ಬೆಳಗಾವಿ:ವಿಲೇಜ್ ಅಕೌಂಟೆಂಟ್ ಎಂದು ಚಿರಪರಿಚಿತವಾಗಿದ್ದ ಹುದ್ದೆಯನ್ನು ಗ್ರಾಮ ಆಡಳಿತಾಧಿಕಾರಿ ಎಂದು ಮರು ನಾಮಕರಣ ಮಾಡಿದ್ದ ಸರ್ಕಾರ ಇದೀಗ ಮತ್ತೊಂದು ಮಹತ್ವದ ತೀರ್ಮಾನ ಮಾಡಿದೆ. ಇನ್ನು ಮುಂದೆ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ರಾಜ್ಯಮಟ್ಟದಲ್ಲಿ ಸಾಮಾನ್ಯ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಮೆರಿಟ್ ಆಧಾರದಲ್ಲಿ ನೇಮಿಸಲಿದೆ. ಪ್ರಸ್ತುತ 9 ಸಾವಿರ ಗ್ರಾಮ ಆಡಳಿತಾಧಿಕಾರಿಗಳಿದ್ದು, ಇನ್ನೂ ಒಂದೂವರೆ ಸಾವಿರದಷ್ಟು ಹುದ್ದೆ ಭರ್ತಿ ಆಗತ್ಯವಿದೆ. ಮೊದಲ ಹಂತದಲ್ಲಿ 750 ಹುದ್ದೆ ಭರ್ತಿಗೆ ಕಂದಾಯ ಇಲಾಖೆ ಬಯಸಿದೆ. ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವ ಪ್ರಕ್ರಿಯೆ ನಡೆದಿದೆ.
ನೇಮಕ ಹೇಗೆ?:ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್​ಸಿ)ಪೈಕಿ ಒಂದು ಸಂಸ್ಥೆಯ ಮೂಲಕ ಪರೀಕ್ಷೆ ನಡೆಸಲಾಗುತ್ತದೆ. ನಂತರ ಜಿಲ್ಲಾವಾರು ನೇಮಕ ಮಾಡಲಾಗುತ್ತದೆ. ಸದ್ಯಕ್ಕೆ ಜಿಲ್ಲಾಧಿಕಾರಿ ಹಂತದಲ್ಲಿ ಪಿಯುಸಿ ಅಂಕಗಳ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತಿತ್ತು.
ಬಹುಲಾಭ:ಪಿಯುಸಿ ಅಂಕದ ಆಧಾರದಲ್ಲಿ ನೇಮಕದ ಬದಲು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡುವುದರಿಂದ ಅಭ್ಯರ್ಥಿ ಪೂರ್ವಭಾವಿಯಾಗಿ ಸಾಕಷ್ಟು ತಯಾರಿ ನಡೆಸುತ್ತಾನೆ. ಪಂಚಾಯತ್ ರಾಜ್ ವ್ಯವಸ್ಥೆ, ಗ್ರಾಮ ಪಂಚಾಯಿತಿ ಕಾರ್ಯನಿರ್ವಹಣೆ, ಸರ್ಕಾರಿ ಯೋಜನೆ ಮತ್ತು ಅನುಷ್ಠಾನದ ಬಗ್ಗೆ ಅರಿತುಕೊಂಡು ಪರೀಕ್ಷೆ ಎದುರಿಸುವ ಕಾರಣ ಸರ್ಕಾರಕ್ಕೆ ದೊಡ್ಡ ಲಾಭವಾಗಲಿದೆ. ಹಾಗೆಯೇ, ಕಾರ್ಯನಿರ್ವಹಣೆಯ ವಸ್ತುಸ್ಥಿತಿಯನ್ನು ಅರಿತು ಈ ಹುದ್ದೆಗೆ ಅರ್ಜಿ ಹಾಕಿ ಸಿದ್ಧವಾಗುವುದರಿಂದ ಆಯ್ಕೆ ಮೊದಲು ತಕ್ಕಮಟ್ಟಿನ ಸಾಮರ್ಥ್ಯ ಗಳಿಸಿಕೊಂಡಿರುತ್ತಾನೆ.
ರ‍್ಯಾಂಕಿಂಗ್ ಆಧರಿಸಿ ಆಯ್ಕೆ:ಪರೀಕ್ಷೆ ಬಳಿಕ ಅಭ್ಯರ್ಥಿಗಳ ರ‍್ಯಾಂಕಿಂಗ್ ಬಿಡುಗಡೆಯಾಗಲಿದೆ. ನಂತರ ಜಿಲ್ಲಾವಾರು ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದವರು ಕೌನ್ಸೆಲಿಂಗ್ ಮೂಲಕ ಸ್ಥಳ ನಿಯೋಜನೆಗೊಳ್ಳುವರು. ನಿಗದಿತ ಮೀಸಲಾತಿಯಂತೆ ಹುದ್ದೆಗಳನ್ನು ಗುರುತಿಸಿ, ಆ ಪ್ರಕಾರ ಹುದ್ದೆ ಭರ್ತಿಯಾಗಲಿವೆ. ಕಳೆದ ವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು, ತಾತ್ವಿಕ ಅನುಮೋದನೆಯನ್ನೂ ನೀಡಲಾಗಿದೆ. ಮೊದಲ ಹಂತದಲ್ಲಿ 750 ಹುದ್ದೆಗಳ ಭರ್ತಿ ಕಾರ್ಯ ಇಷ್ಟರಲ್ಲೇ ಆರಂಭಿಸಲಾಗುತ್ತಿದೆ ಎಂದು ಕಂದಾಯ ಇಲಾಖೆ ಹಿರಿಯ ಅಧಿಕಾರಿ ವಿಜಯವಾಣಿಗೆ ತಿಳಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗ್ರಾಮದ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸಿದರೆ, ಗ್ರಾಮ ಆಡಳಿತಾಧಿಕಾರಿ ಆಡಳಿತಾತ್ಮಕ ಕಾರ್ಯಗಳಲ್ಲಿ ಪ್ರಮುಖ ಜವಾಬ್ದಾರಿ ಹೊಂದಿರುತ್ತಾನೆ. ಜವಾಬ್ದಾರಿಯ ಬಗ್ಗೆ ಅರಿವು ಮೂಡಿಸಲು ಈ ಪರೀಕ್ಷಾ ವ್ಯವಸ್ಥೆ ನೆರವಾಗಲಿದೆ ಮತ್ತು ಪಾರದರ್ಶಕ ಇರಲಿದೆ ಎಂದು ವಿವರಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
