ಮೈಸೂರು:ವರುಣಾ ಕ್ಷೇತ್ರದಲ್ಲಿ ಭರ್ಜರಿ ಗೆಲುವಿನತ್ತ ಮುನ್ನಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಿಹಿ ಸುದ್ದಿಯ ನಡುವೆ ಕಹಿ ಸುದ್ದಿಯೊಂದು ಬಂದೆರಗಿದೆ. ಸಿದ್ದರಾಮಯ್ಯ ಅವರ ಬಾವ ಇಂದು ನಿಧನರಾಗಿದ್ದಾರೆ.
ಸಿದ್ದರಾಮಯ್ಯ ಅವರ ಸ್ವಂತ ಸಹೋದರಿ ಶಿವಮ್ಮ ಅವರ ಪತಿ ರಾಮೇಗೌಡ ಅವರು ಅನಾರೋಗ್ಯದಿಂದಾಗಿ ಕೊನೆಯುಸಿರೆಳೆದಿದ್ದಾರೆ. ರಾಮೇಗೌಡ ಅವರಿಗೆ 69 ವರ್ಷ ವಯಸ್ಸಾಗಿತ್ತು.
ಅನಾರೋಗ್ಯ ಹಿನ್ನೆಲೆಯಲ್ಲಿ ರಾಮೇಗೌಡರನ್ನು ಮೈಸೂರಿನ ಜೆಎಸ್​ಎಸ್​ ಆಸ್ಪತ್ರೆಗೆ ಇಂದು ಬೆಳಗ್ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ರಾಮೇಗೌಡ ಅವರು ಮೃತಪಟ್ಟಿದ್ದಾರೆ. ಮೃತರು ಸಿದ್ದರಾಮನಹುಂಡಿಯಲ್ಲಿ ನ್ಯಾಯಬೆಲೆ ಅಂಗಡಿಯನ್ನು ನಡೆಸುತ್ತಿದ್ದರು. ಅವರ ನಿಧನದಿಂದ ಸಿದ್ದು ಕುಟುಂದ ದುಃಖ ಸಾಗರದಲ್ಲಿ ಮುಳುಗಿದೆ. ಇಂದು ಮಧ್ಯಾಹ್ನ ರಾಮೇಗೌಡ ಅವರ ಅಂತಿಮ ಕ್ರಿಯೆ ನೇರವೇರಲಿದೆ.
ವರುಣಾ ಕ್ಷೇತ್ರದಲ್ಲಿ ಬಿಜೆಪಿಯ ಸೋಮಣ್ಣ ವಿರುದ್ಧ ಸಿದ್ದರಾಮಯ್ಯ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಆದರೆ, ಅವರ ಬಾವ ನಿಧನರಾಗಿರುವ ಸುದ್ದಿ ಸಂಭ್ರಮಾಚರಣೆಯನ್ನು ಕಳೆಗುಂದುವಂತೆ ಮಾಡಿದೆ.
ಕರ್ನಾಟಕ ಚುನಾವಣಾ ರಣಕಣದಲ್ಲಿ ಘಟಾನುಘಟಿ ನಾಯಕರಿಗೆ ಹಿನ್ನಡೆ!

ಸಚಿವ ವಿ. ಸೋಮಣ್ಣಗೆ ಎರಡೂ ಕ್ಷೇತ್ರಗಳಲ್ಲೂ ಭಾರೀ ಹಿನ್ನಡೆ

ಬೇಬಿ ಬಂಪ್ ಫೋಟೋ ಶೇರ್ ಮಾಡಿದ ನಟಿ: ಮಗುವಿನ ತಂದೆ ಯಾರು ಎಂಬುದೇ ಅಚ್ಚರಿಯ ಪ್ರಶ್ನೆ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eight − seven =
Remember me
