ಮೈಸೂರು:ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಿಂದೊಮ್ಮೆ ಮುಖ್ಯಮಂತ್ರಿಯಾಗುವ ಅವಕಾಶವಿತ್ತು. ಆದರೆ ಯಾಕೆ ಆಗಲಿಲ್ಲ ಅನ್ನೋದು ಎಚ್​.ಡಿ.ದೇವೇಗೌಡರಿಗೆ ಚೆನ್ನಾಗಿ ಗೊತ್ತು. ಅವರೇ ಅದನ್ನು ಹೇಳಿದರೆ ಒಳಿತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭಾನುವಾರ ಸಿದ್ದರಾಮಯ್ಯನ ಹುಂಡಿಯಲ್ಲಿ ಹೇಳಿದ್ದಾರೆ.
ಸಿಎಂ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಹೆಸರು ವಿರೋಧ ಮಾಡಿದ್ದು ನಾನಂತೂ ಅಲ್ಲ. ಯಾರು ಖರ್ಗೆಯವರ ಹೆಸರನ್ನು ತಿರಸ್ಕಾರ ಮಾಡಿದ್ದು ದೇವೇಗೌಡರೇ ಹೆಸರು ಹೇಳಲಿ, ಖರ್ಗೆ ಹೆಸರು ಪ್ರಸ್ತಾಪವಾದಾಗ ಅದನ್ನು ತಿರಸ್ಕರಿಸಿದ್ದು ಯಾರೆಂಬುದ ನನಗೆ ಗೊತ್ತಿಲ್ಲ. ಅಕಸ್ಮಾತ್​ ದೇವೇಗೌಡರಿಗೆ ಗೊತ್ತಿದ್ರೆ ಅದನ್ನು ಬಹಿರಂಗ ಪಡಿಸಲಿ ಎಂದು ಸವಾಲು ಹಾಕಿದ್ದಾರೆ.
ಇದನ್ನೂ ಓದಿ:ಹುಷಾರು.. ಹಾಲು ಹಾಲಾಹಲವಾಗಿದೆ ನೋಡಿ…
ಸಿದ್ದರಾಮಯ್ಯ ಪಕ್ಷ ಕಟ್ಟಿಲ್ಲ ಎಂಬ ದೇವೇಗೌಡರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ದೇವೇಗೌಡರು ಪಾಪ. ಅವರ ಬಗ್ಗೆ ನಾನು ಪ್ರತಿಕ್ರಿಯೆ ನೀಡಬಾರದು ಅಂದುಕೊಂಡಿದ್ದೇನೆ. 1999ರಲ್ಲಿ ಜೆಡಿಎಸ್ ಅಧ್ಯಕ್ಷರಾಗಿದ್ದು ಯಾರು? ಜೆಡಿಎಸ್ ಪಕ್ಷದಲ್ಲಿ 6 ವರ್ಷ ಕಾಲ‌ ರಾಜ್ಯಾಧ್ಯಕ್ಷನಾಗಿದ್ದು ನಾನು. ಹಾಗಾದರೆ ನಾನು ಅಧ್ಯಕ್ಷನಾಗಿದ್ದು ವ್ಯರ್ಥನಾ? ಎಂದು ದೇವೇಗೌಡರಿಗೆ ಪ್ರಶ್ನೆ ಹಾಕಿದ್ದಾರೆ.  (ದಿಗ್ವಿಜಯ ನ್ಯೂಸ್)
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಗಾಂಧಿ ನಗರದ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:4 × two =
Remember me
