ಟಿಲ್ಲ. ತಮಿಳುನಾಡು ಎರಡನೇ ಬೆಳೆ ಬೆಳೆಯುತ್ತಿದೆ‌. ಸರ್ಕಾರ CWRC, CWMA ಮುಂದೆ ಸರಿಯಾಗಿ ಪ್ರತಿಪಾದಿಸಲಿಲ್ಲ. ಸರ್ಕಾರ ರಾಜ್ಯದ ಹಿತ ಬಲಿ ಕೊಟ್ಟು ತಮಿಳುನಾಡಿನ ಎರಡನೇ ಬೆಳೆಗೆ ನೀರು ಬಿಟ್ಟಿದೆ ಎಂದು ಕಿಡಿಕಾರಿದ್ದಾರೆ.
ಇ ವಿಚಾರವಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್​ಗೆ ಸರಿಯಾಗಿ ಮನವರಿಕೆ ಮಾಡಿಕೊಟ್ಟಿಲ್ಲ. ನೀರು ಬಿಟ್ಟು ನಮಗೆ ಸಮಸ್ಯೆ ಆಗಿದೆ. ರಾಜ್ಯ ಸರ್ಕಾರ ರಕ್ಷಣಾತ್ಮಕ ಆಗಿ ನಡೆದುಕೊಳ್ಳುತ್ತಿದೆ. ಈ ಸರ್ಕಾರ ರಾಜ್ಯದ ನೀರಿನ ಹಕ್ಕು ರಕ್ಷಣೆ ಮಾಡಿಲ್ಲ. ನೀರಿನ ಹಕ್ಕು ರಕ್ಷಣೆ ಮಾಡುವ ಬದ್ಧತೆ, ಯೋಗ್ಯತೆ ಈ ಸರ್ಕಾರಕ್ಕೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮುಂದೆ ರಾಜ್ಯದ ವಾಸ್ತವಾಂಶ ಇಡಲಿ CWRC ಮುಂದೆಯೂ ಸಮರ್ಥ ವಾದ ಮಾಡಲಿ, ಜಲ ಸಂಪನ್ಮೂಲ ಸಚಿವರಾದ ಡಿಕೆ ಶಿವಕುಮಾರ್​ ಪರ ಅವರ ವೈಯಕ್ತಿಕ ಕೇಸ್ ಗಳಿಗೆ ಒಳ್ಳೊಳ್ಳೆಯ ವಕೀಲರು ಇದ್ದಾರೆ. ಹೀಗಾಗಿ ಅವರ ಕೇಸ್​ಗಳಲ್ಲಿ ಯಶಸ್ಸು ಸಿಗುತ್ತಿದೆ. ಅದೇ ರೀತಿ ಕಾವೇರಿ ವಿಚಾರಕ್ಕೂ ಒಳ್ಳೊಳ್ಳೆಯ ವಕೀಲರನ್ನು ನಿಯೋಜಿಸಲಿ ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಜಾತಿ ನಿಂದನೆ ಪ್ರಕರಣ; ಸಚಿವ ಸುಧಾಕರ್​ಗೆ ರಿಲೀಫ್ ನೀಡಿದ ಹೈಕೋರ್ಟ್​
ರಾಜ್ಯ ಸರ್ಕಾರ ಕಾವೇರಿ ಜಲಾನಯನ ಪ್ರದೇಶದ ರೈತರ ಬೆಳೆಗಳಿಗೆ ಸೂಕ್ತ ಸಮಯದಲ್ಲಿ ನೀರು ಬಿಡದೇ ಇರುವುದರಿಂದ ರೈತರ ಬೆಳೆ ಒಣಗಿದ್ದು, ಕಾವೇರಿ ಕೊಳ್ಳದ ರೈತರಿಗೆ ಪ್ರತೀ ಎಕರೆಗೆ 25 ಸಾವಿರ ರೂ ಪರಿಹಾರ ಕೊಡುವಂತೆ ನಾವು ಸರ್ಕಾರಕ್ಕೆ ಆಗ್ರಹಿಸುತ್ತಿದ್ದೇವೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು.
ನೀರು ಬಿಟ್ಟರೆ ಬಿಜೆಪಿಯಿಂದ ಕಾವೇರಿ ಜಲಾನಯನ ಪ್ರದೇಶಗಳ ಎಲ್ಲ ತಾಲ್ಲೂಕುಗಳಲ್ಲೂ ಕಾವೇರಿ ಜನ ಜಾಗೃತಿ ಯಾತ್ರೆ ಮಾಡಲು ನಿರ್ಧಾರಿಸಲಾಗಿದೆ. ಪಾದಯಾತ್ರೆ, ಸತ್ಯಾಗ್ರಹ, ಪ್ರತಿಭಟನೆ ರೂಪದಲ್ಲಿ ಹೋರಾಟ ನಡೆಸಲಾಗುವುದು. ಸೆಪ್ಟಂಬರ್ 21 ರಂದು ಈ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದ್ದು, ಸೆ. 21 ರಂದು ಹೋರಾಟದ ಮುಂದಿನ ರೂಪುರೇಷೆ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಎಳೆದು ತರುವ ಪ್ರಯತ್ನ ಮಾಡುತ್ತಿದೆ. ಇದರಲ್ಲಿ ಕೇಂದ್ರದ ಮಧ್ಯಸ್ಥಿಕೆ ಅಗತ್ಯ ಏ‌ನಿದೆ? ರಾಜ್ಯ ಸರ್ಕಾರ ಎಲ್ಲದಕ್ಕೂ ಕೇಂದ್ರವನ್ನು ಎಳೆದು ತರುವುದನ್ನು ಬಿಡಲಿ. ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವ ಮೂಲಕ ಕುಂಟು ನೆಪ ಹುಡುಕುತ್ತಿದೆ. ಕೇಂದ್ರದ ಬದಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಜತೆ ಈ ಸರ್ಕಾರ ಪತ್ರ ವ್ಯವಹಾರ ನಡೆಸಲಿ. ಡಿಎಂಕೆ ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷ. ಕಾವೇರಿ ವಿಚಾರಕ್ಕೆ ಇವರು ಸ್ಟಾಲಿನ್ಗೆ ಪತ್ರ ಬರೆಯಲಿ ನೋಡೋಣ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
