ಬೆಂಗಳೂರು :ಬಿಜೆಪಿ ಸರ್ಕಾರ ಗೋ ಹತ್ಯೆ ನಿಷೇಧ ಮಸೂದೆಯನ್ನು ವಿಧಾನ ಮಂಡಲದಲ್ಲಿ ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ-ಕಲ್ಲೋಲ ಮಾಡಲು ಹೊರಟಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಿಡಿ ಕಾರಿದ್ದಾರೆ.
ರಾಜ್ಯದಲ್ಲಿ ಗೋ ಹತ್ಯೆ ನಿಷೇಧದ ಬಗ್ಗೆ 1964ರ ಕಾಯ್ದೆ ಜಾರಿಯಲ್ಲಿದೆ. ಈ ಕಾಯ್ದೆ ನಿಬಂಧನೆ ಉಲ್ಲಂಘಿಸಿದವರ ಮೇಲೆ ವಿಧಿಸಬಹುದಾದ ದಂಡ, ಜುಲ್ಮಾನೆ ಮತ್ತು ಇತರೆ ದಂಡನೆ ಬಗ್ಗೆ ಅವಕಾಶವಿದೆ. 2010ರಲ್ಲೂ ಕಾಯ್ದೆ ಬದಲಾವಣೆ ಮಾಡಲು ಆಗಿನ ಬಿಜೆಪಿ ಸರ್ಕಾರ ಯತ್ನಿಸಿತ್ತು. ಜೆಡಿಎಸ್ ಮತ್ತು ಕಾಂಗ್ರೆಸ್ ಆಗಲೂ ಜತೆಯಾಗಿ ವಿರೋಧಿಸಿದ್ದವು. ತಾವು ರಾಜ್ಯಪಾಲರು ಮತ್ತು ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗೆ ಒಪ್ಪಿಗೆ ನೀಡದಂತೆ ಒತ್ತಾಯಿಸಿದ ಬಳಿಕ ಸ್ಪಷ್ಟನೆ ಕೇಳಿದ್ದರು.
ಇದನ್ನೂ ಓದಿ:ನಿತ್ಯಭವಿಷ್ಯ| ಈ ರಾಶಿಯ ಪ್ರೇಮಿಗಳಲ್ಲಿ ಇಂದು ವಿರಸ ಸಂಭವಿಸಬಹುದು..
ಆ ಬಳಿಕ ಸರ್ಕಾರದ ನೇತೃತ್ವ ಬದಲಾಗಿದ್ದರಿಂದ ಈ ಮಸೂದೆಯನ್ನು ವಾಪಸ್ ಪಡೆದು ನಿಷ್ಕ್ರಿಯಗೊಳಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿ ಸರ್ಕಾರ ಮತ್ತೊಮ್ಮೆ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲು ಮುಂದಾಗಿದೆ. ಈ ವಿಧೇಯಕವನ್ನು ಜಾತ್ಯತೀತ ಜನತಾದಳ ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ದೇವೇಗೌಡ ಹೇಳಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
FACT CHECK | ಪ್ರತಿಭಟನಾ ನಿರತ ರೈತರನ್ನು ಉದ್ದೇಶಿಸಿ ರಾಜನಾಥ್ ಸಿಂಗ್ ಮಾತನಾಡಿದ್ರಾ- ಏನೀ ವಿಡಿಯೋದ ಮರ್ಮ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 17 =
Remember me
