ಕೆ.ಆರ್​.ಪೇಟೆ:ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಖ್ಯಾತಿ ಪಡೆದಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹಿಂದೆ ಇದ್ದ ಬಿಜೆಪಿ ಸರ್ಕಾರ 10-12 ಸಚಿವರಿಗೆ ಮತದಾರರು ಸೋಲಿನ ರುಚಿ ತೋರಿಸಿದ್ದಾರೆ. ಇನ್ನು ಚುನಾವಣೆಯಲ್ಲಿ ಸೋತ ಬಳಿಕ ಅಭ್ಯರ್ಥಿಗಳು ಪರಮಾರ್ಶೆ ಹಾಗೂ ಆತ್ಮಾವಲೋಕನದಲ್ಲಿ ತೊಡಗಿದ್ದಾರೆ.
ಈ ಮಧ್ಯೆ ಮಾಜಿ ಸಚಿವ ಡಾ.ಕೆ.ಸಿ. ನಾರಯಣಗೌಡ ಕೃತಜ್ಞತೆ ಸಭೆಯಲ್ಲಿ ಮತದಾರರಿಗೆ ಹಂಚಲು ನೀಡಿದ್ದ ಹಣವನ್ನು ವಾಪಸ್ ಕೊಡುವಂತೆ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.
ಇನ್ನು ಕೆ.ಸಿ.ಎನ್​ ಹೇಳಿಕೆ ಹೊಸ ಚರ್ಚೆಯನ್ನು ಹುಟ್ಟು ಹಾಕಿದ್ದು ಚುನಾವಣೆಯಲ್ಲಿ ಬೆಂಬಲಿಗರಿಗೆ ಹಣ ಕೊಟ್ಟು ಮಾಜಿ‌ ಸಚಿವರು ಮೋಸ ಹೋಗಿದ್ದಾರ ಎಂದಬ ಪ್ರಶ್ನೆ ಹುಟ್ಟುಕೊಂಡಿದೆ.
ಭಾನುವಾರ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಕೃತಜ್ಞತೆ ಸಭೆಯಲ್ಲಿ ಮಾತನಾಡಿದ ನಾರಾಯಣಗೌಡ​ ಮತದಾರರಿಗೆ ಹಂಚಿಕೆ ಮಾಡದೆ ಇಟ್ಟುಕೊಂಡಿರುವ ಹಣ ವಾಪಸ್ ಕೊಡಿ ಎಂದು ಅಂಗಲಾಚಿದ್ದಾರೆ.
ನಾನು ಮಾಹಿತಿ ಪಡೆದಿದ್ದೇನೆ, ಹಲವು ಕಡೆಗಳಿಗೆ ನಮ್ಮ ಹಣ ತಲುಪಿಲ್ಲ ಹಂಚಿಕೆ ಮಾಡದೆ ಇಟ್ಟು ಕೊಂಡಿದ್ರೆ ದಯವಿಟ್ಟು ವಾಪಾಸ್ ಕೊಡಿ. ಟ್ರಸ್ಟ್ ಸ್ಥಾಪಿಸಿ ಆ ಹಣವನ್ನು ಸಮಾಜಸೇವೆಗೆ ಉಪಯೋಗಿಸೋಣ ಎಂದು ಮಾತನಾಡುವ ವೇಳೆ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
