ಬೆಂಗಳೂರು:ಹಿರಿಯ ರಾಜಕಾರಣಿ, ಮಾಜಿ ಸಂಸದ ಡಿ.ಬಿ.ಚಂದ್ರೇಗೌಡ ಸೋಮವಾರ ತಡರಾತ್ರಿ ವಿಧಿವಶರಾಗಿದ್ದಾರೆ. ಮೃತರಿಗೆ 87 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ಇಂದು ಮಧ್ಯಾಹ್ನ 2 ರಿಂದ ಸಂಜೆ 6ರವರೆಗೆ ಸಾರ್ವಜನಿಕರ ಅಂತಿಮ  ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ(ನವೆಂಬರ್ 08) ನಾಳೆ ಮಧ್ಯಾಹ್ನ ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮೂರು ಬಾರಿ ಶಾಸಕರಾಗಿ, 3 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಚಂದ್ರೇಗೌಡ, ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ಕಾನೂನು ಸಚಿವರಾಗಿದ್ದರು. ಕಾಂಗ್ರೆಸ್ ಕಟ್ಟಾಳಾಗಿದ್ದ ಚಂದ್ರೇಗೌಡ ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಸೇರಿದ್ದರು. ಬಳಿಕ ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿ ಸೇವೆ ಸಲ್ಲಿಸಿದ್ದರು. 2014ರಿಂದ ಈಚೆಗೆ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದಾರೆ.
ಡಿ.ಬಿ.ಚಂದ್ರೇಗೌಡ ನಿಧನಕ್ಕೆ ವಿವಿಧ ಪಕ್ಷಗಳ ನಾಯಕರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಖವಾಗಿದೆ. ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದ ಚಂದ್ರೇಗೌಡರು ನನ್ನ ನೆರೆ ಮನೆಯಲ್ಲಿಯೇ‌ ಇದ್ದು ನನಗೆ ಅತ್ಯಂತ ಆತ್ಮೀಯರಾಗಿದ್ದರು.ಕಳೆದ ತಿಂಗಳು ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದೆ, ಈಗ ಅವರು ನಮ್ಮನ್ನು…pic.twitter.com/vkW0lPkVFj
ಹಿರಿಯ ನಾಯಕ, ಮಾಜಿ ಸಚಿವ, ರಾಜಕೀಯ ಮುತ್ಸದ್ಧಿ ಶ್ರೀ ಡಿ.ಬಿ.ಚಂದ್ರೇಗೌಡ ಅವರು ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಛಾಪನ್ನು ಮೂಡಿಸಿದ್ದ ಅವರು ಶಾಸಕರಾಗಿ, ಸಂಸದರಾಗಿ, ರಾಜ್ಯಸಭಾ ಸದಸ್ಯರಾಗಿ, ಕಾನೂನು ಸಚಿವರಾಗಿ ಅಪಾರ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಅವರ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − three =
Remember me
