ಬೆಂಗಳೂರು: ರಾಜ್ಯದಲ್ಲಿ ಕರೊನಾ ವೈರಸ್​ ಸೋಂಕಿತರ ಪರೀಕ್ಷೆ ಕಾರ್ಯ ವಿಳಂಬವಾಗಿ ನಡೆಯುತ್ತಿದ್ದು, ಕೂಡಲೇ ಅಧಿಕ ಮಂದಿಯನ್ನು ಪರೀಕ್ಷೆಗೆ ಒಳಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದರು.
ರಾಜ್ಯ ಸರ್ಕಾರ ಕರೊನಾ ಸೋಂಕು ನಿಯಂತ್ರಣಕ್ಕಾಗಿ ಕೈಗೊಂಡಿರುವ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ಸೋಂಕಿತರ ಪರೀಕ್ಷೆಗೆ ಕೇರಳ ಮಾದರಿ ಅನುಸರಿಸುವುದು ಸೂಕ್ತ. ಕೇರಳದಲ್ಲಿ ವಿದೇಶದಿಂದ ಬಂದವರ ಸಂಖ್ಯೆ ಹೆಚ್ಚಾಗಿತ್ತು. ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಆದರೆ ನಮ್ಮಲ್ಲಿ ದಿನೇ, ದಿನೇ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದೆ. ಈ ಬಗ್ಗೆ ಅಧ್ಯಯನ ನಡೆಸಬೇಕು ಎಂದು ಅವರು ಒತ್ತಾಯಿಸಿದರು.
ರಾಜ್ಯದಲ್ಲಿ ಕರೊನಾ ಸೋಂಕಿತ ವ್ಯಕ್ತಿ ಪತ್ತೆಯಾದ ಕೂಡಲೇ ವಿಧಾನ ಮಂಡಲ ಅಧಿವೇಶನ ಮುಂದೂಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು. ಆದರೆ ಸರ್ಕಾರ ವಿಳಂಬ ಮಾಡಿತು. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದೆ ಎಂದರು.
ಸೋಂಕಿತರನ್ನು ಪತ್ತೆ ಮಾಡುವ ಕಿಟ್​ಗಳನ್ನು ರಾಜ್ಯಕ್ಕೆ ಸರಬರಾಜು ಆಗುತ್ತಿಲ್ಲ ಎನ್ನುವ ಮಾಹಿತಿ ಇದೆ. ಕೂಡಲೇ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದರು.
ಆರೋಗ್ಯ, ಸಹಕಾರ, ಕಂದಾಯ, ಗೃಹ, ಆಹಾರ, ಹಣಕಾಸು, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದರು. ಅಲ್ಲದೆ 51 ಪ್ರಶ್ನೆಗಳನ್ನು ಕೇಳಿ ಅದಕ್ಕೆ ಉತ್ತರಿಸುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾಹಿತಿ ನೀಡಿದರು.
ಸೌಂದರ್ಯ ಇಲ್ಲದ 16 ವರ್ಷ; ಗರ್ಭಿಣಿ ಆಗಿದ್ದಕ್ಕೆ ಸಿನಿಮಾ ಕೈಬಿಡುವ ನಿರ್ಧಾರಕ್ಕೆ ಬಂದಿದ್ದರಾ ನಟಿ ಸೌಂದರ್ಯ? ಹಾಗೆ ಹೇಳಿ ಮಾರನೇ ದಿನವೇ ನಡೆಯಿತೊಂದು ದುರಂತ!!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + nineteen =
Remember me
