ನವದೆಹಲಿ:ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್​ ಷಾರನ್ನು ಭೇಟಿ ಮಾಡಿ ರಾಜ್ಯದ ಹಲವು ವಿಷಯಗಳ ಕುರಿತು ಮಾತುಕತೆ ನಡೆಸಿದ್ದಾರೆ. ಬಿಜೆಪಿ ವರಿಷ್ಠರ ಭೇಟಿಗಾಗಿ ಮಾಜಿ ಸಿಎಂ ಬೊಮ್ಮಾಯಿ ಸೋಮವಾರ ದೆಹಲಿಯತ್ತ ಪ್ರಯಾಣ ಬೆಳೆಸಿದ್ದರು. ಆದರೆ, ರಾಷ್ಟ್ರೀಯ ನಾಯಕರ ಭೇಟಿ ಸಾಧ್ಯವಾಗಿರಲಿಲ್ಲ
ರಾಜ್ಯ ವಿಧಾನಸಭೆ ಹಾಗೂ ವಿಧಾನಪರಿಷತ್​ ವಿಪಕ್ಷ ನಾಯಕ ಆಯ್ಕೆ ವಿಳಂಬ ಬೆನ್ನಲ್ಲೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಗೃಹ ಸಚಿವ ಅಮಿತ್​ ಷಾರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ. ಉಭಯ ಸದನಗಳಿಗೆ ವಿಪಕ್ಷ ನಾಯಕರ ಹೆಸರನ್ನೂ ಅಂತಿಮಗೊಳಿಸುವ ನಿಟ್ಟಿನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ದೆಹಲಿಗೆ ಬರುವಂತೆ ಬುಲಾವ್​ ಬಂದಿತ್ತು ಎಂದು ಹೇಳಲಾಗಿದೆ.
BJP leader and former Karnataka CM Basavaraj Bommai meets Union Home Minister Amit Shah in Delhi.(Photo source: Basavaraj Bommai)pic.twitter.com/TgmbbERee0
ಇದನ್ನೂ ಓದಿ:ಕೊಯ್ಲಿಗೆ ಬಂದಿದ್ದ ಬಾಳೆ ಗಿಡಗಳನ್ನು ಕಡಿದು ಹಾಕಿದ ವಿದ್ಯುತ್​ ಇಲಾಖೆಯ ಅಧಿಕಾರಿಗಳು
ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ನನಗೆ ವರಿಷ್ಠರು ದೆಹಲಿಗೆ ಬರುವಂತೆ ಹೇಳಿರಲಿಲ್ಲ. ಸಂಸತ್​ ಅಧಿವೇಶನದ ಸಮಯದಲ್ಲಿ ದೆಹಲಿಗೆ ಬರುವಂತೆ ರಾಜ್ಯದ ಸಂಸದರು ಆಹ್ವಾನಿಸಿದ ಮೇರೆಗೆ ನಾನು ಬಂದಿದ್ದೇನೆ. ನಾನು ಕೆಲಸದ ನಿಮಿತ್ತ ಸಂಸದರನ್ನೂ ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಆ ಸಮಯದಲ್ಲಿ ರಾಷ್ಟ್ರೀಯ ನಾಯಕರ ಜೊತೆ ಭೇಟಿ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ವಿಪಕ್ಷ ನಾಯಕರ ಆಯ್ಕೆಯಲ್ಲಿ ವಿಳಂಬ ಕುರಿತು ಪ್ರತಿಕ್ರಿಯಿಸಿ ಈಗ ಸಂಸತ್​ ಅಧಿವೇಶನ ನಡೆಯುತ್ತಿದ್ದು, ಆ ನಂತರ ಪಂಚ ರಾಜ್ಯ ಚುನಾವಣೆಗೆ ತಯಾರಾಗಬೇಕಿದೆ. ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಸೂಕ್ತ ಸಮಯದಲ್ಲಿ ನಿರ್ಧಾರವನ್ನೂ ತೆಗೆದುಕೊಳ್ಳುತ್ತಾರೆ. ಮುಂದಿನ ದಿನಗಳಲ್ಲಿ ರಾಜ್ಯದ ಬಗ್ಗೆ ಗಮನ ಹರಿಸಲಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿ ಭೇಟಿ ಕುರಿತು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 15 =
Remember me
