ಬೆಂಗಳೂರು:ಮರಳು ದಂಧೆ ತಡೆಯಲು ಮುಂದಾಗಿದ್ದ ಪೊಲೀಸ್ ಪೇದೆ ಮೇಲೆ ಟ್ರ್ಯಾಕ್ಟರ್ ಹಾಯಿಸಿ ಹತ್ಯೆ ಮಾಡಿರುವ ದುರದಘಟನೆ ಕಲಬುರಗಿ ಜಿಲ್ಲೆಯಲ್ಲಿ ಸಂಭವಿಸಿರುವುದು ಕಳವಳಕಾರಿಯಾಗಿದ್ದು, ರಾಜ್ಯದಲ್ಲಿ ಗುಂಡಾಗಿರಿ ಪರ್ವ ಶುರುವಾಗಿದೆ ಎಂದು ಬಿಜೆಪಿ ಮಾಜಿ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದರು.ಇದನ್ನೂ ಓದಿ:ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸದಿದ್ದರೆ ಜನರು ಬಡಿಗೆ ಹಿಡೀತಾರೆ : ಶಾಸಕ ಬಿ.ವೈ.ವಿಜಯೇಂದ್ರಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಅವರು, ಮರಳು ಮಾಫಿಯಾವು ಪೊಲೀಸ್ ಪೇದೆಯನ್ನು ಬಲಿ ತೆಗೆದುಕೊಂಡಿದ್ದು, ಈ ಕೃತ್ಯ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ‌ ಹಿಂದೆ ಪೊಲೀಸರೇ ಹುಷಾರ್ ಎಂದು ಎಚ್ಚರಿಸಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೂಂಡಾಗಿರಿ ಶುರುವಾಯಿತೆಂದೇ ಅರ್ಥ ಎಂದು ಹೇಳಿದರು.ಶಾಮಿಯಾನ ಕೊಡುತ್ತೇವೆ:ಕೇಂದ್ರ ಸರ್ಕಾರದ ವಿರುದ್ಧ ಜೂ.20ರಂದು ಕಾಂಗ್ರೆಸ್​ನವರು ಹೋರಾಟಕ್ಕೆ ಮುಂದಾಗಿದ್ದಾರೆ. ಅಗತ್ಯಬಿದ್ದರೆ ಶಾಮಿಯಾನ ಒದಗಿಸುತ್ತೇವೆ. ಆರಾಮವಾಗಿ ಚಳವಳಿ ಮಾಡಲಿ. ಗ್ಯಾರಂಟಿಗಳನ್ನು ಕೊಟ್ಟಿರುವುದು ಕಾಂಗ್ರೆಸ್ ಪಕ್ಷ, ಕೇಂದ್ರ ಸರ್ಕಾರವಲ್ಲ. ನಿಮ್ಮ ಅಸಹಾಯಕತೆಯನ್ನು ಕೇಂದ್ರದ ಮೇಲೆ ಎತ್ತಿ ಹಾಕುತ್ತಿರುವುದೇಕೆ? ಎಂದು ಪ್ರಶ್ನಿಸಿದರು.ಇದನ್ನೂ ಓದಿ:ಹಸಿಬಿಸಿ ದೃಶ್ಯಗಳಲ್ಲಿ ತಮನ್ನಾ ನಟನೆ: ಜಾಲತಾಣದಲ್ಲಿ ವಿಡಿಯೋ ವೈರಲ್​, ಮಿಲ್ಕಿ ಬ್ಯೂಟಿ ವಿರುದ್ಧ ಕೆಂಡಕಾರಿದ ಫ್ಯಾನ್ಸ್​ಎಚ್ಚರಿಕೆ:ಕಾಂಗ್ರೆಸ್ ಪಕ್ಷವು ಕರ್ನಾಟಕವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಂತಿದೆ ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಆರೋಪಿಸಿದರು. ಟಿಪ್ಪುವಿನ ಮತಾಂತರದ ಸಿದ್ಧಾಂತಕ್ಕೆ ಪೂರಕವಾಗಿ ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರ ಹೊರಟಿದೆ. ಕಾಂಗ್ರೆಸ್ ಪಕ್ಷವು ಪಿಎಫ್‍ಐ, ಕೆಎಫ್‍ಡಿ ಪರವಾಗಿದೆಯೇ? ಎಂದು ಪ್ರಶ್ನಿಸಿದರು. ಈ ರೀತಿ ಜನಾದೇಶದ ದುರ್ಬಳಕೆಗೆ ಬಿಜೆಪಿ ಅವಕಾಶ ಕೊಡುವುದಿಲ್ಲ ಎಂದು ಆರ್.ಅಶೋಕ್ ಎಚ್ಚರಿಸಿದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 12 =
Remember me
