ಬೆಳಗಾವಿ:ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಇಂದು ಬೆಳಗ್ಗೆ ಸಿಬಿಐ ತನ್ನ ಕಸ್ಟಡಿಗೆ ತೆಗೆದುಕೊಂಡಿದೆ.
ಸಿಬಿಐ ಅಧಿಕಾರಿಗಳು ಇಂದು ಬೆಳಗ್ಗೆ ಬೆಳಗಾವಿಯ ಹಿಂಡಲಗಾ ಜೈಲಿಗೆ ತೆರಳಿ, ಅಲ್ಲಿದ್ದ ವಿನಯ್ ಕುಲಕರ್ಣಿ ಅವರನ್ನು ತಮ್ಮ ವಶಕ್ಕೆ ತೆಗೆದುಕೊಂಡು ಕರೆದೊಯ್ದರು. ಈ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. 55ನೇ ಹುಟ್ಟುಹಬ್ಬದ ದಿನವೇ ವಿನಯ್ ಕುಲಕರ್ಣಿ ಸಿಬಿಐ ಕಸ್ಟಡಿಗೊಳಪಟ್ಟಿದ್ದಾರೆ.
ಇದನ್ನೂ ಓದಿ:ವಿನಯ್​ ಕುಲಕರ್ಣಿ ಬಂಧನದ ಹಿಂದೆ ಜೋಶಿ ಕೈವಾಡ?
ಆರೋಪಿ ವಿನಯ್​ ಕುಲಕರ್ಣಿಯನ್ನು ಹೆಚ್ಚಿನ ತನಿಖೆಗಾಗಿ ತನ್ನ ಕಸ್ಟಡಿಗೆ ನೀಡುವಂತೆ ಸಿಬಿಐ ಅಧಿಕಾರಿಗಳು ಶುಕ್ರವಾರ ಕೋರ್ಟ್​ಗೆ ಮನವಿ ಮಾಡಿದ್ದರು. ಸಿಬಿಐ ಅರ್ಜಿಗೆ ವಿನಯ್​ ಪರ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಬೆಳಗ್ಗೆ ವಾದ-ವಿವಾದ ಆಲಿಸಿದ್ದ ನ್ಯಾಯಾಲಯ, ತೀರ್ಪು ಕಾಯ್ದಿರಿಸಿತ್ತು. ಸಂಜೆ ತೀರ್ಪು ಪ್ರಕಟಿಸಿದ ನ್ಯಾಯಾಧೀಶರು, ವಿನಯ್​ ಕುಲಕರ್ಣಿಯನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡುವಂತೆ ಸೂಚಿಸಿದ್ದರು.
ಹುಟ್ಟುಹಬ್ಬದಂದೂ ವಿನಯ್​ ಕುಲಕರ್ಣಿಗೆ ಜೈಲು ವಾಸ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − 4 =
Remember me
