ಧಾರವಾಡ:ಶುಕ್ರವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಟೆಂಪೋ ಟ್ರಾವೆಲರ್​-ಲಾರಿ ನಡುವಿನ ಭೀಕರ ಅಪಘಾತದಲ್ಲಿ ಮಾಜಿ ಶಾಸಕ, ಬಿಜೆಪಿ ಮುಖಂಡ ಗುರುಸಿದ್ದನಗೌಡರ ಸೊಸೆ ದಾರುಣವಾಗಿ ಮೃತಪಟ್ಟಿದ್ದಾರೆ.
ಗುರುಸಿದ್ದನಗೌಡರ ಪುತ್ರ ಡಾ. ರವಿಕುಮಾರ್​ ಅವರ ಪತ್ನಿ ಪ್ರೀತಿ ರವಿಕುಮಾರ್​ ಮೃತ ದುರ್ದೈವಿ. ಇವರೊಂದಿಗೆ ಡಾ. ಪ್ರಕಾಶ್​ ಮತ್ತಿಹಳ್ಳಿ ಅವರ ಪತ್ನಿ ಡಾ. ವೀಣಾ ಪ್ರಕಾಶ್​ ಸಹ ಮೃತಪಟ್ಟಿದ್ದಾರೆ.​ ಅಪಘಾತದಲ್ಲಿ ಒಟ್ಟು 11 ಮಂದಿ ಮೃತಪಟ್ಟಿದ್ದು, ಎಲ್ಲರೂ ಸಹ ದಾವಣಗೆರೆಯ ವಿದ್ಯಾನಗರ, ಎಂಸಿಸಿ ಎ-ಬ್ಲಾಕ್ ಮತ್ತು ಎಂಸಿಸಿ-ಬಿ ಬ್ಲಾಕ್ ನಿವಾಸಿಗಳು.
ಇದನ್ನೂ ಓದಿರಿ:PHOTOS! ರಾಷ್ಟ್ರ ರಾಜಧಾನಿಯ ಭವಿಷ್ಯದ ರೈಲು ನಿಲ್ದಾಣ ಹೇಗಿದೆ ನೋಡಿ..!
ಬೆಳಗ್ಗೆ 7.30ರ ಸುಮಾರಿಗೆ ಧಾರವಾಡ ಹೊರವಲಯದ ಇಟ್ಟಿಗಟ್ಟಿ ಬಳಿ ಟೆಂಪೋ ಟ್ರಾವೆಲರ್​ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿತು. ಟಿಟಿ ದಾವಣಗೆರೆಯಿಂದ ಗೋವಾಗೆ ತೆರಳುತ್ತಿತ್ತು. ಲಾರಿ ಬೆಳಗಾವಿ ಕಡೆಯಿಂದು ಬರುತ್ತಿತ್ತು. ಆರಂಭದಲ್ಲಿ 9 ಮಂದಿ ಸಾವಿಗೀಡಾಗಿದ್ದರು. ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಕೆಲವರು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.
ಇದುವರೆಗೂ ಬಂದಿರುವ ಮಾಹಿತಿಯ ಪ್ರಕಾರ ಮೃತ 11 ಮಂದಿಯಲ್ಲಿ 10 ಮಂದಿ ಬಾಲ್ಯ ಸ್ನೇಹಿತೆಯರಾಗಿದ್ದು, ಓರ್ವ ಟೆಂಪೋ ಟ್ರಾವೆಲರ್​ ಚಾಲಕನೆಂದು ತಿಳಿದುಬಂದಿದೆ.
ಮೃತರೆಲ್ಲರೂ ದಾವಣಗೆರೆ ಮೂಲದವರು. ದಾವಣಗೆರೆಯ ಸೇಂಟ್‌ ಪಾಲ್ಸ್‌ ಕಾನ್ವಂಟ್‌ ಶಾಲೆಯ ಹಳೇ ವಿದ್ಯಾರ್ಥಿಗಳಾದ ಇವರು ಇತ್ತೀಚಿಗೆ ನಡೆದ ಶಾಲೆಯ ಕಾರ್ಯಕ್ರಮವೊಂದರಲ್ಲಿ ಭೇಟಿಯಾಗಿದ್ದರು. ಹಲವು ವರ್ಷಗಳ ನಂತರ ಭೇಟಿಯಾಗಿದ್ದ ಬಾಲ್ಯ ಸ್ನೇಹಿತೆಯರು ಪಣಜಿಗೆ ಪ್ರವಾಸ ಹೊರಟಿದ್ದರು. ಟೆಂಪೋ ಟ್ರಾವೆಲರ್‌ನಲ್ಲಿ ಮುಂಜಾನೆ 3 ಗಂಟೆಗೆ ದಾವಣಗೆರೆ ಬಿಟ್ಟಿದ್ದರು.
ಇದನ್ನೂ ಓದಿರಿ:VIDEO| ಕಣ್ಣು ಮಿಟುಕಿಸುವಷ್ಟರಲ್ಲಿ ಕೊಚ್ಚಿ ಹೋದ ಯುವತಿ: ಸೆಲ್ಫಿ ದುರಂತದ ಭಯಾನಕ ವಿಡಿಯೋ ವೈರಲ್​!
ಧಾರವಾಡದ ಇಟ್ಟಿಗಟ್ಟಿ ಬೈಪಾಸ್‌ ಸಮೀಪ ಬೆಳಗ್ಗೆ 7.30ರ ವೇಳೆಗೆ ಯಮರೂಪಿಯಾಗಿ ಬಂದ ಮರಳು ಸಾಗಣೆ ಟಿಪ್ಪರ್‌ ಲಾರಿಯು ಟೆಂಪೋ ಟ್ರಾವೆಲ್ಲರ್​ಗೆ ಡಿಕ್ಕಿ ಹೊಡೆದಿದೆ. ಟೆಂಪೋ ಟ್ರಾವೆಲರ್‌ನಲ್ಲಿದ್ದ 16 ಮಹಿಳೆಯರ ಪೈಕಿ 10 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಇವರ ಜತೆಗೆ ಟಿಟಿ ಚಾಲಕನೂ ಸತ್ತಿದ್ದಾನೆ. ಉಳಿದವರ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ವರ್ಷಗಳ ನಂತರ ಒಟ್ಟಿಗೆ ಗೋವಾಕ್ಕೆ ಹೊರಟಿದ್ದ ಶಾಲಾ ಗೆಳತಿಯರ ದುರಂತ ಅಂತ್ಯ! ಮನಕಲಕುತ್ತೆ ಕೊನೇ ವಾಟ್ಸ್​ಆ್ಯಪ್​ ಸ್ಟೇಟಸ್

ಬೆಳ್ಳಂಬೆಳಗ್ಗೆ ಲಾರಿ-ಟೆಂಪೋ ಟ್ರಾವೆಲರ್​ ನಡುವೆ ಭೀಕರ ರಸ್ತೆ ಅಪಘಾತ: 9 ಮಂದಿ ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
