ಬೆಂಗಳೂರು:ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜತೆ ನಡೆದ ಸಭೆಯ ಬಳಿಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ರಾಜ್ಯದ ಎಲ್ಲಾ ಮಹಿಳೆಯರು ಸಾರಿಗೆ ಬಸ್​ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಈ ಬಗ್ಗೆ ಕ್ಯಾಬಿನೆಟ್​ನಲ್ಲಿ ಮುಖ್ಯಮಂತ್ರಿಗಳು ಘೋಷಣೆ ಮಾಡುತ್ತಾರೆ. ಅದಕ್ಕೂ ಮೊದಲು ನಾವು ಏನೂ ಹೇಳುವುದಿಲ್ಲ. ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಬಸ್ ಪ್ರಯಾಣವನ್ನು ಖಂಡಿತವಾಗಿ ಜಾರಿಗೆ ತರುತ್ತೇವೆ ಎಂದು ಹೇಳಿದ್ದರು.
ಇದನ್ನೂ ಓದಿ:ರಾಜ್ಯದ ಎಲ್ಲಾ ಮಹಿಳೆಯರಿಗೂ ಉಚಿತ ಬಸ್ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ
ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗಳಾಗುತ್ತಿದ್ದು, ಮಾಜಿ ಸಚಿವ ಸುನಿಲ್ ಕುಮಾರ್ ಕಾರ್ಕಳ ಟ್ವೀಟ್ ಮಾಡಿ, ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್​ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. ಇದರಿಂದ ಈ ಭಾಗದ ಜನರಿಗೆ ಅನ್ಯಾಯವಾಗಲಿದ್ದು, ಸರ್ಕಾರ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್​ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜತೆ ನಡೆದ ಸಭೆಯ ಬಳಿಕ ಮಾತನಾಡಿದ ರಾಮಲಿಂಗಾರೆಡ್ಡಿ, ಕ್ಯಾಬಿನೆಟ್​ನಲ್ಲಿ ಮುಖ್ಯಮಂತ್ರಿಗಳು ಘೋಷಣೆ ಮಾಡುತ್ತಾರೆ. ಅದಕ್ಕೂ ಮೊದಲು ನಾವು ಏನೂ ಹೇಳುವುದಿಲ್ಲ. ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಬಸ್ ಪ್ರಯಾಣವನ್ನು ಖಂಡಿತವಾಗಿ ಜಾರಿಗೆ ತರುತ್ತೇವೆ. ನಾವು ಪ್ರಣಾಳಿಕೆಯಲ್ಲಿ ಯಾವುದೇ ನಿಯಮಗಳನ್ನು ಹೇಳಿಲ್ಲ. ಹೀಗಾಗಿ ಎಲ್ಲ ಮಹಿಳೆಯರು ಸರ್ಕಾರಿ ಸಾರಿಗೆ ಬಸ್​ನಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ನಾಳೆ ಮುಖ್ಯಮಂತ್ರಿಗಳ ಜತೆ ಸಭೆ ಇದೆ. ಆ ಬಳಿಕ ಎಲ್ಲವು ಗೊತ್ತಾಗಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಆಶ್ವಾಸನೆ ಸ್ಪಷ್ಟ, ಅನುಷ್ಠಾನ ಅಸ್ಪಷ್ಟ; ಕಾಂಗ್ರೆಸ್ ಗ್ಯಾರಂಟಿ ಯೋಜನೆ ಬಗ್ಗೆ ಬೊಮ್ಮಾಯಿ ವ್ಯಂಗ್ಯ
4 ನಿಗಮಗಳ‌ ಎಂಡಿಗಳ ಜತೆ ಸಭೆ ಮಾಡಲಾಗಿದೆ. ಆರ್ಥಿಕ ಪರಿಸ್ಥಿತಿ ಕುರಿತ ಮಾಹಿತಿ ಲಭಿಸಿದೆ. ಕೋವಿಡ್ ಸಂದರ್ಭದಲ್ಲಿ ನಷ್ಟದ ಕುರಿತ ಮಾಹಿತಿ ಲಭಿಸಿದೆ. ನೇಮಕಾತಿ ಆಗದಿರುವುದು ಮತ್ತು ಬಸ್‌ಗಳ ಖರೀದಿ ಬಗ್ಗೆ ಚರ್ಚೆ ಆಗಿದೆ. ನಾಲ್ಕು ನಿಗಮಗಳಲ್ಲಿ 23978 ವಾಹನಗಳಿವೆ. 1,04,650 ಸಿಬ್ಬಂದಿ ಇದ್ದಾರೆ. 4449 ಬಸ್‌ಗಳು ಹೊಸದಾಗಿ ಸೇರ್ಪಡೆಯಾಗಲಿದೆ. 82 ಲಕ್ಷ 51 ಸಾವಿರ ಪ್ರಯಾಣಿಕರು ಪ್ರತಿನಿತ್ಯ ಸಂಚಾರ ಮಾಡುತ್ತಾರೆ. ಎಂಡಿಗಳು ಇಂದು 3 ರಿಂದ 4 ಆಯ್ಕೆಗಳನ್ನು ತಿಳಿಸಿದ್ದಾರೆ. ಈ ಯೋಜನೆ ಅನುಷ್ಠಾನಕ್ಕೆ ಬರುವುದರಲ್ಲಿ ಸಂಶಯವೇ ಇಲ್ಲ ಎಂದು ಭರವಸೆ ನೀಡಿದರು.
ನಾಳೆ 12ಕ್ಕೆ ಸಿಎಂ ಜತೆ ಸಭೆ ಇದೆ. ನಾಳೆ ಉಚಿತ ಪ್ರಯಾಣವನ್ನು ಸಿಎಂ ಫೈನಲ್ ಮಾಡ್ತಾರೆ. ಯಾವುದೇ ನಿರ್ಬಂಧವಿಲ್ಲದೇ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಣೆ ಮಾಡುತ್ತೇವೆ. ಬಿಜೆಪಿಯವರ ಹತ್ತಿರ ನಾವು ಹೇಳಿಸಿಕೊಳ್ಳಬೇಕಿಲ್ಲ. ಅವರು ಪ್ರತಿಭಟನೆ ಮಾಡುವುದಕ್ಕೆ ಅವಕಾಶವೇ ನೀಡೋದಿಲ್ಲ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
