ಬೆಂಗಳೂರು:ಕಾಂಗ್ರೆಸ್​ ಅಧಿಕಾರಕ್ಕೆ ಬಂದಿದ್ದು, ತನ್ನ ಕಾಲದ ಇಂದಿರಾ ಕ್ಯಾಂಟೀನ್​ನಂತಹ ಹಳೆ ಯೋಜನೆಗಳನ್ನು ವಾಪಸ್ ಶುರು ಮಾಡಲು ಮುಂದಾಗಿದೆ. ಅದರೊಂದಿಗೆ ಕೆಲ ಕಾಯ್ದೆಗಳನ್ನೂ ಹಿಂಪಡೆಯುವ ಪ್ರಯತ್ನದಲ್ಲಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಪಶು ಸಂಗೋಪನಾ ಸಚಿವರು ಈ ಹಿಂದೆ ಗೋವುಗಳನ್ನ ಕಡಿದರೆ ಏನಾಗುತ್ತೆ ಎಂದು ಹೇಳಿದ್ದ ಬಗ್ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೆಂಡ ಕಾರಿದ್ದಾರೆ. ಟ್ವೀಟ್​ ಮೂಲಕ ಸಚಿವ ಕೆ ವೆಂಕಟೇಶ್ ಹೇಳಿಕೆ ಖಂಡಿಸಿರುವ ಮಾಜಿ ಸಿಎಂ ಬೊಮ್ಮಾಯಿ, “ಗೋವುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಆಶ್ಚರ್ಯ ತಂದಿದ್ದು, ಅವರ ಹೇಳಿಕೆ ಖಂಡನೀಯ ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ” ಎಂದು ಬರೆದಿದ್ದಾರೆ.
ಒಟ್ಟು 5 ಟ್ವೀಟ್​ಗಳಲ್ಲಿ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ,
” ಸಚಿವ ಕೆ. ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ, ತಮಗೆ ನೀಡಿರುವ ಖಾತೆಯನ್ನು ಬದಲಾಯಿಸಲಿ ಎಂದೊ, ಹೈ ಕಮಾಂಡ್ ಮೆಚ್ಚಿಸಲೊ?
ಗೋಹತ್ಯೆ ನಿಷೇಧ ಪ್ರಥಮವಾಗಿ ಪ್ರತಿಪಾದಿಸಿದ್ದು ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿಯವರು. ಪೂಜ್ಯ ಮಹಾತ್ಮಾ ಗಾಂಧಿ ಪ್ರತಿಪಾದಿಸಿದ ಗೋಹತ್ಯೆ ನಿಷೇಧವನ್ನು 1960 ರ ದಶಕದಲ್ಲಿ ಹಲವಾರು ರಾಜ್ಯಗಳಲ್ಲಿ ಕಾನೂನು ತರಲಾಗಿದೆ.
ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋ ಹತ್ಯೆ ಮಾಡುವ ಕಾರ್ಖಾನೆಗಳು ತಲೆ ಎತ್ತಲಿವೆ. ನಮ್ಮ ಸರ್ಕಾರದ ಅವಧಿಯಲ್ಲಿ ಕಾನೂನು ಬಾಹಿರ ಕಸಾಯಿ ಖಾನೆಗಳನ್ನು ತಡೆಗಟ್ಟಲು ಕಾನೂನು ತರಲಾಗಿದೆ. ಕರ್ನಾಟಕದಲ್ಲಿ ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೆ ಬಲ ತುಂಬಿದ್ದೇವೆ‌.
ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋ ಹತ್ಯೆ ಮಾಡುವ ಕಾರ್ಖಾನೆಗಳು ತಲೆ ಎತ್ತಲಿವೆ. ನಮ್ಮ ಸರ್ಕಾರದ ಅವಧಿಯಲ್ಲಿ ಕಾನೂನು ಬಾಹಿರ ಕಸಾಯಿ ಖಾನೆಗಳನ್ನು ತಡೆಗಟ್ಟಲು ಕಾನೂನು ತರಲಾಗಿದೆ. ಕರ್ನಾಟಕದಲ್ಲಿ ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೆ ಬಲ ತುಂಬಿದ್ದೇವೆ‌”
ಎಂದಿದ್ದಾರೆ.

ಗೋವುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಆಶ್ಚರ್ಯ ತಂದಿದ್ದು, ಅವರ ಹೇಳಿಕೆ ಖಂಡನೀಯ ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ.1/5
— Basavaraj S Bommai (@BSBommai)June 4, 2023

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − five =
Remember me
