ಬೆಂಗಳೂರು:ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಕೇರಳದಲ್ಲಿ ಬಿಜೆಪಿ ಭಾರೀ ಬೆಳವಣಿಗೆ! ಭವಿಷ್ಯ ನುಡಿದ ಮತಗಟ್ಟೆ ಸಮೀಕ್ಷೆಗಳು, ಯಾರಿಗೆ ಎಷ್ಟು ಸೀಟು? ಇಲ್ಲಿದೆ ವಿವರ
ಬಹುತೇಕ ಸಮೀಕ್ಷೆಗಳು ಕರ್ನಾಟಕದಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿಕೂಟ 20+ ಸ್ಥಾನ ಗೆಲ್ಲಬಹುದು ಹಾಗೂ ಕಾಂಗ್ರೆಸ್​ ಗರಿಷ್ಠ 8 ಸ್ಥಾನಗಳು ಸಿಗಬಹುದು ಎಂದು ಭವಿಷ್ಯ ನುಡಿದ ಬೆನ್ನಲ್ಲೇ ಶಿವಕುಮಾರ್‌ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಯಾವುದೇ ಎಕ್ಸಿಟ್ ಪೋಲ್ ಬಗ್ಗೆ ನಂಬಿಕೆ ಇಲ್ಲ ಎಂದು ನಾನು ಮೊದಲೇ ಹೇಳೀದ್ದೇನೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಡಬಲ್‌ ಡಿಜಿಟ್‌ ದಾಟುತ್ತದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ದೀದಿ ಆಟಕ್ಕೆ ಬೀಳುತ್ತಾ ಬ್ರೇಕ್! ಎಕ್ಸಿಟ್ ಪೋಲ್ ಸಮೀಕ್ಷೆಯೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + two =
Remember me
