ಬೆಂಗಳೂರು:ಗುರುವಾರ ನಿಧನರಾದ ಮಾಜಿ ಐಎಎಸ್​ ಅಧಿಕಾರಿ, ಹಿರಿಯ ನಟ ಹಾಗೂ ಬಿಜೆಪಿ ಮುಖಂಡ ಕೆ. ಶಿವರಾಮ್ ಅವರ ಅಂತ್ಯಕ್ರಿಯೆಯನ್ನು ಅವರ ಹುಟ್ಟೂರಾದ ರಾಮನಗರ ಜಿಲ್ಲೆಯ ಬಿಡದಿಯ ಉರುಗಹಳ್ಳಿಯಲ್ಲಿ ಕುಟುಂಬಸ್ಥರು ನೆರವೇರಿಸಿದ್ದಾರೆ.
ಶಿವರಾಮ್ ಅವರ ಅಂತ್ಯಕ್ರಿಯೆಯನ್ನು ಛಲವಾದಿ ಮಹಾಸಭಾದ ಆವರಣದಲ್ಲಿ ಮಾಡಬೇಕು ಎಂದು ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಆಗ್ರಹಿಸಿದ್ದರು. ಆದರೆ, ಸರ್ಕಾರ ಅದಕ್ಕೆ ಅನುಮತಿ ನೀಡದ ಕಾರಣ ಅವರ ಅಂತ್ಯಸಂಸ್ಕಾರವನ್ನು ಹುಟ್ಟೂರಿನಲ್ಲಿ ನೆರವೇರಿಸಲಾಗಿದೆ.
ಶುಕ್ರವಾರ ಬೆಳಗ್ಗೆಯಿಂದ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಕುಟುಂಬ ಹಾಗೂ ಅಭಿಮಾನಿಗಳ ಬೇಡಿಕೆಗೆ ಸರ್ಕಾರ ಮಣಿಯದೇ ಇರುವ ಕಾರಣ ಬಿಡದಿಯ ಉರುಗಹಳ್ಳಿಯ ತೋಟದ ಮನೆಯಲ್ಲಿ ನೆರವೇರಿಸಲಾಗಿದೆ. ಶಿವರಾಮ್ ಅವರ ತಾಯಿ ಚಿಕ್ಕಬೋರಮ್ಮ ಅವರ ಸಮಾಧಿ ಪಕ್ಕದಲ್ಲೇ ಅಂತ್ಯಸಂಸ್ಕಾರ ಮಾಡಲಾಗಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:9 − two =
Remember me
