ಬೆಂಗಳೂರು:ತಿದ್ದುಪಡಿ ರೂಪದ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಲು ಹೊರಟ ಸರ್ಕಾರದ ಕ್ರಮವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಮಂಡಲದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆಯನ್ನೇ ಮಾಡದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವುದು ಸರ್ಕಾರದ ಹೇಡಿತನವನ್ನು ತೋರಿಸುತ್ತದೆ. ಚರ್ಚೆ ಮಾಡಿದರೆ ಈ ಮಸೂದೆಯ ಹಿಂದಿನ ದುರುದ್ದೇಶಗಳು ಅನಾವರಣಗೊಂಡು ತಮ್ಮ ಬಣ್ಣ ಬಯಲಾಗುತ್ತದೆ ಎಂಬ ಭಯ ಎಂದರು. ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಪಡೆಯಬೇಕು ಮತ್ತು ಗೋರಕ್ಷಣೆಯ ಹೆಸರಲ್ಲಿ ಪುಂಡಾಟಿಕೆ ನಡೆಸುವವರಿಗೆ ರಕ್ಷಣೆ ಕೊಡಬೇಕು ಎಂಬ ಎರಡು ದುರುದ್ದೇಶಗಳನ್ನು ಬಿಟ್ಟರೆ ಗೋಹತ್ಯೆ ನಿಷೇಧ ಮಸೂದೆಗೆ ಗೋವಿನ ಬಗ್ಗೆ ಭಕ್ತಿಯಾಗಲಿ, ಕಾಳಜಿಯಾಗಲಿ ಇಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಕರೊನಾ ದಾಖಲೆಯ ಇಳಿಕೆ; ದೇಶದಲ್ಲಿ ಆರು ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆಯಾದ ವೈರಸ್
ಗೋಹತ್ಯೆಗೆ ನಿಷೇಧವಂತೆ, ಗೋಮಾಂಸ ಮಾರಾಟ ಮತ್ತು ಸೇವನೆಗೆ ನಿರ್ಬಂಧ ಇಲ್ಲವಂತೆ. ಇಂತಹದ್ದೊಂದು ಎಡಬಿಡಂಗಿ ಕಾನೂನು ಮಾಡಲು ಇಷ್ಟೆಲ್ಲ ನಾಟಕ ಮಾಡಬೇಕೇ? ಮಾರಾಟ ಮಾಡಲು ಗೋಮಾಂಸವನ್ನು ಆಮದು ಮಾಡಿಕೊಳ್ಳುತ್ತೀರಾ ಎಂದು ಮುಖ್ಯಮಂತ್ರಿಯವರನ್ನು ಪ್ರಶ್ನಿಸಿದ್ದಾರೆ.
ಬಿಜೆಪಿ ಲೇವಡಿ :ಕಾಂಗ್ರೆಸ್ ಮುಕ್ತ ಮಾಡಲು ಪಣತೊಟ್ಟಿರುವ ಸಿದ್ದರಾಮಯ್ಯ ಕಾರ್ಯ ಶ್ಲಾಘನೀಯ ಎಂದು ಬಿಜೆಪಿ ಲೇವಡಿ ಮಾಡಿದೆ. ಗೋಮಾಂಸ ತಿನ್ನುತ್ತೇನೆ ಎನ್ನುತ್ತೀರಿ, ಮೀನು ತಿಂದು ದೇವಸ್ಥಾನಕ್ಕೆ ತೆರಳುತ್ತೀರಿ, ಕುಂಕುಮ ಕಂಡರೆ ನಿಮಗೆ ಭಯ, ಟಿಪ್ಪು ಜಯಂತಿಯನ್ನು ಆಚರಿಸುವ ನಿಮಗೆ ಹನುಮ ಜಯಂತಿಯ ದಿನ ತಿಳಿಯದೇ ಹೋದದ್ದು ವಿಪರ್ಯಾಸ ಎಂದು ಸಿದ್ದರಾಮಯ್ಯ ಗುರಿಯಾಗಿಸಿ ಕುಟುಕಿದೆ.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಗೋಹತ್ಯೆ ನಿಷೇಧ ಕಠಿಣ ಜಾರಿಗೆ ಸರ್ಕಾರ ಸಿದ್ಧ | 6 ತಿಂಗಳ ನಂತರ ಗೋಶಾಲೆಗಳಿಗೆ ಗಂಡುಕರುಗಳ ಸ್ವೀಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 7 =
Remember me
