ಬೆಂಗಳೂರು:ಸಂಬಂಧಪಟ್ಟ ವಿಚಾರವಾಗಿ ಸೂಕ್ತ ಉತ್ತರ ಕೊಡಿ ಎಂದರೂ ಸರ್ಕಾರಿ ಅಧಿಕಾರಿಗಳು ಜನಸಾಮಾನ್ಯರಿಗೆ ಪ್ರತಿಕ್ರಿಯಿಸದೆ ಸತಾಯಿಸುವುದು ಹೊಸದೇನಲ್ಲ. ಆದರೆ ಇಲ್ಲಿ ಕೆಲವು ಅಧಿಕಾರಿಗಳು ಜನಪ್ರತಿನಿಧಿಯೇ ಪ್ರಶ್ನೆ ಮಾಡಿದರೂ ಪ್ರತಿಕ್ರಿಯಿಸದೇ ನಿರ್ಲಕ್ಷ್ಯ ತೋರಿದ್ದಾರೆ.
2021ರ ಫೆಬ್ರವರಿ ಮಾಹೆಯಲ್ಲಿ ನಡೆದಿರುವ ಕೆಎಎಸ್ ಮುಖ್ಯ ಪರೀಕ್ಷೆಗಳ ಮೌಲ್ಯಮಾಪನ ಕುರಿತು ಯಾವುದೇ ಮಾಹಿತಿ ಅಭ್ಯರ್ಥಿಗಳಿಗೆ ಲಭ್ಯವಾಗುತ್ತಿಲ್ಲ. ಮೌಲ್ಯಮಾಪನದ ಪ್ರಕ್ರಿಯೆ ಈವರೆಗೂ ಪ್ರಾರಂಭವಾಗಿದೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಕೆಪಿಎಸ್​ಸಿಯನ್ನು ಮಾಜಿ ಸಚಿವ ಎಸ್​.ಸುರೇಶ್​ಕುಮಾರ್​ ಕೇಳಿದ್ದರು.
ಈ ಬಗ್ಗೆ ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿಯವರ ಗಮನಕ್ಕೆ ತಂದು ಈ ಯುವಕರು ಭರವಸೆ ಕಳೆದುಕೊಳ್ಳುವ ಮುನ್ನ ಮೌಲ್ಯಮಾಪನ ಕುರಿತು ಮಾಹಿತಿ ನೀಡಿ ಎಂದು ಕೇಳಿದ್ದೇನೆ. ಆದರೆ ಈವರೆಗೂ ಯಾವುದೇ ಮಾಹಿತಿ ನನಗಾಗಲೀ ಅಥವಾ ಅಭ್ಯರ್ಥಿಗಳಿಗಾಗಲೀ ಲಭ್ಯವಾಗಿರುವುದಿಲ್ಲ ಎಂದು ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತಾದ ಮಾಹಿತಿ ಪಡೆಯಲು ನಾನು ಮೇ 31ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಕರ್ನಾಟಕ ಲೋಕ ಸೇವಾ ಆಯೋಗದ ಮುಖ್ಯ ದ್ವಾರದ ಮುಂದೆ ನಿಲ್ಲುವವನಿದ್ದೇನೆ. ಆಗಲಾದರೂ ಕೆಪಿಎಸ್​​ಸಿ ಅಧಿಕಾರಿಗಳು 2021ರ ಫೆಬ್ರವರಿ ಮಾಹೆಯಲ್ಲಿ ನಡೆದಿರುವ ಕೆಎಎಸ್ ಮುಖ್ಯ ಪರೀಕ್ಷೆಗಳ ಮೌಲ್ಯಮಾಪನದ ಪ್ರಸ್ತುತ ಹಂತದ ಕುರಿತು ಮಾಹಿತಿ ನೀಡುತ್ತಾರೆಂದು ಆಶಿಸುತ್ತೇನೆ ಎಂಬುದಾಗಿ ಹೇಳಿಕೊಂಡಿದ್ದಾರೆ. ಒಬ್ಬ ಜನಪ್ರತಿನಿಧಿಗೇ ಸರ್ಕಾರಿ ಅಧಿಕಾರಿಗಳು ಈ ತೆರನಾಗಿ ನಡೆದುಕೊಂಡರೆ ಇನ್ನು ಜನಸಾಮಾನ್ಯರ ಪಾಡೇನು ಎಂದು ಸಾರ್ವಜನಿಕರೂ ಕೆಪಿಎಸ್​ಸಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪತಿ ಚಲಾಯಿಸುತ್ತಿದ್ದ ಟ್ರ್ಯಾಕ್ಟರ್​ಗೆ ಸಿಲುಕಿ ಪತ್ನಿ ಸಾವು; ಛಿದ್ರಗೊಂಡ ದೇಹ, ತುಂಡಾಗಿ ಬಿದ್ದ ಕೈ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
