ಬೀದರ್:ಕೇಂದ್ರ ಸಚಿವರಿಂದ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಿಗೇ ಜೀವಭಯ ಇದೆ ಎನ್ನಲಾದ ಪ್ರಕರಣ ಕೇಳಿಬಂದಿದ್ದು, ಸಚಿವರ ವಿರುದ್ಧ ಪೊಲೀಸ್ ಉನ್ನತಾಧಿಕಾರಿಗಳಿಗೆ ದೂರು ನೀಡಲು ಶಾಸಕರು ನಿರ್ಧಾರ ಮಾಡಿದ್ದಾರೆ.
ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಈ ಆರೋಪ ಕೇಳಿ ಬಂದಿದ್ದು, ಆರೋಪಿಸಿರುವ ಶಾಸಕ ಪ್ರಭು ಚವ್ಹಾಣ ದೂರು ನೀಡಲು ನಿರ್ಧರಿಸಿದ್ದಾರೆ. ಕೇಂದ್ರ ಸಚಿವ ಭಗವಂತ ಖೂಬಾ ಒಂದು ವರ್ಷದಿಂದ ನನ್ನ ವಿರುದ್ಧ ಕುತಂತ್ರ ಮಾಡುವ ಮೂಲಕ ಚುನಾವಣೆಯಲ್ಲಿ ನನನ್ನು ಸೋಲಿಸಲು ಕಾರಣರಾಗಿದ್ದಾರೆ. ಮಾತ್ರವಲ್ಲ, ಕೇಂದ್ರ ಸಚಿವರ ಬೆಂಬಲಿಗರಿಂದ ನನಗೆ ಜೀವಭಯ ಇದೆ. ಈ ಕುರಿತು ಎಸ್​ಪಿ, ಐಜಿಗೆ ದೂರು ನೀಡಲು ನಿರ್ಧರಿಸಿದ್ದಾಗಿ ಅವರು ತಿಳಿಸಿದ್ದಾರೆ. ಅಲ್ಲದೆ ಅವರನ್ನು ಸಚಿವ ಸ್ಥಾನದಿಂದ ತೆಗೆಯುವಂತೆ ವರಿಷ್ಠರಿಗೂ ದೂರು ನೀಡುವುದಾಗಿ ಹೇಳಿದ್ದಾರೆ.
ಇನ್ನೊಂದೆಡೆ ಬೀದರನಲ್ಲಿ ಸೋತ ಬಿಜೆಪಿ ಅಭ್ಯರ್ಥಿ ಈಶ್ವರ ಸಿಂಗ್ ಠಾಕೂರ್ ಒಂದು ಹೆಜ್ಜೆ ಮುಂದೆ ಹೋಗುವ ಮೂಲಕ ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಾನು ಟಿಕೆಟ್ ಆಕಾಂಕ್ಷಿ ಎಂದು ಕೇಂದ್ರ ಸಚಿವರ ವಿರುದ್ಧ ಸಮರ ಸಾರಿದ್ದಾರೆ. ಈ ಮೂಲಕ ಬಿಜೆಪಿ ಭದ್ರಕೋಟೆಯಲ್ಲೇ ಪಕ್ಷದೊಳಗೆ ಸಂಘರ್ಷ ಉಂಟಾಗಿದೆ.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ; ಡಿ.ಕೆ.ಶಿವಕುಮಾರ್ ಡಿಸಿಎಂ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − seven =
Remember me
