ಬೆಂಗಳೂರು:ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆಯ ಕಣದ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕರ್ನಾಟಕದಲ್ಲಿ ಮೊದಲ ಹಂತದ ಮತದಾನಕ್ಕೆ ಎರಡು ದಿನಗಳು ಬಾಕಿ ಉಳಿದಿದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ. ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿಗಳ ಪರ ಇಳಿವಯಸ್ಸಿನಲ್ಲೂ ಬಿರುಸಿನ ಪ್ರಚಾರ ನಡೆಸುತ್ತಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಲವು ವಿಚಾರಗಳ ಕುರಿತು ಮಾತನಾಡಿದ್ದಾರೆ.
ಈ ಕುರಿತು ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಹಾಸನದಲ್ಲಿ ಮೈತ್ರಿಗೆ ಬಿಜೆಪಿಯ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೆಲವರು ನಮಗೆ ಸಹಕಾರ ನೀಡುತ್ತಿಲ್ಲ ಹಾಗೆಂದ ಮಾತ್ರಕ್ಕೆ ನಾವು ಹಾಸನದಲ್ಲಿ ಗೆಲ್ಲುತ್ತೇವೆ. ಮಂಡ್ಯದಲ್ಲೂ ಸುಮಲತಾ ಅವರು ಕುಮಾರಸ್ವಾಮಿಗೆ ಸಹಾಯ ಮಾಡಿಲ್ಲ. ಅದಾಗ್ಯೂ ಈ ಎರಡು ಕ್ಷೇತ್ರಗಳಲ್ಲಿಯೂ ಮೈತ್ರಿ ಅಭ್ಯರ್ಥಿಗಳು ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಮೈತ್ರಿಯಲ್ಲಿ ಈವರೆಗೂ ಒಮ್ಮತ್ತ ಮೂಡಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಈತ ಯಾವುದಕ್ಕೂ ಪ್ರಯೋಜನವಿಲ್ಲದವ; ಸ್ಟಾರ್​ ಆಟಗಾರನ ಬಗ್ಗೆ ಸೆಹ್ವಾಗ್​ ಹೀಗಂದಿದ್ಯಾಕೆ?
ನಾವು ಕಾವೇರಿ ಭಾಗದ ಎಲ್ಲಾ ಭಾಗದಲ್ಲೂ ಪ್ರವಾಸ ಮಾಡಿದ್ಧೇನೆ. ಮೈತ್ರಿಗೆ ಪೂರಕವಾದ ವಾತಾವರಣ ಇರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಪ್ರಧಾನಿ ಮೋದಿ ಅವರ ಜೊತೆ ಎರಡು ಸಾರ್ವಜನಿಕ ಸಭೆಗಳಲ್ಲಿ ಭಾಗಿಯಾಗಿದ್ಧೇನೆ. ಎರಡನೇ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿಯೂ ಪ್ರವಾಸ ಮಾಡುತ್ತೇನೆ. ನಾವು 28ಕ್ಕೆ 28 ಸ್ಥಾನಗಳಲ್ಲಿ ಜಯ ಗಳಿಸುವುದು ನಿಶ್ಚಿತ ಎಂದು ಹೇಳಿದ್ದಾರೆ.
ಕಳೆದ ಎರಡು ದಿನಗಳಿಂದ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಸಂಪತ್ತು ಹಂಚಿಕೆ ಬಗ್ಗೆ ದೊಡ್ಡ ಚರ್ಚೆ ನಡೆದಿದೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹಲವು ವಿಚಾರ ಹೇಳಿದೆ. ಅವರು ಹೇಗಾದರೂ ಸರಿ, ಅಧಿಕಾರಿಕ್ಕೆ ಬರಬೇಕು ಎಂದು ಹೊರಟಿದ್ದಾರೆ. ಸಂಪತ್ತಿನ ಸರ್ವೇ ಹಾಗೂ ಹಂಚಿಕೆ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಕಾಂಗ್ರೆಸ್​ನವರು ಎಷ್ಟೇ ದುಡ್ಡಿನ ಮಳೆ ಸುರಿಸಿದರೂ ಗೆಲ್ಲುವುದು ನಾವೇ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಭವಿಷ್ಯ ನುಡಿದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 20 =
Remember me
