ಮಂಡ್ಯ:ಮಾಜಿ ಶಾಸಕ ಕೆ.ಕೆಂಪೇಗೌಡ (96) ಅವರು ವಯೋಸಹಜವಾಗಿ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.
ಇಂದು ಮಧ್ಯಾಹ್ನ 3 ರಿಂದ 4ಗಂಟೆಯೊಳಗೆ ಪಾಂಡವಪುರ ತಾಲೂಕು ಚಿನಕುರಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಮೃತರು ನಾಲ್ಕು ಗಂಡುಮಕ್ಕಳು, ಐದು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಕೆಂಪೇಗೌಡ ಅವರು ಮೂರು ಬಾರಿ ಶಾಸಕರಾಗಿ ಜನಮನ್ನಣೆ ಗಳಿಸಿದ್ದರು. ತಾಲೂಕು ಬೋರ್ಡ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ವ್ಯವಸಾಯೋತ್ಪನ್ನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಪ್ರವೇಶಿಸಿದ ಗೌಡರು, 1983ರಲ್ಲಿ ಚಿನಕುರಳಿ ಗ್ರಾಮದ ಛೇರ್ ಮನ್‌ ಆಗಿ 1983 ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ನಂತರ 1985 ರಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಎರಡನೇ ಬಾರಿ ಚುನಾಯಿತರಾಗಿದ್ದರು. ಬಳಿಕ‌ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು 1999ರಲ್ಲಿ‌ ಮೂರನೇ ಬಾರಿಗೆ ಶಾಸಕರಾಗಿದ್ದರು. 2008 ರಲ್ಲಿ‌ ಬಿಜೆಪಿಯಿಂದ ಸ್ಪರ್ಧಿಸಿ‌ ಸೋಲು ಕಂಡಿದ್ದರು.
ಸರಳ ಜೀವಿಯಾಗಿದ್ದ ಕೆಂಪೇಗೌಡರು ಶಾಸಕರಾಗಿದ್ದಾಗಲೂ ಕಾರು ಖರೀದಿಸದೇ ಸ್ನೇಹಿತರು, ಹಿಂಬಾಲಕರು ಹಾಗೂ ಕಾರ್ಯಕರ್ತರ ಬೈಕ್ ಗಳಲ್ಲೇ ಸಂಚರಿಸುತ್ತಿದ್ದರು. ಸದನಕ್ಕೆ ಕೆಎಸ್ಆರ್‌ಟಿಸಿ ಬಸ್‌ನಲ್ಲೇ ತೆರಳುತ್ತಿದ್ದರು.
ಕೆಂಪೇಗೌಡರ ನಿಧನಕ್ಕೆ ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ರೈತನಾಯಕಿ ಸುನಿತಾ ಪುಟ್ಟಣ್ಣಯ್ಯ, ಹಿರಿಯ ಮುಖಂಡ ಸಿ.ಅಣ್ಣೇಗೌಡ, ರೈತಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ಸಂತಾಪ ಸೂಚಿಸಿದ್ದಾರೆ.
ವಿಶೇಷ ನೆರವಿಗಾಗಿ ಕೇಂದ್ರಕ್ಕೆ ಮೊರೆ: ರಾಜ್ಯಕ್ಕೆ ಆಗಮಿಸಿದ ಕೇಂದ್ರ ನೆರೆ ಅಧ್ಯಯನ ತಂಡ..

ಲಂಚ ಸಂಗ್ರಹಕ್ಕೆ ಏಜೆಂಟ್​ಗಳ ನೇಮಕ! RTO ಕಚೇರಿ ಮೇಲಿನ ದಾಳಿಯ ವೇಳೆ ಸ್ಫೋಟಕ ಮಾಹಿತಿ ಬಯಲು

ಇಸ್ಲಾಂಗೆ ಮತಾಂತರಗೊಂಡು ಮದ್ವೆ ಆಗದಿದ್ರೆ ಕೊಲ್ಲುವುದಾಗಿ ವಿದ್ಯಾರ್ಥಿನಿಗೆ ಬೆದರಿಕೆ: ಯುವಕನ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
