ಮೈಸೂರು:ಮೈಸೂರು ಭಾಗದಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದೆ. ಮಾಜಿ ಸಚಿವ ಎಚ್​.ವಿಶ್ವನಾಥ್​ ಕಾಂಗ್ರೆಸ್​ ಸೇರುವುದು ಖಚಿತ ಎಂಬ ಸುದ್ದಿ ಬಂಬ ಬೆನ್ನಲ್ಲೇ ಮಾಜಿ ಎಂಎಲ್​ಸಿ ಸಂದೇಶ್ ನಾಗರಾಜ್ ಕೂಡ ಬಿಜೆಪಿ ತೊರೆಯುವುದಾಗಿ ಘೋಷಿಸಿದ್ದಾರೆ.
ಇಂದು(ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಸಂದೇಶ್​ ನಾಗರಾಜ್​, ನಾನು ಬಿಜೆಪಿಯಲ್ಲಿ ಸದ್ಯ ಸಕ್ರಿಯನಾಗಿಲ್ಲ. ಅಕ್ರಮವಾಗಿದ್ದೇನೆ. ಬಿಜೆಪಿಯವರು ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡು ಅನ್ಯಾಯ ಮಾಡಿದರು. ಅನ್ಯಾಯ ಮಾಡೋದರಲ್ಲಿ ಬಿಜೆಪಿಯವರು ನಿಸ್ಸೀಮರು. ಮೋಸ ಮಾಡುವುದರಲ್ಲಿ ಅವರು ನಂಬರ್ ಓನ್ ಎಂದು ಆರೋಪಗಳ ಸುರಿಮಳೆಗೈದರು.
ಬಿಜೆಪಿಯ ಸಹವಾಸ ನನಗೆ ಸಾಕು. ಎಚ್.ವಿಶ್ವನಾಥ್​ಗೂ ಅನ್ಯಾಯ ಮಾಡಿದರು. ನನಗೂ ಅನ್ಯಾಯ ಮಾಡಿದರು. ಬಿಜೆಪಿಯನ್ನ ತೊರೆದು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದೇನೆ. ಸಿದ್ದರಾಮಯ್ಯರ ಜತೆ ಮಾತಾಡಿದ್ದೀನಿ. ಡಿ.ಕೆ. ಶಿವಕುಮಾರ್​​ರ ಜತೆಯೂ ಮಾತಾಡುವೆ. ಬಿಜೆಪಿಯವರು ಯಡಿಯೂರಪ್ಪರನ್ನು ಒಳ್ಳೆತನದಲ್ಲಿ ಮುಗಿಸಿದರು. ಆ ವೇಳೆಯೇ ಬಿಜೆಪಿಗೆ 40 ಸ್ಥಾನ ನಷ್ಟವಾಯ್ತು. ಈಗ ವಿಜಯೇಂದ್ರನನ್ನು ವರುಣಕ್ಕೆ ತರುವ ಮೂಲಕ ಅವರನ್ನು ಮುಗಿಸಲು ಹೊರಟ್ಟಿದ್ದಾರೆ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್ ಬಿಜೆಪಿಯದು ಎಂದು ಸಂದೇಶ್​ ನಾಗರಾಜ್​ ಗಂಭೀರ ಆರೋಪ ಮಾಡಿದರು.
ವಿಜಯೇಂದ್ರನನ್ನು ಬಲಿ ಕೊಡಲೆಂದೇ ವರುಣ ಕ್ಷೇತ್ರಕ್ಕೆ ಕರೆ ತರುತ್ತಿದ್ದಾರೆ. ವಿಜಯೇಂದ್ರಗೆ ರಾಜಕೀಯ ಭವಿಷ್ಯ ಚೆನ್ನಾಗಿ ಇರಬೇಕಾದರೆ ಶಿಕಾರಿಪುರದಲ್ಲೇ ಸ್ಪರ್ಧೆ ಮಾಡಲಿ. ಬಿಜೆಪಿಯಿಂದ 10ಕ್ಕಿಂತ ಹೆಚ್ಚು ಶಾಸಕರು ಕಾಂಗ್ರೆಸ್​ಗೆ ಬರುತ್ತಾರೆ ಎಂದು ಹೊಸ ಬಾಂಬ್​ ಸಿಡಿಸಿದರು.
ರೋಪ್​ ವೇ ಮೂಲಕ ಮದ್ವೆ ಮಂಟಪಕ್ಕೆ ಎಂಟ್ರಿಕೊಟ್ಟ ವಧು! ಶೋಕವಾಗದಿರಲಿ ಆಡಂಬರ… ಎಂದ ನೆಟ್ಟಿಗರು, ಸಖತ್​ ವೈರಲ್​ ಆಗ್ತಿದೆ ವಿಡಿಯೋ

ಎ.ನಾಗತಿಹಳ್ಳಿ ಬಳಿ ಭೀಕರ ಅಪಘಾತ: 5ಕ್ಕೆ ಏರಿದ ಮೃತರ ಸಂಖ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
