ಬೆಂಗಳೂರು:ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ತಯಾರಿ ಆರಂಭಿಸಿದ್ದು, ಯಾವ ಕ್ಷಣದಲ್ಲಿ ಬೇಕಾದರೂ ದಿನಾಂಕ ಘೋಷಿಸುವ ಸಾಧ್ಯತೆ ಇದೆ. ಈಗಾಗಲೇ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಬಿಜೆಪಿ ಎರಡನೇ ಲಿಸ್ಟ್​ ರಿಲೀಸ್​ ಮಾಡುವ ಸಾಧ್ಯತೆ ಕೂಡ ಹೆಚ್ಚಿದೆ.
ಇನ್ನೂ ಬಿಜೆಪಿಯ ಭದ್ರಕೋಟೆ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿರುವ ಡಿ.ವಿ. ಸದಾನಂದಗೌಡರಿಗೆ ಈ ಬಾರಿಯ ಟಿಕೆಟ್​ ಕೈತಪ್ಪಿದ್ದು, ಕಣದಿಂದ ಹಿಂದೆ ಸರಿಯುವುದಾಗಿ ಮಾಜಿ ಸಿಎಂ ಸದಾನಂದಗೌಡ ಮಾರ್ಮಿಕವಾಗಿ ನುಡಿದಿದ್ದಾರೆ. ಅದಕ್ಕೆ ಪೂರಕವೆಂಬಂತೆ ಅವರು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ, ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ.
pic.twitter.com/bhJSuDfhRT
ಇದನ್ನೂ ಓದಿ:ಟೂರ್ನಿ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್​ಗೆ ಶಾಕ್​; ಗಾಯದ ಸಮಸ್ಯೆಯಿಂದ ಸ್ಟಾರ್​ ಆಟಗಾರ ಅಲಭ್ಯ
ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು ಎಂದು ಮಾಜಿ ಸಿಎಂ ಸದಾನಂದಗೌಡ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.
ಇತ್ತ ಮಾಜಿ ಸಿಎಂ, ಹಾಲಿ ಸಂಸದ ಸದಾನಂದಗೌಡ ಕಣದಿಂದ ಹಿಂದೆ ಸರಿಯುವ ಬಗ್ಗೆ ಮಾರ್ಮಿಕವಾಗಿ ನುಡಿದ ಬೆನ್ನಲ್ಲೇ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಅಂತಿಮವಾಗಿ ಬಿಜೆಪಿ ಹೈಕಮಾಂಡ್​ ಯಾರಿಗೆ ಮಣೆ ಹಾಕಲಿದೆ ಎಂದು ಕಾದು ನೋಡಬೇಕಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:thirteen + eight =
Remember me
