ಬೆಂಗಳೂರು:ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ರೆಡ್​ ಕಾರ್ನರ್​ ನೋಟಿಸ್​ ಜಾರಿ ಮಾಡಲಾಗಿದೆ. ಇನ್ನೂ ಪ್ರಕರಣದ ಕುರಿತು ರಾಜಕೀಯ ಪಕ್ಷಗಳ ನಾಯಕರು ಕಿಡಿಕಾರಿದ್ದು, ಇದಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಹೊಸ ಬಾಂಬ್​ ಒಂದನ್ನು ಸಿಡಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶಿವರಾಮೇಗೌಡ, ಮಗ ಇಷ್ಟೆಲ್ಲಾ ಮಾಡಿದರು ಅವರ ಅಪ್ಪ-ಅಮ್ಮ ಏನ್​ ಕತ್ತೆ ಕಾಯ್ತಿದ್ರಾ. ರೇವಣ್ಣ ಒಳ್ಳೆ ನಡವಳಿಕೆ ಇರುವ ವ್ಯಕ್ತಿಯಲ್ಲ. ಈ ಹಿಂದೆ ಇಂಗ್ಲೆಂಡ್​ನಲ್ಲಿ ನನ್ನ ಜೊತೆ ಬಂದಾಗ ಅವರು ಸಿಕ್ಕಿಬಿದ್ದಿದ್ದರು. ಇಂದು ಹಾಸದನಲ್ಲಿ ನಡೆದಿರುವ ಘಟನೆಯೇ ಅಂದು ಇಂಗ್ಲೆಂಡ್​ನಲ್ಲಿ ನಡೆದಿತ್ತು ಎಂದು ಆರೋಪಿಸಿದ್ದಾರೆ.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್​ಐಟಿ ರೆಡ್​ ಕಾರ್ನರ್​ ನೋಟಿಸ್​ ಜಾರಿ ಮಾಡಿದೆ. ಲೈಂಗಿಕ ಕಿರುಕುಳದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಶಾಸಕ ಎಚ್.ಡಿ. ರೇವಣ್ಣ ಜಾಮೀನು ಕೋರಿ ಕೋರ್ಟ್​ ಮೊರೆ ಹೋಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − two =
Remember me
