ಬೆಂಗಳೂರು:ಇಂದು ಇಬ್ಬರು ಪ್ರಧಾನಿ ಪಟ್ಟಕ್ಕೆ ಸಂಬಂಧ ಪಟ್ಟ ವ್ಯಕ್ತಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅತ್ತಕಡೆ ಪ್ರಧಾನಿ ಮೋದಿ ತಮ್ಮ ಪ್ರಹ್ಲಾದ್​ ಮೋದಿ ಕಿಡ್ನಿ ವೈಫಲ್ಯದಿಂದ ಚೆನ್ನೈ ಆಸ್ಪತ್ರೆಗೆ ದಾಖಲಾದರೆ ಇತ್ತ ಮಾಜಿ ಪ್ರಧಾನಿ ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದನ್ನೂ ಓದಿ:ಈಗಿನ ಪ್ರಧಾನಿ ನರೇಂದ್ರ ಮೋದಿ ಮತ್ತು ಎಚ್.ಡಿ. ದೇವೇಗೌಡರ ಸಂಬಂಧ ಹೇಗಿದೆ!?
ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡ ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಬೆಳಗ್ಗೆ 10.30ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದು, ಕಾಲುನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವೇಗೌಡರು ಆಸ್ಪತ್ರೆಗೆ ತೆರಳುವ ಬಗ್ಗೆ ಬೆಳಿಗ್ಗೆ ಜೆಡಿಎಸ್ ನಾಯಕ ಎಚ್​ಡಿ ಕುಮಾರಸ್ವಾಮಿ ಮಾಹಿತಿ ನೀಡಿದ್ದರು.
ದೇವೇಗೌಡರು ಇಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದಾರೆ. ಆಸ್ಪತ್ರೆಯಿಂದ ಬಂದ ಬಳಿಕ ಹಾಸನ ಕ್ಷೇತ್ರದ ಜೆಡಿಎಸ್​ ಟಿಕೆಟ್ ನೀಡಿಕೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದರು. ದೇವೇಗೌಡರ ಆರೋಗ್ಯ ಸ್ಥಿತಿ ಅಷ್ಟೊಂದು ಉತ್ತಮವಾಗಿಲ್ಲ ಎಂದು ಎರಡು ದಿನಗಳ ಹಿಂದೆಯೇ ಕುಮಾರಸ್ವಾಮಿ ತಿಳಿಸಿದ್ದರು.
ದೇವೇಗೌಡರು ಆಸ್ಪತ್ರೆ ದಾಖಲಾಗಿರುವ ವಿಚಾರವಾಗಿ ಮಾತನಾಡಿರುವ ಸಿಎಂ ಇಬ್ರಾಹಿಂ ‘ಅವರಿಗೆ ಕಾಲು, ಮಂಡಿ ನೋವಿದೆ, ಮನೆಯಲ್ಲಿ ರೆಸ್ಟ್ ಸಿಗುತ್ತಿಲ್ಲ. ಅವರು ನಾನು ಪ್ರವಾಸಕ್ಕೆ ಹೋಗಲೇ ಬೇಕು ಎನ್ನುತ್ತಿದ್ದಾರೆ. ಅವರನ್ನು ಭೇಟಿಯಾಗಲು ಜನ ಬಂದು ಹೋಗುವವರು ಹೆಚ್ಚಾಗಿದ್ದಾರೆ. ಅವರು ಆಸ್ಪತ್ರೆಯಲ್ಲಿ ಇದ್ದರೆ ಒಳ್ಳೆಯದು. ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಬಹುದು ಅಂತ ಅಷ್ಟೆ.
ಇದನ್ನೂ ಓದಿ:ಮೋದಿ-ದೇವೇಗೌಡ ಭೇಟಿ; ನಾನು ಮತ್ತೆ ಹೋರಾಟ ಮಾಡೋ ಹಾಗೆ ಮಾಡಬೇಡಿ ಎಂದು ಮೋದಿಗೆ ಹೇಳಿದ ಗೌಡರು!
ನಾನು ಪ್ರವಾಸದಲ್ಲಿ ಇದ್ದೇನೆ, ಸಂಪೂರ್ಣ ಮಾಹಿತಿ ತೆಗೆದುಕೊಳ್ಳಲು ಆಗಿಲ್ಲ. ಆಸ್ಪತ್ರೆ ವರದಿ ನೋಡಿದ ಬಳಿಕ ಮಾತನಾಡುತ್ತೇನೆ ಎಂದು ಚಿಕ್ಕಮಗಳೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 19 =
Remember me
